World Test Championship 2025: ಡಬ್ಲ್ಯೂಟಿಸಿ ಫೈನಲ್ ತಲುಪುವ ತಂಡಗಳ ಬಗ್ಗೆ ದಿನೇಶ್ ಕಾರ್ತಿಕ್ ಭವಿಷ್ಯ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್ 2025ರ ಜೂನ್ 11 ರಿಂದ 15 ರವರೆಗೆ ಲಾರ್ಡ್ಸ್‌ನ ಐತಿಹಾಸಿಕ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಫೈನಲ್‌ನಲ್ಲಿ ಯಾವ ಎರಡು ತಂಡಗಳು ಮುಖಾಮುಖಿಯಾಗಲಿವೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆಲ್ಲಲು ಭಾರತ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ಗಳು ಮುಂಚೂಣಿಯಯಲ್ಲಿವೆ. ಹೀಗಾಗಿ ಸಾಮಾನ್ಯವಾಗಿ ಎಲ್ಲ ತಂಡಗಳ ಪ್ರಬಲ ಪೈಪೋಟಿ ನಡೆಯುತ್ತಿದೆ. ಇತ್ತೀಚೆಗೆ ಪಾಕಿಸ್ತಾನ ವಿರುದ್ಧ ಟೆಸ್ಟ್ ಸರಣಿ ಗೆಲುವಿನ ಬಳಿಕ ಬಾಂಗ್ಲಾದೇಶ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದು ಟೆಸ್ಟ್ ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿದೆ.

ಇದೀಗ ಟೀಮ್ ಇಂಡಿಯಾದ ಮಾಜಿ ವಿಕೆಟ್‌ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ಡಬ್ಲ್ಯೂಟಿಸಿ ಫೈನಲ್ ತಲುಪುವ ತಂಡಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಐಸಿಸಿ ಟೂರ್ನಿಯ ಎರಡು ಸೀಸನ್‌ಗಳಲ್ಲಿ ಭಾರತ ತಂಡ ಫೈನಲ್ ತಲುಪಿದೆ. ಆದರೆ ಮೊದಲು ನ್ಯೂಜಿಲೆಂಡ್ ಮತ್ತು ನಂತರ ಆಸ್ಟ್ರೇಲಿಯಾ ವಿರುದ್ಧ ಸೋಲುವ ಮೂಲಕ ಪ್ರಶಸ್ತಿ ಗೆಲ್ಲುವ ಕನಸು ಭಗ್ನಗೊಂಡಿದೆ.
ದಿನೇಶ್ ಕಾರ್ತಿಕ್ ಭವಿಷ್ಯ
ಡಬ್ಲ್ಯೂಟಿಸಿ ಫೈನಲ್ ಮುಖಾಮುಖಿಯಾಗುವ ಎರಡು ತಂಡಗಳು ಯಾವುವು ಎಂಬ ಅಭಿಮಾನಿಯ ಪ್ರಶ್ನೆಗೆ ಕಾರ್ತಿಕ್ ಉತ್ತರಿಸಿದ್ದಾರೆ. "ಟೀಮ್ ಇಂಡಿಯಾ ಎದುರು ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡ ಫೈನಲ್ ಆಡಲಿದೆ ಎಂದು ನಾನು ಭಾವಿಸುತ್ತೇನೆ. ಕಳೆದ ವರ್ಷ ಡಬ್ಲ್ಯೂಟಿಸಿ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ ಈ ಬಾರಿ ಸೇಡು ತೀರಿಸಿಕೊಳ್ಳಲು ಭಾರತಕ್ಕೆ ಉತ್ತಮ ಅವಕಾಶವಿದೆ" ಎಂದು ಹೇಳಿದ್ದಾರೆ.
ಭಾರತದ ಕನಸು ಭಗ್ನ
2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಲಂಡನ್‌ನ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆದಿತ್ತು. ಈ ಫೈನಲ್ ಪಂದ್ಯದಲ್ಲಿ ಭಾರತ 209 ರನ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ ಸತತ ಎರಡನೇ ಬಾರಿಗೆ ಈ ಪ್ರಶಸ್ತಿಯನ್ನು ಗೆಲ್ಲುವ ಕನಸು ಭಗ್ನಗೊಂಡಿತ್ತು. 2021 ರಲ್ಲಿ ಸೌತಾಂಪ್ಟನ್‌ನಲ್ಲಿ ಭಾರತ ತಂಡವನ್ನು ನ್ಯೂಜಿಲೆಂಡ್ 8 ವಿಕೆಟ್‌ಗಳಿಂದ ಸೋಲಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications