IND vs AUS: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ಗೆ ಸರ್ಫರಾಜ್ ಖಾನ್ ಬದಲಿಗೆ ಧ್ರುವ್ ಜುರೆಲ್‌ಗೆ ಅವಕಾಶ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆರಂಭಕ್ಕೆ ಕೇವಲ 7 ದಿನಗಳು ಮಾತ್ರ ಬಾಕಿ ಉಳಿದಿವೆ. ಉಭಯ ತಂಡಗಳ ಮೊದಲ ಟೆಸ್ಟ್ ಪಂದ್ಯ ನವೆಂಬರ್ 22 ರಂದು ಪರ್ತ್‌ನಲ್ಲಿ ನಡೆಯಲಿದೆ. ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ತಲುಪಿದ್ದು, ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುವ ಬಗ್ಗೆ ಅನುಮಾನಗಳಿವೆ. ಅಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತದ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಆಸ್ಟ್ರೇಲಿಯಾ ಪ್ಯಾಟ್ ಕಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್ ಅವರಂತಹ ಸ್ಟಾರ್ ವೇಗದ ಬೌಲರ್‌ಗಳನ್ನು ಒಳಗೊಂಡಿದೆ. ತವರಿನಲ್ಲಿ ಆಸೀಸ್ ವೇಗಿಗಳನ್ನು ಪ್ರವಾಸಿ ಭಾರತ ತಂಡದ ಯುವ ಬ್ಯಾಟರ್‌ಗಳು ಎದುರಿಸುವುದು ಸವಾಲಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಸರ್ಫರಾಜ್ ಖಾನ್ ಹೊರಗುಳಿಯುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾದ ವೇಗದ ಮತ್ತು ಬೌನ್ಸಿ ಪಿಚ್‌ಗಳಲ್ಲಿ ಪ್ಯಾಟ್ ಕಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್ ಅವರ ಬೌಲಿಂಗ್‌ಗೆ ಆಡುವುದು ಸರ್ಫರಾಜ್ ಖಾನ್ ಕಷ್ಟಕರವಾಗಬಹುದು. ಏಕೆಂದರೆ ವಿದೇಶಿ ನೆಲದಲ್ಲಿ ಟೀಮ್ ಇಂಡಿಯಾ ಪರ ಸರ್ಫರಾಜ್ ಖಾನ್ ಆಡುತ್ತಿರುವುದು ಇದೇ ಮೊದಲು. ಹೀಗಾಗಿ ಇಲ್ಲಿನ ಸ್ಥಿತಿಗತಿಗಳು ಹೆಚ್ಚಾಗಿ ಅವರಿಗೆ ತಿಳಿದಿಲ್ಲ. ಈ ಕಾರಣದಿಂದಾಗಿ ಅವರು ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದಿಂದ ಹೊರಗುಳಿಯಬಹುದು.
ಧ್ರುವ್ ಜುರೆಲ್‌ಗೆ ಅವಕಾಶ
ಇಂತಹ ಸಂದರ್ಭದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಆಡುವ ಹನ್ನೊಂದರಲ್ಲಿ ಸರ್ಫರಾಜ್ ಖಾನ್ ಬದಲಿಗೆ ಧ್ರುವ್ ಜುರೆಲ್ ಅವರಿಗೆ ಅವಕಾಶ ನೀಡಬಹುದು. ಇತ್ತೀಚೆಗೆ ಮೆಲ್ಬೋರ್ನ್‌ನ ಬೌನ್ಸಿ ಪಿಚ್‌ನಲ್ಲಿ ಆಸ್ಟ್ರೇಲಿಯಾ ಎ ವಿರುದ್ಧದ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಧ್ರುವ್ ಜುರೆಲ್ ಅದ್ಭುತ ಪ್ರದರ್ಶನ ನೀಡಿದರು. ಧ್ರುವ್ ಜುರೆಲ್ ಮೊದಲ ಇನ್ನಿಂಗ್ಸ್‌ನಲ್ಲಿ 80 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 68 ರನ್ ಗಳಿಸಿದರು. ಈ ಅದ್ಭುತ ಇನ್ನಿಂಗ್ಸ್ ಮೂಲಕ ಹೆಡ್ ಕೋಚ್ ಗೌತಮ್ ಗಂಭೀರ್ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯ ಟೆಸ್ಟ್ ಸರಣಿಯಲ್ಲಿ ಸರ್ಫರಾಜ್ 5 ಇನ್ನಿಂಗ್ಸ್‌ಗಳಲ್ಲಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿಲ್ಲ. ಕೇವಲ 21 ರನ್ ಗಳಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಧ್ರುವ್ ಜುರೆಲ್ ಅವರಿಗೆ ಆಡುವ ಅವಕಾಶ ಸಿಕ್ಕರೆ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಸರಣಿಯ ಮೊದಲ ಪಂದ್ಯದಿಂದ ರೋಹಿತ್ ಶರ್ಮಾ ಹೊರಗುಳಿದರೆ, ಯಶಸ್ವಿ ಜೈಸ್ವಾಲ್ ಅವರೊಂದಿಗೆ ಕೆಎಲ್ ರಾಹುಲ್ ಆರಂಭಿಕರಾಗಿ ಕಾಣಿಸಿಕೊಳ್ಳಬಹುದು. ಆಗ ಮಧ್ಯಮ ಕ್ರಮಾಂಕದಲ್ಲಿ ಧ್ರುವ್ ಜುರೆಲ್‌ಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ.
ನಾಯಕ ರೋಹಿತ್ ಶರ್ಮಾ ಮೊದಲ ಟೆಸ್ಟ್ ಆಡುವ ಬಗ್ಗೆ ಅನುಮಾನವಿದೆ. ರೋಹಿತ್ ಶರ್ಮಾ ಎರಡನೇ ಮಗುವಿನ ಜನನಕ್ಕಾಗಿ ಇನ್ನೂ ಮುಂಬೈನಲ್ಲಿದ್ದಾರೆ. ಗುರುವಾರ ಭಾರತದ ಅಭ್ಯಾಸದ ಅವಧಿಯಲ್ಲಿ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಸರ್ಫರಾಜ್ ಖಾನ್ ಮೊಣಕೈಗೆ ಗಾಯ ಮಾಡಿಕೊಂಡಿದ್ದಾರೆ. ಆದರೆ ಗಾಯದಿಂದ ಸರ್ಫರಾಜ್ ಚೇತರಿಸಿಕೊಂಡಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications