Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Devdutt Padikkal: ಗೆಲುವಿನಲ್ಲಿ ತನ್ನದೇ ಪಾತ್ರ ವಹಿಸಿದ ಕನ್ನಡಿಗ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಭರವಸೆಯ ಬ್ಯಾಟರ್‌ ದೇವದತ್‌ ಪಡಿಕ್ಕಲ್‌ ತವರಿನಲ್ಲಿ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದ್ದಾರೆ. ಪಿಚ್‌ ಮರ್ಮ ಅರಿತು ಬ್ಯಾಟ್ ಮಾಡಿದ ದೇವದತ್‌ ತಂಡಕ್ಕೆ ನೆರವಾಗಿದ್ದಾರೆ. ಎರಡನೇ ವಿಕೆಟ್‌ಗೆ ವಿರಾಟ್‌ ಜೊತೆಗೆ ಉತ್ತಮ ಜೊತೆಯಾಟದ ಕಾಣಿಕೆ ನೀಡಿದ ದೇವದತ್, ಬೆಂಗಳೂರಿನ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದಾರೆ. ಪ್ರಸಕ್ತ ಐಪಿಎಲ್‌ನಲ್ಲಿ ಆರ್‌ಸಿಬಿ ಇವರಿಗೆ ಹೊಸ ರೋಲ್‌ ನೀಡಿದ್ದು, ಆ ರೋಲ್‌ ಇವರಿಗೆ ಪರ್ಫೆಕ್ಟ್‌ ಸೂಟ್ ಆಗಿದೆ.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡದ ಆರಂಭಿಕರು ಭರ್ಜರಿ ಆರಂಭವನ್ನು ನೀಡಿದರು. ಗುರುವಾರ ಫಿಲ್ ಸಾಲ್ಟ್‌ ಬ್ಯಾಟ್‌ನಿಂದ ದೊಡ್ಡ ಇನಿಂಗ್ಸ್‌ ಬರುವ ಸೂಚನೆ ಇತ್ತು. ಆದರೆ ಈ ಆಸೆ ಫಲಿಸಲಿಲ್ಲ. ಇವರು 26 ರನ್‌ ಬಾರಿಸಿದ್ದಾಗ ತಂಡದ ಮೊತ್ತ 61 ಆಗಿದ್ದಾಗ ಪೆವಿಲಿಯನ್‌ ಸೇರಿದರು. ಇವರು ಔಟ್ ಆಗುತ್ತಿದ್ದಂತೆ ಮೈದಾನಕ್ಕೆ ಬಂದಿದ್ದು ಕನ್ನಡಿಗ ದೇವದತ್ ಪಡಿಕ್ಕಲ್‌ ತಮ್ಮ ನೈಜ್ಯ ಆಟವನ್ನು ಆಡಿದ ಪಡಿಕ್ಕಲ್ ತಂಡದ ಗೆಲುವಿನಲ್ಲಿ ತಮ್ಮದೇ ಆದ ರೀತಿಯಲ್ಲಿ ಕಾಣಿಕೆ ನೀಡಿದರು.

Devdutt Padikkal Shines Under Pressure Anchors RCB with Composed Knock at Home

ದೇವದತ್‌ ಪಡಿಕ್ಕಲ್‌ ತಮ್ಮ ಅಮೋಘ ಫಾರ್ಮ್‌ ಮುಂದುವರೆಸಿದ್ದಾರೆ. ಕಳೆದ ಭಾನುವಾರ ಪಂಜಾಬ್‌ ವಿರುದ್ಧ ಅರ್ಧಶತಕ ಬಾರಿಸಿ ಅಬ್ಬರಿಸಿದ್ದ ದೇವದತ್ ಪಡಿಕ್ಕಲ್‌ ರಾಜಸ್ಥಾನ ರಾಯಲ್ಸ್ ವಿರುದ್ಧವೂ ಇಂತಹದ್ದೇ ಸಾಧನೆ ಮಾಡಿದ್ದಾರೆ. ಇವರು ಈ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು ಭರವಸೆಯನ್ನು ಹೆಚ್ಚಿಸಿದ್ದಾರೆ. ತಂಡಕ್ಕೆ ಉತ್ತಮ ಜೊತೆಯಾಟದ ಕಾಣಿಕೆ ನೀಡಿದ ದೇವದತ್‌ ತಂಡ ಅಂದುಕೊಂಡ ಮೊತ್ತವನ್ನು ಕಲೆ ಹಾಕುವಲ್ಲಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಇವರು ಎರಡನೇ ವಿಕೆಟ್‌ಗೆ ವಿರಾಟ್‌ ಜತೆ 95 ರನ್‌ಗಳ ಇನಿಂಗ್ಸ್‌ ಕಟ್ಟಿದರು.

ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ದೇವದತ್‌ 27 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 50 ರನ್‌ ಬಾರಿಸಿ ಮಿಂಚಿದ್ದಾರೆ. ಈ ಮೂಲಕ ತಮ್ಮ ಆಟದ ಮೇಲೆ ಭರವಸೆ ಇಟ್ಟ ಆರ್‌ಸಿಬಿ ಮ್ಯಾನೇಜ್ಮೆಂಟ್‌ಗೆ ಬ್ಯಾಟಿಂಗ್‌ನಿಂದಲೇ ಧನ್ಯವಾದ ತಿಳಿಸಿದ್ದಾರೆ.

ಪ್ರಸಕ್ತ ಐಪಿಎಲ್‌ನಲ್ಲಿ ಸಾಧನೆ

ದೇವದತ್‌ ಪಡಿಕ್ಕಲ್‌ ಪ್ರಸಕ್ತ ಟೂರ್ನಿಯಲ್ಲಿ ಆಡಿದ 8 ಪಂದ್ಯಗಳಲ್ಲಿ 32ರ ಸರಾಸರಿಯಲ್ಲಿ 230 ರನ್‌ ಸಿಡಿಸಿದ್ದಾರೆ. ಇದರಲ್ಲಿ 2 ಅರ್ಧಶತಕಗಳು ಸೇರಿವೆ. ಈ ವೇಳೆ ದೇವದತ್ 20 ಬೌಂಡರಿ ಹಾಗೂ 13 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ದೇವದತ್‌ ತಮ್ಮ ಭರ್ಜರಿ ಫಾರ್ಮ್‌ ಇದೇ ರೀತಿ ಮುಂದುವರೆಸಲಿ ಎಂಬುದೇ ಅಭಿಮಾನಿಗಳ ಆಶಯ.

Story first published: Thursday, April 24, 2025, 23:58 [IST]
Other articles published on Apr 24, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+