KL Rahul: ತವರಿನ ಪಿಚ್‌ಗೆ ನಮಸ್ಕರಿಸಿದ ಕೆಎಲ್ ರಾಹುಲ್; ನಿವೃತ್ತಿ ಸುಳಿವು ಕೊಟ್ರಾ ಕನ್ನಡಿಗ?
ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಭಾರತವನ್ನು 8 ವಿಕೆಟ್‌ಗಳಿಂದ ಸೋಲಿಸಿದ ನ್ಯೂಜಿಲೆಂಡ್ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 36 ವರ್ಷಗಳ ಬಳಿಕ ನ್ಯೂಜಿಲೆಂಡ್ ತಂಡ ಭಾರತದ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದಿರುವುದು ಇದೇ ಮೊದಲು.
ಭಾರತದಲ್ಲಿ 1988 ರಿಂದ ನ್ಯೂಜಿಲೆಂಡ್ ಟೆಸ್ಟ್ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಭಾರತದ ಬ್ಯಾಟಿಂಗ್ ವೈಫಲ್ಯದಿಂದ ಬೆಂಗಳೂರು ಟೆಸ್ಟ್ ಪಂದ್ಯವನ್ನು ಕೈ ಚೆಲ್ಲಬೇಕಾಯಿತು. ಒಂದು ವೇಳೆ ಪುನಃ ಭಾರತ ಇದೇ ತಪ್ಪನ್ನು ಮಾಡಿದರೆ, ತವರಿನಲ್ಲಿ 12 ವರ್ಷಗಳ ಅಜೇಯ ಸರಣಿ ಗೆಲುವಿನ ಓಟ ಕೊನೆಗೊಳ್ಳಲಿದೆ. ಇದುವರೆಗೆ ಯಾವ ತಂಡವೂ ತವರಿನಲ್ಲಿ ಸತತವಾಗಿ 19 ಟೆಸ್ಟ್ ಸರಣಿಗಳನ್ನು ಗೆದ್ದಿಲ್ಲ. ಈ ದಾಖಲೆಯನ್ನು ಸೃಷ್ಟಿಸಲು ಭಾರತಕ್ಕೆ ನ್ಯೂಜಿಲೆಂಡ್ ವಿರುದ್ಧ ಸರಣಿ ಗೆಲುವಿನ ಪ್ರಾಮುಖತ್ಯಯಿದೆ.

ಭಾರತದ ಈ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿಗೆ ಸ್ಟಾರ್ ಬ್ಯಾಟರ್ ಫಾರ್ಮ್ ಎದುರಿಸುತ್ತಿರುವುದು ದೊಡ್ಡ ತಲೆ ನೋವಾಗಿದೆ. ಭಾರತದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಫ್ಲಾಪ್ ಆಗಿದ್ದು, ಹಲವು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ವಿಡಿಯೋವೊಂದು ಹೊರಬಿದ್ದಿದ್ದು, ಬೆಂಗಳೂರಿನಲ್ಲಿ ಕೆಎಲ್ ರಾಹುಲ್ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ತವರಿನಲ್ಲಿ ಅಬ್ಬರಿಸಿದ ಕನ್ನಡಿಗ
ಬೆಂಗಳೂರು ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಕೆಎಲ್ ರಾಹುಲ್ ತಮ್ಮ ಪ್ರದರ್ಶನದಿಂದ ಪ್ರಭಾವ ಬೀರುವಲ್ಲಿ ಯಶಸ್ವಿಯಾಗಲಿಲ್ಲ. 46 ರನ್‌ಗಳಿಗೆ ಆಲೌಟ್ ಆದ ಭಾರತ ತಂಡದ ಮೊದಲ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. 6 ಎಸೆತಗಳನ್ನು ಎದುರಿಸಿದ ಅವರು ಶೂನ್ಯಕ್ಕೆ ಔಟಾದರು. ಎರಡನೇ ಇನ್ನಿಂಗ್ಸ್‌ನಲ್ಲಿ, ರಿಷಬ್ ಪಂತ್ ಮತ್ತು ಸರ್ಫರಾಜ್ ಖಾನ್ ಭಾರತವನ್ನು ಸಂಕಷ್ಟದಿಂದ ಪಾರು ಮಾಡಿದರು. ಈ ಇಬ್ಬರು ಔಟ್ ಆದ ಬಳಿಕ ರಾಹುಲ್ ದೊಡ್ಡ ಮುನ್ನಡೆಯತ್ತ ಕೊಂಡೊಯ್ಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ರಾಹುಲ್ ಗಳಿಸಿದ್ದು ಮಾತ್ರ 12 ರನ್. ಇಂತಹ ಪರಿಸ್ಥಿತಿಯಲ್ಲಿ ರಾಹುಲ್ ನಡೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪಂದ್ಯ ಮುಗಿದ ನಂತರ ಕೆಎಲ್ ರಾಹುಲ್ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಪಿಚ್ ಅನ್ನು ಮುಟ್ಟಿ ನಮಸ್ಕರಿಸುತ್ತಿರುವುದು ಸೆರೆಯಾಗಿದೆ. ಇದನ್ನು ನೋಡಿದ ಅನೇಕ ಅಭಿಮಾನಿಗಳು, ರಾಹುಲ್ ಅವರ ಈ ಇಂಗಿತವು ಅವರ ಕೊನೆಯ ಟೆಸ್ಟ್ ಪಂದ್ಯ ಆಡಿರುವುದಕ್ಕೆ ಸಾಕ್ಷಿ ಎಂದು ಹೇಳುತ್ತಿದ್ದಾರೆ. ಇದಲ್ಲದೆ, ವಿಡಿಯೋಗೆ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ಆದರೆ, ಇದು ಕೆಎಲ್ ರಾಹುಲ್ ಅವರ ಕೊನೆಯ ಟೆಸ್ಟ್ ಪಂದ್ಯ ಎಂಬುದು ಖಚಿತವಾಗಿಲ್ಲ. ರಾಹುಲ್ ಅವರು ಸಹಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಕೆಎಲ್ ರಾಹುಲ್ ಅವರ ಫಾರ್ಮ್ ವಿಶೇಷವೇನಲ್ಲ. ಬೆಂಗಳೂರಿನಲ್ಲಿ ನಡೆದ ಪಂದ್ಯ ಸೇರಿದಂತೆ ಇದುವರೆಗೆ ಒಟ್ಟು 5 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ ಎರಡು ಅರ್ಧಶತಕಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪಂದ್ಯಗಳಲ್ಲಿ ರಾಹುಲ್ ಸ್ಕೋರ್‌ಗಳು 8, 86, 22, 16, 22*, 68, 0, 12. ಇದೀಗ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಿಗೆ ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಕೆಎಲ್ ರಾಹುಲ್ ಪ್ಲೇಯಿಂಗ್-11 ರಲ್ಲಿ ಅವಕಾಶ ಪಡೆಯುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications