ಆರ್‌ಸಿಬಿ ನಾಯಕನಾಗಿ ಕೊಹ್ಲಿ ವಿದಾಯ ರಾತ್ರಿಯ ಚಿತ್ರಗಳನ್ನು ಹಂಚಿಕೊಂಡ ಧನಶ್ರೀ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಯುಎಇ ಚರಣ ಆರಂಭವಾಗುವ ಮುನ್ನವೇ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ಬಳಿಕ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ನಾಯಕ ವಿರಾಟ್ ಕೊಹ್ಲಿ ಘೋಷಣೆ ಮಾಡಿದ್ದರು. ಅದರಂತೆಯೇ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ತನ್ನ ಕೊನೆಯ ಪಂದ್ಯವನ್ನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮ ನಾಯಕ ವಿರಾಟ್ ಕೊಹ್ಲಿಗೆ ಬೀಳ್ಕೊಡುಗೆ ನೀಡಿದೆ.
ಅಕ್ಟೋಬರ್ 11ರ ಸೋಮವಾರದಂದು ನಡೆದ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂತಿಮ ಹಂತದಲ್ಲಿ ಸೋಲುವುದರ ಮೂಲಕ ಟೂರ್ನಿಯಿಂದ ಹೊರಬಿತ್ತು. ಈ ಸೋಲಿನ ಮೂಲಕ ವಿರಾಟ್ ಕೊಹ್ಲಿ ನಾಯಕನಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಎತ್ತಿಹಿಡಿಯಬೇಕೆಂಬ ಹಲವಾರು ಅಭಿಮಾನಿಗಳ ಕನಸು ಕನಸಾಗಿಯೇ ಉಳಿದುಬಿಟ್ಟಿತು.
ಇನ್ನು ಈ ಪಂದ್ಯದ ಸೋಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಿಗೂ ನೋವನ್ನು ತಂದಿರುವುದು ನಿಜ. ಈ ನೋವಿನೊಂದಿಗೆ ಪಂದ್ಯ ಮುಗಿದ ಬಳಿಕ ತಮ್ಮ ನಾಯಕ ವಿರಾಟ್ ಕೊಹ್ಲಿಗೆ ಬೀಳ್ಕೊಡುಗೆ ನೀಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿದಾಯ ರಾತ್ರಿಯನ್ನು ಏರ್ಪಡಿಸಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬೌಲರ್ ಯುಜ್ವೇಂದ್ರ ಚಾಹಲ್ ಅವರ ಪತ್ನಿ ಧನಶ್ರೀ ಕಾರ್ಯಕ್ರಮದ ವಿಶೇಷ ಚಿತ್ರಗಳನ್ನು ತಮ್ಮ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು "ಇದು ನಿಜವಾಗಿಯೂ ತುಂಬಾ ಪ್ರೀತಿ ಮತ್ತು ಶುಭಾಶಯಗಳನ್ನು ತುಂಬಿದ ಭಾವನಾತ್ಮಕ ರಾತ್ರಿ. ಮುಂದಿನ ಸಮಯದವರೆಗೆ" ಎಂದು ಬರೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications