WPL 2025: ಮುಂಬೈ ಮಣಿಸಿದ ಡೆಲ್ಲಿಗೆ ಅಗ್ರ ಸ್ಥಾನ
ಮೂರನೇ ಆವೃತ್ತಿಯ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಮೋಘ ಪ್ರದರ್ಶನ ಮುಂದುವರೆಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿತು. ಡೆಲ್ಲಿ ತಂಡ 6 ಪಂದ್ಯಗಳಲ್ಲಿ 4 ಜಯ, 2 ಸೋಲು ಕಂಡಿದ್ದು 8 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದೆ.
ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 123 ರನ್ ಸೇರಿಸಿತು. ಡೆಲ್ಲಿ 14.3 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 124 ರನ್ ಸೇರಿಸಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಸೋಲು ಕಂಡರೂ ಮುಂಬೈ ಇಂಡಿಯನ್ಸ್ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನ ಭಧ್ರ ಪಡಿಸಿಕೊಂಡಿದೆ. ಆಡಿದ 5 ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ 6 ಅಂಕಗಳನ್ನು ಕಲೆ ಹಾಕಿದೆ.

ಮುಂಬೈ ನೀಡಿದ್ದ ಸ್ಪರ್ಧಾತ್ಮಕ ಮೊತ್ತವನ್ನು ಹಿಂಬಾಲಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಶೆಫಾಲಿ ವರ್ಮಾ ಹಾಗೂ ಮೆಗ್ ಲ್ಯಾನಿಂಗ್ ಜೋಡಿ ತಂಡಕ್ಕೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಪವರ್ ಪ್ಲೇನಲ್ಲಿ ಪವರ್ ಫುಲ್ ಆಟವನ್ನು ನೀಡಿದ ಈ ಜೋಡಿ ಡೆಲ್ಲಿ ಕ್ಯಾಂಪ್‌ನಲ್ಲಿ ಮಂದಹಾಸ ಮೂಡಿಸಿತು. ಈ ಜೊಡಿ ಮೊದಲ ವಿಕೆಟ್‌ಗೆ 9.5 ಓವರ್‌ಗಳಲ್ಲಿ 85 ರನ್ ಸೇರಿಸಿತು. ಮುಂಬೈ ತಂಡದ ವೇಗಿಗಳು ಹಾಗೂ ಸ್ಪಿನ್ ಬೌಲರ್‌ಗಳ ತಂತ್ರವನ್ನು ಬುಡಮೇಲು ಮಾಡಿದ ಈ ಜೋಡಿ ಅಬ್ಬರಿಸಿತು. ಮೊದಲ ವಿಕೆಟ್‌ಗೆ ಈ ಜೊಡಿ 9.5 ಓವರ್‌ಗಳಲ್ಲಿ 85 ರನ್ ಸೇರಿಸಿತು.
ಲ್ಯಾನಿಂಗ್ ಅಬ್ಬರ
ಆರಂಭಿಕರಾದ ಶೆಫಾಲಿ ವರ್ಮಾ 28 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 43 ರನ್ ಸಿಡಿಸಿ ಔಟ್ ಆದರು. ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಜೆಮಿಮಾ ರೋಡ್ರಿಗಸ್ ಜೊತೆಗೂಡಿ ತಂಡಕ್ಕೆ ಅಗತ್ಯವಿದ್ದ ರನ್‌ಗಳನ್ನು ಕಲೆ ಹಾಕಿ ಅಬ್ಬರಿಸಿತು. ನಾಯಕಿ ಲ್ಯಾನಿಂಗ್ 49 ಎಸೆತಗಳಲ್ಲಿ 9 ಬೌಂಡರಿ ನೆರವಿನಿಂದ ಅಜೇಯ 60 ರನ್ ಸಿಡಿಸಿ ಜಯದಲ್ಲಿ ಮಿಂಚಿದರು. ಜೆಮಿಮಾ ಅಜೇಯ 15 ರನ್ ಸಿಡಿಸಿದರು.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡದ ಆರಂಭ ಸಾಧಾರಣ ವಾಗಿತ್ತು. ಈ ಯಾಸ್ತಿಕಾ ಭಾಟಿಯಾ (11) ಹಾಗೂ ಹ್ಯಾಲಿ ಮ್ಯಾಥ್ಯೂಸ್ (22) ಜೋಡಿ 35 ರನ್ ಕಾಣಿಕೆ ನೀಡಿತು. ಭರವಸೆಯ ಆಟಗಾರ್ತಿ ನ್ಯಾಟ್ ಸ್ಕಿವರ್ ಬ್ರಂಟ್ (18), ನಾಯಕಿ ಹರ್ಮನ್ ಪ್ರೀತ್ ಕೌರ್ (22), ಅಮೆಲಿಯಾ ಕೆರ್ (17), ಅಮನಜೋತ್ ಕೌರ್ (17) ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ.
ಡೆಲ್ಲಿ ಪರ ಜೆಸ್ ಜೊನಾಸ್ಸೆನ್, ಮಿನಾ ಮಣಿ ತಲಾ ಮೂರು ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications