Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024: ಡೆಲ್ಲಿ-ಕೋಲ್ಕತ್ತಾ ನಡುವೆ ಪವರ್‌ ಫುಲ್‌ ಮ್ಯಾಚ್‌: ಟಾಸ್‌ ವರದಿ, ಆಡುವ 11ರ ಬಳಗ

ಏಪ್ರಿಲ್‌ 29, ಸೋಮವಾರ 2024ರ ಇಂಡಿಯನ್ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 47ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್‌) ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ) ಎದುರಿಸುತ್ತಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನವು ಡೆಲ್ಲಿ ಮತ್ತು ಕೋಲ್ಕತ್ತಾ ಪಂದ್ಯಕ್ಕೆ ಆತಿಥ್ಯ ವಹಿಸಿದೆ.

ಮೊದಲು ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್‌ ಪಂತ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಶ್ರೇಯಸ್‌ ಅಯ್ಯರ್‌ ನೇತೃತ್ವದ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಬೌಲಿಂಗ್‌ ಮಾಡಲಿದೆ.

Delhi Capitals vs Kolkata Knight Riders IPL 2024 Match Toss Report

ಈವರೆಗೆ ಡೆಲ್ಲಿ ಆಡಿರುವ 10 ಪಂದ್ಯಗಳಿಂದ 5 ಗೆಲುವು, 5 ಸೋಲು ಕಂಡಿದೆ. 10 ಅಂಕಗಳನ್ನು ಗಳಿಸಿರುವ ಡೆಲ್ಲಿ 6ನೇ ಸ್ಥಾನ ಪಡೆದಿದೆ. ಇನ್ನೊಂದೆಡೆ ಕೆಕೆಆರ್‌ ಆಡಿರುವ 8 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿದ್ದು, 3 ಸೋತಿದೆ. ಈ ಮೂಲಕ 10 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.

ಡಿಸಿ vs ಕೆಕೆಆರ್‌ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ :

ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಡಿಸಿ vs ಕೆಕೆಆರ್‌ ಆಡುವ 11ರ ಬಳಗ :

ಡೆಲ್ಲಿ ಕ್ಯಾಪಿಟಲ್ಸ್‌ ತಂಡ : ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್(ನಾಯಕ ಮತ್ತು ವಿ.ಕೀ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರಸಿಖ್ ದಾರ್ ಸಲಾಂ, ಲಿಜಾದ್ ವಿಲಿಯಮ್ಸ್, ಖಲೀಲ್ ಅಹ್ಮದ್

ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ : ಫಿಲಿಪ್ ಸಾಲ್ಟ್(ವಿ.ಕೀ), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್(ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

Story first published: Monday, April 29, 2024, 19:11 [IST]
Other articles published on Apr 29, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+