Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs RCB: ಟಾಸ್ ಟ್ಯಾಂಪರಿಂಗ್ ಮಾಡಿದ್ರಾ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್?; ಇಲ್ಲಿದೆ ಫ್ಯಾಕ್ಟ್ ಚೆಕ್

ಗುರುವಾರ, ಏಪ್ರಿಲ್ 11ರಂದು ನಡೆದ ಮುಂಬೈನ ವಾಂಖೆಡೆಯಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಕಪಕ್ಷೀಯ ಗೆಲುವು ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ ರಜತ್ ಪಾಟಿದಾರ್, ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ದಿನೇಶ್ ಕಾರ್ತಿಕ್ ಅಮೋಘ ಅರ್ಧಶತಕಗಳ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್‌ಗಳನ್ನು ಕಲೆಹಾಕಿತು.

Did Match Referee Javagal Srinath Tamper with Toss During MI vs RCB IPL Match Fact Check

197 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಇಶಾನ್ ಕಿಶನ್, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೇವಲ 15.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್ ಗಳಿಸಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಆದರೆ, ಪಂದ್ಯಕ್ಕೂ ಮುನ್ನ ನಡೆದ ಟಾಸ್ ಪ್ರಕ್ರಿಯೆ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆರ್‌ಸಿಬಿ ಹಾಗೂ ಕ್ರಿಕೆಟ್ ಅಭಿಮಾನಿಗಳು ಮ್ಯಾಚ್ ರೆಫರಿ ಮತ್ತು ಭಾರತದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ಟಾಸ್‌ನ ಫಲಿತಾಂಶವನ್ನು ಬದಲಾಯಿಸಿದರು, ಮುಂಬೈ ಇಂಡಿಯನ್ಸ್‌ಗೆ ತಮ್ಮ ಒಲವು ತೋರಿದರು ಎಂದು ಆರೋಪಿಸುತ್ತಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ನೆಟ್ಟಿಗರು ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ನಾಣ್ಯವನ್ನು ತೆಗೆದುಕೊಳ್ಳುವಾಗ ಬದಿಗಳನ್ನು ತಿರುಗಿಸುವ ಮೂಲಕ ಅದನ್ನು ತಿರುಚಿದ್ದಾರೆ ಎಂದು ಹೇಳುತ್ತಿದ್ದಾರೆ.

ಆದರೆ, ಮತ್ತೊಂದು ಬಳಕೆದಾರರಿಂದ ರಿಯಾಲಿಟಿ ಚೆಕ್ ಅನ್ನು ಪಡೆದಾಗ ಜಾವಗಲ್ ಶ್ರೀನಾಥ್ ಟಾಸ್ ನಂತರ ನಾಣ್ಯವನ್ನು ಸರಿಯಾದ ರೀತಿಯಲ್ಲಿ ಎತ್ತಿದ್ದಾರೆ ಎಂದು ಹೆಚ್ಚು ಸ್ಪಷ್ಟವಾದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಜಾವಗಲ್ ಶ್ರೀನಾಥ್ ನಾಣ್ಯದ ಬದಿಗಳನ್ನು ತಿರುಗಿಸಲಿಲ್ಲ, ಬದಲಿಗೆ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮಾಡಿದ ಕರೆಯನ್ನು ಮರೆತಿದ್ದಾರೆ ಎಂದು ವಿಡಿಯೋದಲ್ಲಿ ತೋರಿಸಲಾಗಿದೆ.

ಮುಂಬೈ ಇಂಡಿಯನ್ಸ್ ಫ್ಯಾನ್ಸ್ಖಾತೆಯಲ್ಲಿ, "ಟಾಸ್‌ನ ಸ್ಪಷ್ಟ ವಿಡಿಯೋ ಇಲ್ಲಿದೆ... ನಿಮಗೆ ಇನ್ನೂ ಅನುಮಾನವಿದ್ದರೆ ಕಣ್ಣಿನ ಆಸ್ಪತ್ರೆ ಅಥವಾ ಮಾನಸಿಕ ಆಸ್ಪತ್ರೆಗೆ ಹೋಗಿ," ಎಂದು ವಿಡಿಯೋದಲ್ಲಿದಲ್ಲಿ ಬರೆದುಕೊಂಡಿದ್ದಾರೆ.

ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ, ವೇಗಿ ಜಸ್ಪ್ರೀತ್ ಬುಮ್ರಾ ಆರ್‌ಸಿಬಿ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿಯಲು ಐದು ವಿಕೆಟ್‌ಗಳನ್ನು ಕಬಳಿಸಿದರು. ನಂತರ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಸ್ಫೋಟಕ ಅರ್ಧಶತಕಗಳ ಬಳಿಕ, ಮುಂಬೈ ಇಂಡಿಯನ್ಸ್ ಐಪಿಎಲ್ 2024ರಲ್ಲಿ ತನ್ನ ಎರಡನೇ ಗೆಲುವಿನ ಮುದ್ರೆ ಒತ್ತಿದರು.

ಜಸ್ಪ್ರೀತ್ ಬುಮ್ರಾ ತಮ್ಮ 4 ಓವರ್‌ಗಳ ಕೋಟಾದಲ್ಲಿ 21 ರನ್ ನೀಡಿ 5 ವಿಕೆಟ್ ಪಡೆದ ಪರಿಣಾಮ, ಅವರಿಗೆ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ತಂದುಕೊಟ್ಟಿತು.

Story first published: Saturday, April 13, 2024, 17:04 [IST]
Other articles published on Apr 13, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+