Dharamsala Test:ಟೀಮ್ ಇಂಡಿಯಾ ಸಂಭಾವ್ಯ ಆಡುವ 11ರ ಬಳಗ
ಟೀಮ್ ಇಂಡಿಯಾ ತವರಿನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡುತ್ತಿದೆ. WTC ಪಾಯಿಂಟ್ ಪಟ್ಟಿಯಲ್ಲಿ ಟಾಪ್ ನಲ್ಲಿರುವ ಭಾರತ, ಧರ್ಮಶಾಲಾ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸುವ ಕನಸು ಹೊಂದಿದೆ. ಈ ಟೆಸ್ಟ್ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿಗೆ ಗುಡ್ ಬೈ ಹೇಳಲು ಇಂಗ್ಲೆಂಡ್ ಪ್ಲ್ಯಾನ್ ಮಾಡಿಕೊಂಡಿದೆ.
ಟೀಮ್ ಇಂಡಿಯಾ ಈಗಾಗಗಲೇ ಟೆಸ್ಟ್ ಸರಣೀ ಗೆದ್ದಿದ್ದರಿಂದ ಈ ಪಂದ್ಯದಲ್ಲಿ ಬದಲಾವಣೆ ಕಾಣಬಹುದು. ಇನ್ನು ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ತಂಡ ಸೇರಲಿದ್ದಾರೆ. ಇನ್ನು ಸ್ಪಿನ್ ಬೌಲರ್ ವಾಷಿಂಗ್ಟನ್ ಸುಂದರ್ ಐದನೇ ಟೆಸ್ಟ್ ತಂಡದಿಂದ ಬಿಡುಗಡೆ ಮಾಡಲಾಗಿದೆ.

ಕೆಎಲ್ ರಾಹುಲ್ ಕೂಡ ಐದನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ಧರ್ಮಶಾಲಾ ಟೆಸ್ಟ್‌ನಲ್ಲಿ ಭಾರತದ ಪ್ಲೇಯಿಂಗ್ ಇಲೆವೆನ್ ಏನಾಗಬಹುದು ಎಂಬ ಕುತೂಹಲ ಹೆಚ್ಚಿಸಿದೆ. ಐದನೇ ಟೆಸ್ಟ್‌ನಲ್ಲಿ ಯಾವ ಆಟಗಾರರಿಗೆ ವಿಶ್ರಾಂತಿ ನೀಡಲಾಗುತ್ತದೆ. ಆದರೆ ಯಾವ ಆಟಗಾರನಿಗೆ ಅವಕಾಶ ಸಿಗುತ್ತದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ರಾಂಚಿ ಟೆಸ್ಟ್‌ನಲ್ಲಿ ವೇಗದ ಬೌಲರ್ ಆಕಾಶ್ ದೀಪ್‌ಗೆ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿತು. ಅವರು ತಮ್ಮ ವೇಗ ಮತ್ತು ಸ್ವಿಂಗ್ ಬೌಲಿಂಗ್‌ನಿಂದ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ನ ಅಗ್ರ ಕ್ರಮಾಂಕದ ಬ್ಯಾಟರ್‌ಗಳಿಗೆ ಕಾಟ ನೀಡಿದರು. ಆಕಾಶ್ ದೀಪ್ ಮೊದಲ ಇನ್ನಿಂಗ್ಸ್‌ನಲ್ಲಿ ಬೆನ್ ಡಕೆಟ್, ಜಾಕ್ ಕ್ರಾಲಿ ಮತ್ತು ಆಲಿ ಪೋಪ್ ಅವರ ದೊಡ್ಡ ವಿಕೆಟ್‌ಗಳನ್ನು ಪಡೆದರು.

ಕನ್ನಡಿಗನಿಗೆ ಅವಕಾ
ಆಕಾಶ್ ದೀಪ್ ನಂತರ, ದೇವದತ್ ಪಡಿಕ್ಕಲ್ ಕೂಡ ಧರ್ಮಶಾಲಾ ಟೆಸ್ಟ್‌ಗೆ ಪದಾರ್ಪಣೆ ಮಾಡಬಹುದು. ಧರ್ಮಶಾಲಾ ಟೆಸ್ಟ್‌ನಲ್ಲಿ ರಜತ್ ಪಾಟಿದಾರ್ ಬದಲಿಗೆ ಪಡಿಕ್ಕಲ್ ತಂಡವನ್ನು ಸೇರಬಹುದು. ರಜತ್ ಪಾಟಿದಾರ್ ವಿಶಾಖಪಟ್ಟಣಂ ಟೆಸ್ಟ್‌ನಲ್ಲಿ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದರು, ಆದರೆ ಅವರು ಇಲ್ಲಿಯವರೆಗೆ ಯಾವುದೇ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ದೇವದತ್ ಪಡಿಕ್ಕಲ್ ದೇಶೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ರನ್ ಗಳಿಸುತ್ತಿದ್ದಾರೆ. ಅವರಿಗೆ ಧರ್ಮಶಾಲಾ ಟೆಸ್ಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.
ಸಿರಾಜ್ ವಿಶ್ರಾಂತಿ
ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ಧರ್ಮಶಾಲಾ ಟೆಸ್ಟ್‌ನಿಂದ ವಿಶ್ರಾಂತಿ ನೀಡಬಹುದು. ಇವರಿಗೆ ವಿಶ್ರಾಂತಿ ನೀಡಲು ಆಡಳಿತ ಮಂಡಳಿ ಯೋಚಿಸಬಹುದು. ಸಿರಾಜ್ ಬದಲಿಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಬಹುದು.
ಭಾರತದ ಸಂಭಾವ್ಯ ಆಡುವ 11
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್/ದೇವದತ್ ಪಡಿಕ್ಕಲ್, ಸರ್ಫರಾಜ್ ಖಾನ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ (ಉಪನಾಯಕ).
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications