DC vs RR IPL 2024: ಡೆಲ್ಲಿ-ರಾಜಸ್ತಾನ ಸೆಣಸಾಟ; ಟಾಸ್ ವರದಿ, ಆಡುವ 11ರ ಬಳಗ
ಮೇ 7 ಮಂಗಳವಾರ, 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 56ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಮತ್ತು ರಾಜಸ್ತಾನ್ ರಾಯಲ್ಸ್ (ಆರ್‌ಆರ್) ಮುಖಾಮುಖಿಯಾಗಿದ್ದು, ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಿದೆ.
ಟಾಸ್ ಗೆದ್ದ ರಾಜಸ್ತಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬ್ಯಾಟಿಂಗ್ ಮಾಡಲಿದೆ.

ಈವರಗೆ ಆಡಿರುವ 10 ಪಂದ್ಯಗಳಲ್ಲಿ 8ರಲ್ಲಿ ಗೆದ್ದಿರುವ ರಾಜಸ್ತಾನ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ 11 ಪಂದ್ಯಗಳಲ್ಲಿ 5ರಲ್ಲಿ ಜಯ ಕಂಡು 6ನೇ ಸ್ಥಾನದಲ್ಲಿದೆ.
ಡಿಸಿ vs ಆರ್‌ಆರ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಡಿಸಿ vs ಆರ್‌ಆರ್ ಆಡುವ 11ರ ಬಳಗ
ಡೆಲ್ಲಿ ಕ್ಯಾಪಿಟಲ್ಸ್ ತಂಡ : ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಬ್ ಪಂತ್(ನಾಯಕ ಮತ್ತು ವಿ.ಕೀ), ಟ್ರಿಸ್ಟಾನ್ ಸ್ಟಬ್ಸ್, ಗುಲ್ಬದಿನ್ ನೈಬ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.
ರಾಜಸ್ತಾನ್ ರಾಯಲ್ಸ್ ತಂಡ : ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ನಾಯಕ ಮತ್ತು ವಿ.ಕೀ), ರಿಯಾನ್ ಪರಾಗ್, ಡೊನೊವನ್ ಫೆರೇರಾ, ರೋವ್ಮನ್ ಪೊವೆಲ್, ಶುಭಂ ದುಬೆ, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications