ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮುಗಿದಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿ ಮುಖಭಂಗ ಅನುಭವಿಸಿದೆ. ತವರಿನಲ್ಲಿ ನಡೆದ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ ಕೈ ಚೆಲ್ಲಿದೆ. ಈ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವೇ ಆಗಲೇ ಇಲ್ಲ. ಹೀಗಾಗಿ ಟೀಮ್ ಇಂಡಿಯಾಕ್ಕೆ ಆಸ್ಟ್ರೇಲಿಯಾ ವಿರುದ್ಧ ಬಿಗ್ ಚಾಲೆಂಜ್ ಎದುರಾಗಲಿದೆ.
ಈ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದರೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ಸಾಧ್ಯ. ಇಲ್ಲವಾದಲ್ಲಿ ಟೀಮ್ ಇಂಡಿಯಾ ಬೇರೆ ತಂಡಗಳ ಫಲಿತಾಂಶವನ್ನು ಕಾಯಬೇಕಾಗುತ್ತದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನವನ್ನೇ ನೀಡಿದ್ದು ಈ ಬಾರಿಯೂ ಇದೇ ಪ್ರದರ್ಶನ ಮುಂದುವರಿಸಲಿದೆ ಎಂದು ಶಿಖರ್ ಧವನ್ ಹೇಳಿದ್ದಾರೆ.

ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ವಿಶ್ವಾಸವನ್ನು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ತಿಳಿಸಿದ್ದಾರೆ. 2018-19ರಲ್ಲಿ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ, 2020-21 ರಲ್ಲಿ ಟೀಮ್ ಇಂಡಿಯಾ ಅಜಿಂಕ್ಯ ರಹಾನೆ ಅವರ ನಾಯಕತ್ವದಲ್ಲಿ ಬಾರ್ಡರ್ ಗವಾಸ್ಕರ್ ಸರಣಿಗೆ ಮುತ್ತಿಟ್ಟಿತ್ತು. ಇದೇ ಸಾಧನೆಯನ್ನು ಪ್ರಸಕ್ತ ತಂಡ ಸಹ ಮಾಡಿ ತೋರಿಸಲಿದೆ.
ಭಾರತದ ಪರ 34 ಟೆಸ್ಟ್, 167 ಏಕದಿನ, 68 ಟಿ20 ಪಂದ್ಯಗಳನ್ನು ಆಡಿರುವ ಶಿಖರ್ ಧವನ್ ಟೈಮ್ಸ್ ಆಫ್ ಇಂಡಿಯಾದ ಜೊತೆ ಮಾತನಾಡಿದ್ದಾರೆ. ತಮ್ಮ ನಿವೃತ್ತಿ ಜೀವನ ಹಾಗೂ ಪ್ರಸಕ್ತ ಟೀಮ್ ಇಂಡಿಯಾದ ಪ್ರದರ್ಶನದ ಕುರಿತು ಮಾತನಾಡಿರುವ ಶಿಖರ್, ಟೀಮ್ ಇಂಡಿಯಾ ಆಸ್ಟ್ರೇಲಿಯಾದಲ್ಲಿ ಪುಟಿದೇಳುವ ವಿಶ್ವಾಸವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಟೀಮ್ ಇಂಡಿಯಾ ಅಸ್ಟ್ರೇಲಿಯಾ ಪ್ರವಾಸವನ್ನು ಪಾಸಿಟಿವ್ ಇಂಟೇಟ್‌ನಿಂದ ಆಡುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರಿತ್ ಬುಮ್ರಾ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರೆಲ್ಲಾ ಆಟಗಾರರು ತಮ್ಮ ಅನುಭವವನ್ನು ಯುವ ಆಟಗಾರರೊಂದಿಗೆ ಹಂಚಿಕೊಳ್ಳಲಿದ್ದಾರೆ ಎಂದಿದ್ದಾರೆ.
ಈ ತಂಡ ಒತ್ತಡವನ್ನು ಮೆಟ್ಟಿನಿಲ್ಲುವ ಕ್ಷಮತೆ ಹೊಂದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೇಗೆ ಆಡ ಬೇಕು ಎಂಬ ಕಲೆಯನ್ನು ಈ ಆಟಗಾರರು ಕರಗತ ಮಾಡಿಕೊಂಡಿದ್ದಾರೆ. ಇದುವೇ ಆಸ್ಟ್ರೇಲಿಯಾ ನೆಲದಲ್ಲಿ ಭಾರತ ತಂಡದ ಬಲವನ್ನು ಹೆಚ್ಚಿಸಲಿದೆ. ಬೇರೆ ದೇಶಗಳಿಗೆ ಪ್ರವಾಸ ಬೆಳೆಸುವಾಗ ಹಲವು ನ್ಯೂನತೆಗಳು ಇದ್ದೇ ಇರುತ್ತವೆ ಅವುಗಳನ್ನು ಮೆಟ್ಟಿನಿಲ್ಲುವ ಕ್ಷಮತೆ ಟೀಮ್ ಇಂಡಿಯಾದ ಆಟಗಾರರಿಗೆ ಇದೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿ ಇದೇ 22 ರಿಂದ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅಗ್ರ ಸ್ಥಾನವನ್ನಕ್ಕೇರುವುದು ಹಾಗೂ ವಿಶ್ವ ಟೆಸ್ಟ್ ಫೈನಲ್‌ಗೆ ಅರ್ಹತೆ ಪಡೆಯುವ ದೃಷ್ಠಿಯಿಂದ ಈ ಟೆಸ್ಟ್ ಮಹತ್ವದಾಗಿದೆ ಎಂದು ಶಿಖರ್ ಧವನ್ ಹೇಳಿದ್ದಾರೆ.