Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Devdutt Padikkal: ಕನ್ನಡಿಗ ದೇವದತ್ ಪಡಿಕ್ಕಲ್ ಬಿರುಸಿನ ಅರ್ಧಶತಕ

ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 205 ರನ್‌ ಸೇರಿಸಿತು. ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ತಂಡದ ಪರ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ದೇವದತ್ ಪಡಿಕ್ಕಲ್ ಅಬ್ಬರಿಸಿದರು.

ಎರಡನೇ ವಿಕೆಟ್‌ಗೆ ಕರ್ನಾಟಕದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ತಮ್ಮ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ತಂಡದ ಗೆಲುವಿನಲ್ಲಿ ಮಿಂಚಿದರು. ದೇಶೀಯ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್‌ ಆಡಿದ ರೀತಿಯಲ್ಲೇ, 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಬ್ಯಾಟ್ ಮಾಡಿದರು. ಇವರು ಈ ಆವೃತ್ತಿಯ ಹಿಂದಿನ ಪಂದ್ಯಗಳಲ್ಲಿ ದೇವದತ್ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರು.

Devdutt Padikkal

ಶುಕ್ರವಾರ ನಡೆದ ಪಂದ್ಯದಲ್ಲಿ ತಮ್ಮ ಮೇಲೆ ಇದ್ದ ಒತ್ತಡವನ್ನು ಮೆಟ್ಟಿ ನಿಂತು ಬ್ಯಾಟ್ ಮಾಡಿ ದೇವದತ್ ಪಡಿಕ್ಕಲ್‌ ಭರ್ಜರಿ ಫಾರ್ಮ್‌ಗೆ ಮರಳಿದರು. ಇವರು 21ನೇ ಎಸೆತದಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು. ಈ ಮೂಲಕ ತಂಡಕ್ಕೆ ಆಧಾರವಾದರು. ಇವರು 27 ಎಸೆತಗಳಲ್ಲಿ 2 ಬೌಂಡರಿ, 6 ಸಿಕ್ಸರ್ ಸಹಾಯದಿಂದ 55 ರನ್‌ ಬಾರಿಸಿ ರಶೀದ್ ಖಾನ್‌ಗೆ ವಿಕೆಟ್‌ ಒಪ್ಪಿಸಿದರು.

ಐಪಿಎಲ್‌ನಲ್ಲಿ ದೇವದತ್ ಸಾಧನೆ

25 ವರ್ಷದ ಕರ್ನಾಟಕದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಇವರು ಆಡಿದ 7 ಪಂದ್ಯಗಳ 6 ಇನಿಂಗ್ಸ್‌ನಲ್ಲಿ 34ರ ಸರಾಸರಿಯಲ್ಲಿ 238 ರನ್ ಕಲೆ ಹಾಕಿದ್ದಾರೆ. ಈ ವೇಳೆ ಇವರ ಸ್ಟ್ರೈಕ್ ರೇಟ್‌ 210 ಆಗಿದೆ. ಇನ್ನು ಒಟ್ಟಾರೆ ಐಪಿಎಲ್‌ನಲ್ಲಿ ದೇವದತ್ ಪಡಿಕ್ಕಲ್ ಆಡಿದ 81 ಪಂದ್ಯಗಳಲ್ಲಿ 26ರ ಸರಾಸರಿಯಲ್ಲಿ 2014 ರನ್‌ ಕಲೆ ಹಾಕಿದ್ದಾರೆ. ಇದರಲ್ಲಿ 209 ಬೌಂಡರಿ, 69 ಸಿಕ್ಸರ್ ಬಾರಿಸಿದ್ದಾರೆ.

ತವರಿನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಜಿಟಿ ವಿರುದ್ಧ 5 ವಿಕೆಟ್‌ ಜಯ ಸಾಧಿಸಿದ ಆರ್‌ಸಿಬಿ ಅಬ್ಬರಿಸಿದೆ. ಹಾಲಿ ಚಾಂಪಿಯನ್‌ ಆರ್‌ಸಿಬಿ ಈ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದೆ. ಆಡಿದ 7 ಪಂದ್ಯಗಳಲ್ಲಿ 5 ಜಯ, 2 ಸೋಲು ಕಂಡಿದ್ದು, 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

Story first published: Friday, April 24, 2026, 23:52 [IST]
Other articles published on Apr 24, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+