Divorce Rumours: ತುಟ್ಟಿ ಬಿಚ್ಚಿದ ಚಹಾಲ್ ಪತ್ನಿ ಧನಶ್ರೀ!
ಭಾರತ ತಂಡದ ಸ್ಟಾರ್ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಈ ಸ್ಟಾರ್ ಜೋಡಿ ನಡುವಿನ ವಿಚ್ಛೇದನದ ವದಂತಿಗಳು ಸಾಕಷ್ಟು ಸದ್ದು ಮಾಡುತ್ತಿವೆ.
ಇತ್ತೀಚಿನ ದಿನಗಳಲ್ಲಿ ದಂಪತಿಗಳ ನಡುವೆ ಏನೂ ಸರಿಯಾಗಿ ನಡೆಯುತ್ತಿಲ್ಲ, ಶೀಘ್ರದಲ್ಲೇ ದಂಪತಿಗಳು ಪರಸ್ಪರ ಬೇರ್ಪಡಬಹುದು ಎಂದು ವರದಿಗಳು ಹೇಳುತ್ತಿವೆ. ಆದರೆ, ಈ ಕುರಿತು ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಯಾವುದೇ ಪ್ರಕ್ರಿಯೆ ನೀಡಿರಲಿಲ್ಲ. ಇದೀಗ ವಿಚ್ಛೇದನದ ವದಂತಿಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಧನಶ್ರೀ ವರ್ಮಾ ತುಟ್ಟಿ ಬಿಚ್ಚಿದ್ದಾರೆ.

ಧನಶ್ರೀ ವರ್ಮಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತನ್ನನ್ನು ಟ್ರೋಲ್ ಮಾಡುವವರ ವಿರುದ್ಧ ಧನಶ್ರೀ ವರ್ಮಾ ಅವರು ಕಿಡಿಕಾರಿದ್ದಾರೆ. ಕಳೆದ ಕೆಲವು ದಿನಗಳಿಂದ ತನ್ನ ಬಗ್ಗೆ ಹರಡುತ್ತಿರುವ ಸುದ್ದಿಯಿಂದ ಮಾನಸಿಕವಾಗಿ ನೋವು ಅನುಭವಿಸುತ್ತಿದ್ದೇನೆ ಎಂದು ಧನಶ್ರೀ ಹೇಳಿಕೊಂಡಿದ್ದಾರೆ.
ಮೌನ ಮುರಿದ ಧನಶ್ರೀ
ಕಳೆದ ಕೆಲವು ದಿನಗಳು ನನಗೆ ಮತ್ತು ನನ್ನ ಕುಟುಂಬಕ್ಕೆ ತುಂಬಾ ಕಷ್ಟಕರವಾಗಿದೆ. ಸತ್ಯ ತಿಳಿಯದೆ ಸುಳ್ಳನ್ನು ಬರೆಯುತ್ತಿದ್ದಾರೆ. ಅವರು ನನ್ನನ್ನು ಟ್ರೋಲ್ ಮಾಡುತ್ತಿದ್ದಾರೆ. ಆಧಾರ ರಹಿತ ವಿಷಯಗಳನ್ನು ಮುಂದಿಟ್ಟುಕೊಂಡು ನನ್ನ ಪಾತ್ರದತ್ತ ಬೆರಳು ತೋರಿಸಲಾಗುತ್ತಿದೆ. ದ್ವೇಷ ಹರಡಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಈ ಹೆಸರುಗಳಿಸಲು ಮತ್ತು ಖ್ಯಾತಿಯನ್ನು ಪಡೆಯಲು ಹಲವು ವರ್ಷಗಳಿಂದ ಶ್ರಮಿಸಿದ್ದೇನೆ. ನಾನು ಮೌನವಾಗಿದ್ದರೆ, ಅದು ನನ್ನ ದೌರ್ಬಲ್ಯವಲ್ಲ, ನನ್ನ ಶಕ್ತಿ.
ಸಾಮಾಜಿಕ ಜಾಲತಾಣಗಳಲ್ಲಿ ನಕಾರಾತ್ಮಕತೆಯನ್ನು ಹರಡುವುದು ದೊಡ್ಡ ವಿಷಯವಲ್ಲ. ಬೇರೆಯವರನ್ನು ಮೇಲಕ್ಕೆತ್ತಲು ಧೈರ್ಯ ಬೇಕು. ನಾನು ಸತ್ಯದೊಂದಿಗೆ ಮುಂದುವರಿಯಲು ನಿರ್ಧರಿಸಿದ್ದೇನೆ. 'ಸತ್ಯವು ಯಾವಾಗಲೂ ಮೇಲುಗೈ ಸಾಧಿಸುತ್ತದೆ. ಸ್ಪಷ್ಟಕ್ಕೆ ಯಾವುದೇ ಪುರಾವೆಗಳಿಲ್ಲದಿದ್ದರೂ ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ... ಎಂದು ಧನಶ್ರೀ ವರ್ಮಾ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿದ್ದಂತೆ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ನಡುವಿನ ಸಂಬಂಧದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಈ ಜೋಡಿ ಮಾಡುತ್ತಿರುವ ನಿರಂತರ ಪೋಸ್ಟ್‌ಗಳು ಕ್ರಿಕೆಟ್ ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದೆ. ಇಬ್ಬರೂ ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ವೈರಲ್ ಆಗಿದೆ. ಆದರೆ, ಇತ್ತೀಚೆಗಷ್ಟೇ ಚಹಾಲ್ ನಾವು ಬೇರೆ ಬೇರೆಯಾಗಿಲ್ಲ ಎಂದು ಹೇಳಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಇಬ್ಬರೂ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿಕೊಂಡಿದ್ದಾರೆ. ಇದಾದ ಬಳಿಕವೇ ಇಬ್ಬರ ನಡುವೆ ಯಾವುದೂ ಸರಿಯಿಲ್ಲ ಎಂಬ ವಿಚಾರ ವೇಗ ಪಡೆದುಕೊಂಡಿದೆ. ಚಹಾಲ್ ತನ್ನ ಹೆಂಡತಿಯ ಎಲ್ಲಾ ಫೋಟೋಗಳನ್ನು ತನ್ನ ಖಾತೆಯಿಂದ ಡಿಲೀಟ್ ಮಾಡಿದ್ದು, ವಿಚ್ಛೇದನದ ವದಂತಿಗಳಿಗೆ ಮತ್ತಷ್ಟು ಬಲ ಬಂದಿದೆ. ಚಹಾಲ್-ಧನಶ್ರೀ ವರ್ಮಾ 2020ರಲ್ಲಿ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications