ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರೆಸ್ಲರ್ ಕೊಲೆ ಪ್ರಕರಣ: ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

Delhi Police issued Non-bailable warrant against Wrestler Sushil Kumar

ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ಈಗ ಕೊಲೆ ಪ್ರಕರಣವೊಂದರಲ್ಲಿ ಸಿಲುಕಿಕೊಂಡಿದ್ದಾರೆ. 23ರ ಹರೆಯದ ಮಾಜಿ ರಾಷ್ಟ್ರೀಯ ರಸ್ಲಿಂಗ್ ಚಾಂಪಿಯನ್ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಹೆಸರು ಕೂಡ ಬಲವಾಗಿ ಕೇಳಿ ಬಂದಿದೆ. ಆದರೆ ವಿಚಾರಣೆಗೆ ಹಾಜರಾಗದೆ ಸುಶೀಲ್ ಕುಮಾರ್ ತಲೆ ಮರೆಸಿಕೊಂಡಿದ್ದು ಈಗ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.

23ರ ಹರೆಯಾದ ಸಾಗರ್ ರಾಣಾ ಎಂಬ ರೆಸ್ಲರ್‌ನನ್ನು ಕೊಲೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಸುಶೀಲ್ ಕುಮಾರ್ ಕೂಡ ಘಟನೆ ನಡೆದ ಸ್ಥಳದಲ್ಲಿದ್ದರು ಎಂಬುದು ಸಾಕ್ಷಿಗಳ ಹೇಳಿಕೆಯಿಂದ ತಿಳಿದುಬಂದಿತ್ತು. ಆದರೆ ಸುಶೀಲ್ ಕುಮಾರ್ ಘಟನೆಯ ನಂತರ ತಲೆಮರೆಸಿಕೊಂಡಿದ್ದಾರೆ. ಹೀಗಾಗಿ ಈ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಪಾತ್ರದ ಬಗ್ಗೆ ಮತ್ತಷ್ಟು ಅನುಮಾನಗಳು ಹೆಚ್ಚಾಗಿದೆ.

ಟೆಸ್ಟ್‌ ವೃತ್ತಿ ಬದುಕಿನ ಗಾಳಿಸುದ್ದಿಗೆ ಖಾರವಾಗಿ ಪ್ರತಿಕ್ರಿಯಿಸಿದ ಭುವನೇಶ್ವರ್ಟೆಸ್ಟ್‌ ವೃತ್ತಿ ಬದುಕಿನ ಗಾಳಿಸುದ್ದಿಗೆ ಖಾರವಾಗಿ ಪ್ರತಿಕ್ರಿಯಿಸಿದ ಭುವನೇಶ್ವರ್

ಈಗ ಬಂದಿರುವ ಮಾಹಿತಿಯ ಪ್ರಕಾರ ಸುಶೀಲ್ ಕುಮಾರ್ ಅವರ ಪತ್ತೆಗೆ ದೆಹಲಿ ಪೊಲೀಸರು ಬಹುಮಾನ ಘೋಷಣೆ ಮಾಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಅದಕ್ಕೂ ಮುನ್ನ ಕೋರ್ಟ್ ಕೂ;ಕ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಇದಕ್ಕೂ ಮುನ್ನ ದೆಹಲಿ ಪೊಲೀಸರು ಸುಶೀಲ್ ಕುಮಾರ್ ವಿರುದ್ಧ ಲುಕ್‌ಔಟ್ ನೊಟೀಸ್ ಜಾರಿಗೊಳಿಸಿದ್ದರು.

ಸುಶೀಲ್ ಕುಮಾರ್ ಪತ್ತೆಗೆ ಪೊಲೀಸ್ ಇಲಾಖೆ ಸಾಕಷ್ಟು ಪ್ರಯತ್ನ ನಡೆಸಿದೆ. ಈ ಘಟನೆಯ ನಂತರ ಸುಶೀಲ್ ಮೊದಲಿಗೆ ಹರಿದ್ವಾರಕ್ಕೆ ತೆರಳಿದ್ದು ನಂತರ ರಿಷಿಕೇಶಕ್ಕೆ ತೆರಳಿದ್ದರು. ಹರಿದ್ವಾರದಲ್ಲಿ ಅವರು ಆಶ್ರಮವೊಂದರಲ್ಲಿ ಉಳಿದುಕೊಂಡಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ನಂತರ ದೆಹಲಿಗೆ ಮರಳಿದ ಅವರು ಸತತವಾಗಿ ತಮ್ಮ ಸ್ಥಳವನ್ನು ಬದಲಾಯಿಸುತ್ತಿದ್ದಾರೆ ಎನ್ನಲಾಗಿದೆ.

ವಾಯುವ್ಯ ದೆಹಲಿಯ ಛತ್ರಸಾಲ್ ಸ್ಟೇಡಿಯಂನ ಪಾರ್ಕಿಂಗ್ ಪ್ರದೇಶದಲ್ಲಿ 23ರ ಹರೆಯದ ಮಾಜಿ ಜ್ಯೂನಿಯರ್ ರಾಷ್ಟ್ರೀಯ ಚಾಂಪಿಯನ್ ಸಾಗರ್ ಧಂಕಡ್ ಎಂಬ ಯುವನ ಮೇಲೆ ಗಂಭೀರ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಪ್ರಥಮ ವರ್ತಮಾನ ವರದಿಯಲ್ಲಿ ಸುಶಿಲ್ ಕುಮಾರ್ ಹೆಸರು ಕೂಡ ಇದ್ದು ತನಿಖೆಗೆ ಸಹಕರಿಸದೆ ಅವರು ತಲೆಮರೆಸಿಕೊಂಡಿದ್ದಾರೆ.

Story first published: Monday, May 17, 2021, 9:57 [IST]
Other articles published on May 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X