Dhanashree Verma: ಟೀಮ್ ಇಂಡಿಯಾದ ಇನ್ನೊಬ್ಬ ಆಟಗಾರನ ಜೊತೆ ಧನಶ್ರೀ ವರ್ಮಾ ಡೇಟಿಂಗ್
ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ವಿಚ್ಛೇದನದ ವದಂತಿಗಳು ವೇಗವನ್ನು ಪಡೆಯುತ್ತಿವೆ. ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದರಿಂದ, ಇಬ್ಬರೂ ಪರಸ್ಪರ ಬೇರ್ಪಟ್ಟಿದ್ದಾರೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಚಹಾಲ್ ಅಭಿಮಾನಿಗಳು ಧನಶ್ರೀ ಅವರನ್ನು ಟ್ರೋಲ್ ಮಾಡುತ್ತಿದ್ದರೆ, ಧನಶ್ರೀ ಅಭಿಮಾನಿಗಳು ಚಹಾಲ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.
ವರದಿಗಳ ಪ್ರಕಾರ ಈ ಸ್ಟಾರ್ ಸದ್ಯದಲ್ಲೇ ವಿಚ್ಛೇದನ ಪಡೆಯಲಿದೆಯಂತೆ. ಆದರೆ, ಈ ಬಗ್ಗೆ ಚಹಾಲ್ ಆಗಲಿ ಅಥವಾ ಧನಶ್ರೀ ಆಗಲಿ ಇದುವರೆಗೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಈ ಇಬ್ಬರ ನಡೆ ಅಭಿಮಾನಿಗಳಲ್ಲಿ ಸಾಕಷ್ಟು ಅನುಮಾನ ಮೂಡಿಸಿದೆ. ಅಲ್ಲದೆ, ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಈ ಸ್ಟಾರ್ ಜೋಡಿ ದೂರವಾಗುತ್ತಿರುವುದು ಯಾವ ಕಾರಣಕ್ಕೆ ಎಂಬ ಗೊಂದಲದಲ್ಲಿದ್ದಾರೆ.

ವರದಿಗಳ ಪ್ರಕಾರ, ಟೀಮ್ ಇಂಡಿಯಾದ ಇನ್ನೊಬ್ಬ ಆಟಗಾರನ ಜೊತೆ ಧನಶ್ರೀ ವರ್ಮಾ ಡೇಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಬಹಿರಂಗವಾಗುತ್ತಿದೆ. ಈ ಹಿಂದೆ ಧನಶ್ರೀ ಜೊತೆ ಟೀಮ್ ಇಂಡಿಯಾ ಆಟಗಾರನ ಹೆಸರು ತಳುಕು ಹಾಕಿಕೊಂಡಿತ್ತು. ಇಬ್ಬರು ಲವ್ ಮಾಡುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಇದಾದ ನಂತರ ಈ ಸುದ್ದಿಯ ವೇಗ ಕಡಿಮೆಯಾಗಿತ್ತು. ಇದೀಗ ಮತ್ತೆ ವಿಚ್ಛೇದನದ ವದಂತಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಈ ಸುದ್ದಿ ಮುನ್ನೆಲೆಗೆ ಬಂದಿರುವುದು ಚರ್ಚೆಗೆ ಕಾರಣವಾಗಿದೆ.
ಇತ್ತೀಚೆಗೆ ಯುಜ್ವೇಂದ್ರ ಚಹಾಲ್ ಕೂಡ ಮುಂಬೈನ ಹೊಟೇಲ್‌ವೊಂದರಲ್ಲಿ ಅಪರಿಚಿತ ಹುಡುಗಿಯೊಂದಿಗೆ ಕಾಣಿಸಿಕೊಂಡಿದ್ದರು. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡಿತ್ತು. ಹೊಟೇಲ್‌ನಲ್ಲಿ ಚಹಾಲ್ ಮತ್ತು ಹುಡುಗಿ ಫೋಟೋ ತೆಗೆಯುತ್ತಿದ್ದಂತೆ ಇಬ್ಬರು ಮುಖ ಮುಚ್ಚಿಕೊಂಡು ಹೋಗಿದ್ದರು. ಯುಜ್ವೇಂದ್ರ ಚಹಾಲ್ ಜೊತೆ ಇದ್ದ ಹುಡುಗಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.
ಕರೋನಾ ಲಾಕ್‌ಡೌನ್ ಸಮಯದ ಅಂದರೆ 2020ರ ಡಿಸೆಂಬರ್‌ನಲ್ಲಿ ವೈವಾಹಿಕ ಜೀವನಕ್ಕೆ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ಕಾಲಿಟ್ಟಿದ್ದರು. ಇದಾದ ನಂತರ ಈ ಜೋಡಿ ತಮ್ಮ ಸಿಹಿ ಕ್ಷಣಗಳನ್ನು ಆಗಾಗ ತಮ್ಮ ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು. ಇದೀಗ ಈ ಜೋಡಿ ಬೇರೆಯಾಗುತ್ತಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ. ಮುಂದಿನ ಕೆಲವು ದಿನಗಳಲ್ಲಿ ಇಬ್ಬರು ತಮ್ಮ ವಿಚ್ಛೇದನವನ್ನು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications