ಆಗಸ್ಟ್ 8 ಗುರುವಾರ, ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಟಾರ್ ಆಟಗಾರರಿಂದ ಕಂಗೊಳಿಸುತ್ತಿದ್ದರೂ ಬಲಿಷ್ಠ ಟೀಮ್ ಇಂಡಿಯಾ 0-2 ಅಂತರದಿಂದ ಅವಮಾನಕರ ಸೋಲು ಅನುಭವಿಸಬೇಕಾಯಿತು. 27 ವರ್ಷಗಳ ಬಳಿಕ ಶ್ರೀಲಂಕಾ ನೆಲದಲ್ಲಿ ಭಾರತ ಏಕದಿನ ಸರಣಿಯನ್ನು ಕೈ ಚೆಲ್ಲಿದೆ.
ಟೀಮ್ ಇಂಡಿಯಾ ಯುವ ಆಟಗಾರರಿಂದ ಅನುಭವಿಗಳ ವರೆಗೂ ಎಲ್ಲರನ್ನು ಒಳಗೊಂಡಿತ್ತು. ಆದರೂ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ಇದೆಲ್ಲದರ ನಡುವೆ ಟೀಮ್ ಇಂಡಿಯಾ ಆಟಗಾರನೊಬ್ಬ ಈ ಸರಣಿಯಲ್ಲಿ ಕೊನೆಯ ಏಕದಿನ ಪಂದ್ಯವನ್ನಾಡಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಸಾಕಷ್ಟು ಕಾರಣ ಇಲ್ಲಿವೆ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಈ ಆಟಗಾರನಿಗೆ ಸತತವಾಗಿ ಆಡುವ ಅವಕಾಶವನ್ನು ನೀಡಲಾಯಿತು. ಆದರೆ, ಈ ಆಟಗಾರ ತನ್ನ ಫ್ಲಾಪ್ ಪ್ರದರ್ಶನದ ಮೂಲಕ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ನಂಬಿಕೆಯನ್ನು ಹುಸಿಗೊಳಿಸಿದರು.
ಇಂತಹ ಸಂದರ್ಭದಲ್ಲಿ ಈ ಆಟಗಾರ ಭಾರತಕ್ಕಾಗಿ ತನ್ನ ಕೊನೆಯ ಏಕದಿನ ಆಡಿದ್ದಾನೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ ಈ ಆಟಗಾರರನಿಗೆ ಭವಿಷ್ಯದಲ್ಲಿ ಭಾರತ ಏಕದಿನ ತಂಡದಲ್ಲಿ ಅವಕಾಶ ಸಿಗುವುದು ಬಹುತೇಕ ಅಸಾಧ್ಯವಾಗಿದೆ.
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಲ್ ರೌಂಡರ್ ಶಿವಂ ದುಬೆ ಅತ್ಯಂತ ಕಳಪೆ ಪ್ರದರ್ಶನ ನೀಡಿದರು. ಶಿವಂ ದುಬೆ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡಲ್ಲೂ ಯಶಸ್ಸು ಕಾಣಲು ಸಾಧ್ಯವಾಗಲಿಲ್ಲ.
ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ಶಿವಂ ದುಬೆ 25, 0 ಮತ್ತು 9 ರನ್ ಗಳಿಸುವ ಮೂಲಕ ಸಿಕ್ಕ ಅವಕಾಶವನ್ನು ಕಳೆದುಕೊಂಡಿದ್ದಾರೆ. ಇನ್ನು ಬೌಲಿಂಗ್‌ನಲ್ಲಿಯೂ ಶಿವಂ ದುಬೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಈ ಎಲ್ಲಾ ಅಂಕಿ-ಅಂಶಗಳ ಆಧಾರದ ಮೇಲೆ ಶಿವಂ ದುಬೆಗೆ ಏಕದಿನ ತಂಡದಲ್ಲಿ ಅವಕಾಶ ಸಿಗುವುದು ಅನುಮಾನವಾಗಿದೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಆಡಲಿಲ್ಲ. ಈ ಕಾರಣದಿಂದಾಗಿ ಶಿವಂ ದುಬೆಗೆ ಏಕದಿನ ತಂಡದಲ್ಲಿ ಆಲ್ ರೌಂಡರ್ ಆಗಿ ಅವಕಾಶ ನೀಡಲಾಯಿತು. ಆದರೆ ಶಿವಂ ದುಬೆ ಕಳಪೆ ಪ್ರದರ್ಶನ ನೀಡಿ ಕೋಚ್ ಮತ್ತು ನಾಯಕನ ಆತ್ಮವಿಶ್ವಾಸವನ್ನು ಉಳಿಸಿಕೊಳ್ಳಲಿಲ್ಲ.
ಇಂತಹ ಪರಿಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತ ಏಕದಿನ ತಂಡಕ್ಕೆ ಮರಳಿದರೆ, ಶಿವಂ ದುಬೆ ತನ್ನ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ಹಾರ್ದಿಕ್ ಪಾಂಡ್ಯ ಜೊತೆಗೆ ಏಕದಿನ ತಂಡದಲ್ಲಿ ಶಿವಂ ದುಬೆ ಉಳಿಯುವುದು ತುಂಬಾ ಕಷ್ಟ.
ಮುಂದಿನ ವರ್ಷ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಮುಂದಿನ ಏಕದಿನ ಪಂದ್ಯವನ್ನು ಆಡಲಿದೆ. ಹಾರ್ದಿಕ್ ಪಾಂಡ್ಯ ಸಹಾ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಲ್ ರೌಂಡರ್ ಆಗಿ ಟೀಮ್ ಇಂಡಿಯಾದಲ್ಲಿ ಆಡಲಿದ್ದಾರೆ.
ಜೊತೆಗೆ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್ ಮತ್ತು ರವೀಂದ್ರ ಜಡೇಜಾ ಅವರು ಅಗ್ರ ಕ್ರಮಾಂಕದಲ್ಲಿ ಅವಕಾಶ ಪಡೆಯಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಶಿವಂ ದುಬೆ, ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ ಅವರಂತಹ ಆಟಗಾರರು ತಮ್ಮ ಕಳಪೆ ಪ್ರದರ್ಶನದ ಮೂಲಕ ಅವಕಾಶವನ್ನು ಕಳೆದುಕೊಳ್ಳಬಹುದು.
ಅದರಲ್ಲೂ ಶಿವಂ ದುಬೆಗೆ ಏಕದಿನ ತಂಡಕ್ಕೆ ಮರಳುವುದು ಅನುಮಾನ ಎನ್ನಲಾಗುತ್ತಿದೆ. ಶಿವಂ ದುಬೆ ಭಾರತಕ್ಕಾಗಿ ಇದುವರೆಗೆ 4 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 10.75 ರ ಕಳಪೆ ಸರಾಸರಿಯಲ್ಲಿ 43 ರನ್ ಗಳಿಸಿದ್ದು, ಒಂದು ವಿಕೆಟ್ ಪಡೆದಿದ್ದಾರೆ.