Dil Jashn Bole: ರಣವೀರ್, ಧನಶ್ರೀ ಕಾಣಿಸಿಕೊಂಡಿರುವ ಐಸಿಸಿ ಏಕದಿನ ವಿಶ್ವಕಪ್ ಅಧಿಕೃತ ಗೀತೆ ಬಿಡುಗಡೆ; ವಿಡಿಯೋ
ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲೇ ನಡೆಯಲಿರುವ 2023ರ ಐಸಿಸಿ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯ ಅಧಿಕೃತ ಗೀತೆಯಲ್ಲಿ ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ.
'ದಿಲ್ ಜಶ್ನ್ ಬೋಲೆ' ಎಂಬ ಶೀರ್ಷಿಕೆಯ ಈ ಗೀತೆಯನ್ನು ಪ್ರೀತಮ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಎಕ್ಸ್ (ಟ್ವಿಟ್ಟರ್)ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೀತೆಯೆ ಮೊದಲ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, "ಅತ್ಯುತ್ತಮ ಕ್ರಿಕೆಟಿಂಗ್ ಜಶ್ನ್ ಬಹುತೇಕ ಬರಲಿದೆ, ಮಧ್ಯಾಹ್ನ 12 ಗಂಟೆಗೆ, ಕ್ರಿಕೆಟ್ ವಿಶ್ವಕಪ್ 2023,'' ಎಂದು ಶೀರ್ಷಿಕೆ ನೀಡಲಾಗಿದೆ.

ಪೋಸ್ಟರ್‌ನಲ್ಲಿ ನಟ ರಣವೀರ್ ಸಿಂಗ್ ಅವರು ಮೆರೂನ್ ಸೂಟ್ ಧರಿಸಿದ್ದಾರೆ. ಅದಕ್ಕೆ ಸರಿ ಹೊಂದುವ ಟೋಪಿ ಮತ್ತು ಗಾಗಲ್‌ನೊಂದಿಗೆ ತಮ್ಮ ನಗುವಿನ ನೋಟ ಬೀರಿದರು. 2023ರ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಅಧಿಕೃತ ಗೀತೆ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಿದೆ.
2023ರ ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಗೀತೆಯಲ್ಲಿ ಭಾರತೀಯ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಪತ್ನಿ ಧನಶ್ರೀ ವರ್ಮಾ ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಅಕ್ಟೋಬರ್ 5ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದೊಂದಿಗೆ ವಿಶ್ವಕಪ್‌ಗೆ ಚಾಲನೆ ಸಿಗಲಿದ್ದು, ನವೆಂಬರ್ 19ರಂದು ಅದೇ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಅಕ್ಟೋಬರ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ ಭಾರತ ತನ್ನ ಅಭಿಯಾನ ಆರಂಭಿಸಲಿದೆ. ನಂತರ, ಅಕ್ಟೋಬರ್ 14ರಂದು ಅಹಮದಾಬಾದ್‌ನಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಹೈ-ವೋಲ್ಟೇಜ್ ಪಂದ್ಯದಲ್ಲಿ ಸೆಣಸಾಡಲಿದೆ.
ದೇಶದ 10 ಸ್ಥಳಗಳಲ್ಲಿ ನಡೆಯಲಿರುವ ಅತಿದೊಡ್ಡ ಕ್ರಿಕೆಟ್ ವಿಶ್ವಕಪ್‌ನಲ್ಲಿ ವಿಶ್ವದ ಹತ್ತು ತಂಡಗಳು ಭಾಗವಹಿಸಲಿವೆ. ನೆದರ್ಲ್ಯಾಂಡ್ಸ್ ಮತ್ತು ಶ್ರೀಲಂಕಾ ಅರ್ಹತಾ ಪಂದ್ಯಗಳ ಮೂಲಕ ಮುಖ್ಯ ಪಂದ್ಯಾವಳಿಗೆ ಪ್ರವೇಶ ಪಡೆದಿವೆ.
ಆದಾಗ್ಯೂ, ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಏಕದಿನ ವಿಶ್ವಕಪ್ ಪಂದ್ಯಾವಳಿಯಿಂದ ಹೊರಗುಳಿಯುತ್ತಿರುವುದು ಇದೇ ಮೊದಲ ನಿದರ್ಶನವಾಗಿದೆ. ಐಸಿಸಿ ಟೂರ್ನಿಯು ಒಟ್ಟು 46 ದಿನಗಳಲ್ಲಿ ನಾಕೌಟ್ ಪಂದ್ಯಗಳು ಸೇರಿ 48 ಪಂದ್ಯಗಳನ್ನು ಹೊಂದಿದೆ.
2023ರ ಏಕದಿನ ವಿಶ್ವಕಪ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications