WPL 2025: ರೋಚಕ ಪಂದ್ಯ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್
ಮೂರನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಮೋಘ ಜಯ ದಾಖಲಿಸಿದೆ. ತಾನಾಡಿದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 2 ವಿಕೆಟ್‌ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಗೆಲುವಿನ ಖಾತೆ ಓಪನ್ ಮಾಡಿದೆ. ಮುಂಬೈ ಇಂಡಿಯನ್ಸ್ ಮೊದಲ ಗೆಲುವಿನ ಆಸೆ ನುಚ್ಚುನೂರಾಗಿದೆ. ಕೊನೆಯ ಓವರ್ ವರೆಗೂ ರೋಚಕತೆ ಹುಟ್ಟಿಸಿದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಬ್ಬರಿಸಿದೆ.
ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಮುಂಬೈ ಇಂಡಿಯನ್ಸ್ ತಂಡದ್ದಾಗಿತ್ತು. ಈ ವೇಳೆ ಹರ್ಮನ್ ಪ್ರೀತ್ ಕೌರ್ ಪಡೆ 19.1 ಓವರ್‌ಗೆ 164 ರನ್‌ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 165 ರನ್ ಸಿಡಿಸಿ ಜಯ ಸಾಧಿಸಿದೆ.

ಮೂರನೇ ವಿಕೆಟ್ ಉತ್ತಮ ಜೊತೆಯಾಟ
ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡದ ಆರಂಭ ಕಳಪೆಯಾಗಿತ್ತು. ತಂಡದ ಮೊತ್ತ 32 ರನ್‌ಗಳಾಗಿದ್ದಾಗ ತಂಡದ ಇಬ್ಬರೂ ಆರಂಭಿಕರು ಪೆವಿಲಿಯನ್ ಹಾದಿ ಹಿಡಿದರು. ಮೂರನೇ ವಿಕೆಟ್‌ಗೆ ನ್ಯಾಟ್ ಸ್ಕೀವರ್ ಬ್ರಂಟ್ ಹಾಗೂ ನಾಯಕಿ ಹರ್ಮನ್ ಪ್ರೀತ್ ಕೌರ್ ಮೂರನೇ ವಿಕೆಟ್‌ಗೆ ಅಮೋಘ ಜೊತಯಾಟದ ಕಾಣಿಕೆ ನೀಡಿದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಡೆಲ್ಲಿ ತಂಡದ ಬೌಲರ್‌ಗಳು ವಿಫಲರಾದರು. ಈ ವೇಳೆ ಈ ಜೋಡಿ ಮೂರನೇ ವಿಕೆಟ್‌ಗೆ 40 ಎಸೆತಗಳಲ್ಲಿ 73 ರನ್ ಸಿಡಿಸಿತು.
ಮುಂಬೈ ತಂಡದ ಪರ ಹರ್ಮನ್ ಪ್ರೀತ್ ಕೌರ್ ಸೊಗಸಾದ ಬ್ಯಾಟಿಂಗ್ ನಡೆಸಿದರು. ಇವರು 22 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 42 ರನ್ ಸಿಡಿಸಿ ಔಟ್ ಆದರು. ನ್ಯಾಟ್ ಸ್ಕೀವರ್ ಬ್ರಂಟ್ ಅಬ್ಬರದ ಬ್ಯಾಟಿಂಗ್ ನಡೆಸಿದರು. ಇವರು 59 ಎಸೆತಗಳಲ್ಲಿ 13 ಬೌಂಡರಿ ನೆರವಿನಿಂದ ಅಜೇಯ 80 ರನ್ ಸಿಡಿಸಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು.

ಡೆಲ್ಲಿ ಪರ ಅನ್ನಾಬೆಲ್ ಸದರ್ಲ್ಯಾಂಡ್ 3, ಶಿಖಾ ಪಾಂಡ್ಯ 2 ವಿಕೆಟ್ ಕಬಳಿಸಿದರು.
ಶಫಾಲಿ ಅಬ್ಬರ
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ಶಫಾಲಿ ವರ್ಮಾ ಹಾಗೂ ಅನುಭವಿ ಆಟಗಾರ್ತಿ ಹಾಗೂ ಮೆಗ್ ಲ್ಯಾನಿಂಗ್ (15) ತಂಡಕ್ಕೆ 60 ರನ್‌ಗಳ ಮಹತ್ವದ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಶಫಾಲಿ ವರ್ಮಾ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಶಫಾಲಿ ಜಸ್ಟ್ 18 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಸಹಾಯದಿಂದ 43 ರನ್ ಸಿಡಿಸಿದರು.
ಅಂಡರ್ 19 ಟಿ20 ವಿಶ್ವಕಪ್ ವಿಜೇತ ತಂಡದ ನಾಯಕಿ ಕನ್ನಡತಿ ನಿಕ್ಕಿ ಪ್ರಸಾದ ಸೊಗಸಾದ ಬ್ಯಾಟಿಂಗ್ ಪ್ರದರ್ಶನ ನಡೆಸಿದರು. ಇವರು 33 ಎಸೆತಗಳಲ್ಲಿ 4 ಬೌಂಡರಿ ನೆರವಿನಿಂದ 35 ರನ್ ಸಿಡಿಸಿ ಔಟ್ ಆದರು. ಸಾರಾ ಬ್ರೈಸ್ 21 ರನ್ ಸಿಡಿಸಿದರು. ಕೊನೆಯ ಎಸೆತದಲ್ಲಿ ಅಗತ್ಯ 2 ರನ್‌ಗಳನ್ನು ಅರುಂಧತಿ ಬಾರಿಸಿ ತಂಡದ ಜಯದಲ್ಲಿ ಮಿಂಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications