IPL 2025 RCB vs DC: ಡೆಲ್ಲಿ ವಿರುದ್ಧ ತವರಿನ ಸೋಲಿನ ಸೇಡಿಗೆ ಆರ್‌ಸಿಬಿ ರೆಡಿ; ಯಾರ ಪಾಲಿಗೆ ವಿಜಯ ಲಕ್ಷ್ಮಿ?
ಐಪಿಎಲ್ 2025 ರಲ್ಲಿ ಇಂದು ಅಂದರೆ ಭಾನುವಾರದಂದು ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ಮಧ್ಯಾಹ್ನ 3.30 ಗಂಟೆಗೆ ಆರಂಭವಾಗಲಿದೆ. ಎರಡನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಸಂಜೆ 7.30 ಗಂಟೆಗೆ. ಡೆಲ್ಲಿ ಮತ್ತು ಆರ್‍ಸಿಬಿ ನಡುವಣ ಪಂದ್ಯ ಭಾರಿ ಕುತೂಹಲ ಮೂಡಿಸಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಡೆಲ್ಲಿ ಗೆದ್ದಿತ್ತು. ಈಗ ಡೆಲ್ಲಿ ವಿರುದ್ಧ ಆರ್‍ಸಿಬಿ ಸೋಲಿನ ಸೇಡಿಗೆ ಸಜ್ಜಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಐಪಿಎಲ್ 2025 ರಲ್ಲಿ ಉತ್ತಮ ಪ್ರದರ್ಶನ ನೀಡುತ್ತಿವೆ. ಐಪಿಎಲ್ ಪ್ಲೇ ಆಫ್ ರೇಸ್‌ನಲ್ಲಿಯೂ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಳ್ಳುವತ್ತ ಸಾಗಿವೆ. ಇಂತಹ ಸಂದರ್ಭದಲ್ಲಿ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಉಭಯ ತಂಡಗಳಿಗೆ ಮಹತ್ವದಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ 2025 ರಲ್ಲಿ ಆಡಿದ 8 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು ಪಾಯಿಂಟ್ ಟೇಬಲ್‌ನಲ್ಲಿ 2ನೇ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ 9 ಪಂದ್ಯಗಳಲ್ಲಿ 6 ರಲ್ಲಿ ಗೆದ್ದರೆ, ಮೂರಲ್ಲಿ ಸೋಲು ಕಂಡಿದ್ದು, ಪಾಯಿಂಟ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.
ಹೆಡ್ ಟು ಹೆಡ್
ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಡೆಲ್ಲಿ ತಂಡವನ್ನು ಬೆಂಗಳೂರು 19 ಬಾರಿ ಸೋಲಿಸಿದರೆ, ಡೆಲ್ಲಿ 12 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಇಂದು ನಡೆಯಲಿರುವ ಪಂದ್ಯದಲ್ಲಿ ವಿಜಯ ಲಕ್ಷ್ಮಿ ಯಾವ ತಂಡ ಸೇರುತ್ತಾಳೆ ಎಂಬುದು ಕೂತುಹಲ ಮೂಡಿಸಿದೆ.
ಪಿಚ್ ವರದಿ
ಅರುಣ್ ಜೇಟ್ಲಿ ಸ್ಟೇಡಿಯಂನ ಪಿಚ್ ಬ್ಯಾಟರ್ಸ್‌ಗೆ ಹೆಚ್ಚು ಅನುಕೂಲಕರವಾಗಿದೆ. ವಿಶೇಷವಾಗಿ ಸಣ್ಣ ಬೌಂಡರಿಗಳನ್ನು ಹೊಂದಿರುವ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ರನ್ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ. ಆದಾಗ್ಯೂ, ಈ ಪಿಚ್‌ನಲ್ಲಿ ಸ್ಪಿನ್ನರ್‌ಗಖು ಯಶಸ್ಸು ಕಂಡಿದ್ದಾರೆ. ಈ ಪಿಚ್ ಚೇಸಿಂಗ್‌ಗೆ ಸುಲಭವಾಗಿರುವುದರಿಂದ ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ನಿರೀಕ್ಷೆಯಿದೆ.
ಸಂಭಾವ್ಯ ಪ್ಲೇಯಿಂಗ್-11
ಡೆಲ್ಲಿ ಕ್ಯಾಪಿಟಲ್ಸ್: ಅಭಿಷೇಕ್ ಪೊರೆಲ್, ಫಾಫ್ ಡು ಪ್ಲೆಸಿಸ್, ಕರುಣ್ ನಾಯರ್, ಕೆಎಲ್ ರಾಹುಲ್ (ವಿಕೆಟ್‌ಕೀಪರ್), ಅಕ್ಸರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ದುಷ್ಮಂತ ಚಮೀರಾ, ಮುಖೇಶ್ ಕುಮಾರ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್‌ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್, ಸುಯಾಶ್ ಶರ್ಮಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications