DC vs RR IPL 2025: ರಾಜಸ್ಥಾನ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಡೆಲ್ಲಿ
ಸಂಘಟಿತ ಬ್ಯಾಟಿಂಗ್ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಸ್ಪರ್ಧಾತ್ಮಕ ಮೊತ್ತದ ಗುರಿ ನೀಡಿತು. 18ನೇ ಆವೃತ್ತಿಯ 32ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಸೇರಿಸಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ಮೊದಲು ಫೀಲ್ಡಿಂಗ್ ಮಾಡಲು ಮುಂದಾಯಿತು. ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಪರ ಇನಿಂಗ್ಸ್ ಆರಂಭಿಸಿದ ಜೇಕ್ ಫ್ರೇಸರ್-ಮೆಕ್‌ಗುರ್ಕ್ ರನ್ ಕಲೆ ಹಾಕುವಲ್ಲಿ ವಿಫಲರಾದರು. ಇವರು ಆಡಿದ 6 ಎಸೆತಗಳಲ್ಲಿ 9 ರನ್ ಬಾರಿಸಿದರು. ಇದರಲ್ಲಿ ಎರಡು ಬೌಂಡರಿಗಳು ಸೇರಿದ್ದವು. ಇವರು ಔಟ್ ಆದಾಗ ಡೆಲ್ಲಿ ತಂಡದ ಸ್ಕೋರ್ 34 ರನ್ ಆಗಿತ್ತು. ಇವರು ಔಟ್ ಆಗುತ್ತಿದ್ದಂತೆ ಕರುಣ್ ನಾಯರ್ ಕ್ರೀಸ್‌ಗೆ ಇಳಿದರು.

ಕಳೆದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಕರುಣ್ ಇಲ್ಲದ ರನ್ ಕದಿಯಲು ಹೋಗಿ ರನ್ ಔಟ್ ಆದರು. 34 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಅಭಿಷೇಕ್ ಪೋರೆಲ್ ಹಾಗೂ ಕೆಎಲ್ ರಾಹುಲ್ ಆಸರೆಯಾದರು. ಈ ಜೋಡಿ ರಾಜಸ್ಥಾನ ಬೌಲರ್‌ಗಳನ್ನು ಕಾಡಿತು. ತಂಡ ಹಾಕಿಕೊಂಡಿದ್ದ ಸ್ಕೋರ್‌ನತ್ತ ಈ ಜೋಡಿ ಮುನ್ನಡೆಯಿತು.
ಭರ್ಜರಿ ಜೊತೆಯಾಟ
ಅಭಿಷೇಕ್ ಪೋರೆಲ್ ಹಾಗೂ ರಾಹುಲ್ ಅವರನ್ನು ಕಟ್ಟಿ ಹಾಕುವಲ್ಲಿ ರಾಜಸ್ಥಾನ ಬೌಲರ್‌ಗಳು ವಿಫಲರಾದರು. ಈ ಜೋಡಿ 57 ಎಸೆತಗಳಲ್ಲಿ 63 ರನ್ ಸಿಡಿಡಿಸಿತು.. 38 ರನ್ ಬಾರಿಸಿ ಮುನ್ನುಗುತ್ತಿದ್ದಾಗ ಕೆಎಲ್ ರಾಹುಲ್ ಜೋಫ್ರಾ ಆರ್ಚರ್ ಎಸೆತದಲ್ಲಿ ಇಲ್ಲದ ಶಾಟ್ ಹೊಡೆಯಲು ಹೋಗಿ ಡೀಪ್ ಮಿಡ್‌ವಿಕೆಟ್‌ನಲ್ಲಿ ಫೀಲ್ಡ್ ಮಾಡುತ್ತಿದ್ದ ಶಿಮ್ರೋನ್ ಹೆಟ್ಮೆಯರ್ ಕ್ಯಾಚ್‌ಗೆ ಬಲಿಯಾದರು. ಇವರ ಈ ಇನಿಂಗ್ಸ್‌ನಲ್ಲಿ 2 ಬೌಂಡರಿ, 2 ಸಿಕ್ಸರ್ ಬಾರಿಸಿದರು. ಯುವ ಆಟಗಾರ ಅಭಿಷೇಕ್ ಪೋರೆಲ್ 37 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಾಯದಿಂದ 49 ರನ್ ಬಾರಿಸಿ ಔಟ್ ಆದರು.

105 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಟ್ರಿಸ್ಟಾನ್ ಸ್ಟಬ್ಸ್ ಹಾಗೂ ನಾಯಕ ಅಕ್ಸರ್ ಪಟೇಲ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 19 ಎಸೆತಗಳಲ್ಲಿ 41 ರನ್ ಸಿಡಿಸಿತು. ಅಕ್ಷರ್ ಪಟೇಲ್ 14 ಎಸೆತಗಳಲ್ಲಿ 34 ರನ್ ಬಾರಿಸಿದರು. ಇವರ ಇನಿಂಗ್ಸ್‌ನಲ್ಲಿ 4 ಬೌಂಡರಿ, 2 ಸಿಕ್ಸರ್ ಸೇರಿವೆ.
ಟ್ರಿಸ್ಟಾನ್ ಸ್ಟಬ್ಸ್ ತಮ್ಮ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 34 ರನ್ ಸಿಡಿಸಿದರು. ಆಶುತೋಷ್ ಶರ್ಮಾ ಅಜೇಯ 15 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
ರಾಜಸ್ಥಾನ ಪರ ಜೋಫ್ರಾ ಆರ್ಚರ್ 2 ವಿಕೆಟ್ ಕಬಳಿಸಿದರು. ಉಳಿದಂತೆ ಮಹೇಶ್ ತೀಕ್ಷಣ್, ವನಿಂದು ಹಸರಂಗಾ ತಲಾ ಒಂದು ವಿಕೆಟ್ ಉರುಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications