Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಮುಂಬೈನಲ್ಲಿ ಒಟ್ಟಾದ ಡೆಲ್ಲಿ ಕ್ಯಾಪಿಟಲ್ಸ್‌ನ ಆರ್ ಅಶ್ವಿನ್, ಹೇಟ್ಮೇರ್, ಅಕ್ಷರ್, ಕ್ರಿಸ್ ವೋಕ್ಸ್

Delhi Capitals R Ashwin, Shimron Hetmyer, Axar Patel, Chris Woakes assemble in Mumbai

ಐಪಿಎಲ್‌ನ ಆವೃತ್ತಿಗೆ ಈಗ ದಿನಗಣನೆ ಆರಂಭವಾಗಿದ್ದು ಎಲ್ಲಾ ತಂಡಗಳ ಆಟಗಾರರು ತಮ್ಮ ತಮ್ಮ ತಂಡಗಳನ್ನು ಸೇರಿಕೊಳ್ಳುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಲ ಆಟಗಾರರು ಮುಂಬೈನಲ್ಲಿ ಜೊತೆಯಾಗಿದ್ದಾರೆ. ಅನುಭವಿ ಆಟಗಾರ ಆರ್ ಅಶ್ವಿನ್ ಸಹಿತ, ಅಕ್ಷರ್ ಪಟೇಲ್, ಕ್ರಿಸ್ ವೋಕ್ಸ್, ಶಿಮ್ರಾನ್ ಹೇಟ್ಮೇರ್ ಸೋಮವಾರ ಮುಂಬೈನಲ್ಲಿ ತಮ್ಮ ಹೋಟೆಲ್‌ನಲ್ಲಿ ಸೇರಿಕೊಂಡಿದ್ದಾರೆ.

ಅಕ್ಷರ್ ಪಟೇಲ್ ಹಾಗೂ ಆರ್ ಅಶ್ವಿನ್ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡು ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು. ಈಗ ಈ ಜೋಡಿ ಐಪಿಎಲ್‌ನಲ್ಲಿಯೂ ಒಂದೇ ತಂಡದ ಪರವಾಗಿ ಕಣಕ್ಕಿಳಿಯಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿ ತಂಡದ ನಾಯಕ ಶ್ರೇಯಸ್ ಐಯ್ಯರ್ ಅವರ ಸೇವೆಯಿಂದ ವಂಚಿತವಾಗಿಲಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಐಯ್ಯರ್ ಫೀಲ್ಡಿಂಗ್ ವೇಳೆ ಭುಜದ ನೋವಿಗೆ ತುತ್ತಾಗಿದ್ದರು. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿರುವ ಕಾರಣ ಈ ಬಾರಿಯ ಸಂಪೂರ್ಣ ಐಪಿಎಲ್‌ನಿಂದ ಐಯ್ಯರ್ ಹೊರಗುಳಿಯಲಿದ್ದಾರೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬರುವ ಐಪಿಎಲ್ ಆವೃತ್ತಿಯಲ್ಲಿ ಯಾವ ಆಟಗಾರ ಮುನ್ನಡೆಸಲಿದ್ದಾರೆ ಎಂಬುದನ್ನು ಇನ್ನೂ ಘೋಷಣೆ ಮಾಡಿಲ್ಲ. ಮೂಲಗಳ ಪ್ರಕಾರ ರಿಷಭ್ ಪಂತ್ ಅವರನ್ನು ನಾಯಕರನ್ನಾಗಿ ಮಾಡಲು ಡೆಲ್ಲಿ ಮ್ಯಾನೇಜ್‌ಮೆಂಟ್ ಉತ್ಸುಕವಾಗಿದೆ ಎಂಬ ವರದಿಗಳು ಬಂದಿದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಇನ್ನೂ ತೆಗೆದುಕೊಂಡಿಲ್ಲ.

ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ತನ್ನ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದ್ದು ಏಪ್ರಿಲ್ 10ರಂದು ಈ ಪಂದ್ಯ ನಡೆಯಲಿದೆ. ಕಳೆದ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಹಂತಕ್ಕೆ ತಲುಪಿ ರನ್ನರ್‌ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಈ ಬಾರಿ ಡೆಲ್ಲಿ ಪ್ರದರ್ಶನದ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ.

Story first published: Monday, March 29, 2021, 15:52 [IST]
Other articles published on Mar 29, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+