ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸೂರ್ಯಕುಮಾರ್ ಬದಲಿಗೆ ಈತನಿಗೆ ಆಡಲು ಅವಕಾಶ ನೀಡಿ ಎಂದು ಒತ್ತಾಯಿಸಿದ ಡಿಕೆ

Dinesh Karthik said would love to see Sanju Samson instead of Suryakumar Yadav in final T20I against New Zealand

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯ ನಡೆಯುತ್ತಿದ್ದು ಟೀಮ್ ಇಂಡಿಯಾ ಸರಣಿ ಗೆಲುವಿನತ್ತ ಚಿತ್ತ ನೆಟ್ಟಿದೆ. ಮೊದಲ ಪಂದ್ಯ ಮಳೆಗೆ ಆಹುತಿಯಾದ ಬಳಿಕ ಎರಡನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್‌ನಿಂದಾಗಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ ಅಂತಿಮ ಪಂದ್ಯವನ್ನಾಡಲು ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಣಕ್ಕಿಳಿದಿವೆ. ಈ ಪಂದ್ಯದ ಟಾಸ್‌ಗೂ ಮುನ್ನ ಹಿರಿಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಸೂರ್ಯಕುಮಾರ್ ಅವರನ್ನು ಕಣಕ್ಕಿಳಿಸುವ ಬದಲಿಗೆ ಮತ್ತೊಬ್ಬ ಆಟಗಾರನಿಗೆ ಅವಕಾಶ ನೀಡಬೇಕು ಎಂದಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಸೂರ್ಯಕುಮಾರ್ ಯಾದವ್‌ಗೆ ವಿಶ್ರಾಂತಿ ನೀಡಿ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಬೇಕು ಎಂದಿದ್ದಾರೆ ದಿನೇಶ್ ಕಾರ್ತಿಕ್. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪಂದ್ಯಗಳನ್ನು ಆಡದ ಆಟಗಾರರನ್ನು ಹೊರಗಿಡುವುದು ಅನ್ಯಾಯ ಮಾಡಿದಂತೆ ಎಂಬ ಅಭಿಪ್ರಾಯವನ್ನು ಹೇಳಿದ್ದಾರೆ ದಿನೇಶ್ ಕಾರ್ತಿಕ್ . ಸಂಜು ಸ್ಯಾಮ್ಸನ್ ವಿಶ್ವಕಪ್‌ನ ತಂಡದಲ್ಲಿ ಅವಕಾಶ ಪಡೆದುಕೊಂಡಿರಲಿಲ್ಲ. ಆದರೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅವಕಾಶ ಪಡೆದುಕೊಂಡಿರುವ ಸಂಜು ಸ್ಯಾಮ್ಸನ್‌ ಅಂತಿಮ ಪಂದ್ಯದಲ್ಲಿಯೂ ಆಡುವ ಅವಕಾಶ ಗಳಿಸಲು ವಿಫಲವಾಗಿದ್ದಾರೆ.

IPL 2023: ಈ ಆಟಗಾರನಿಗೆ ನಾಯಕತ್ವ ನೀಡಲು ಮುಂದಾದ ಸನ್‌ರೈಸರ್ಸ್ ಹೈದರಾಬಾದ್IPL 2023: ಈ ಆಟಗಾರನಿಗೆ ನಾಯಕತ್ವ ನೀಡಲು ಮುಂದಾದ ಸನ್‌ರೈಸರ್ಸ್ ಹೈದರಾಬಾದ್

ಮೂರನೇ ಪಂದ್ಯಕ್ಕೂ ಇಲ್ಲ ಸಂಜು

ಮೂರನೇ ಪಂದ್ಯಕ್ಕೂ ಇಲ್ಲ ಸಂಜು

ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ. ಟೀಮ್ ಇಂಡಿಯಾ ಮೂರನೇ ಪಂದ್ಯದಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆ ಮಾಡದೆ ಕಣಕ್ಕಿಳಿಯುತ್ತಿದೆ. ಈ ಪಂದ್ಯದಲ್ಲಿ ಒಟ್ಟಾರೆಯಾಗಿ ಕೇವಲ ಒಂದು ಬದಲಾವಣೆ ಮಾತ್ರವೇ ಮಾಡಿಕೊಂಡಿದ್ದು ವಾಶಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್‌ಗೆ ಅವಕಾಶ ನೀಡಲಾಗಿದೆ.

ಸಂಜು ಬಳಿ ಕೌಶಲ್ಯವಿದೆ

ಸಂಜು ಬಳಿ ಕೌಶಲ್ಯವಿದೆ

ನೇಪಿಯರ್‌ನ ವೇಗದ ಬೌಲಿಂಗ್‌ಗೆ ಸಾಥ್ ಕೊಡುವ ಪಿಚ್‌ನಲ್ಲಿ ಅದ್ಭುತವಾಗಿ ಬ್ಯಾಟಿಂಗ್ ನಡೆಸುವ ಕೌಶಲ್ಯ ಸಂಜು ಸ್ಯಾಮ್ಸನ್‌ಗೆ ಇದೆ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ. ಅವರಲ್ಲಿ ವೇಗದ ಬೌಲಿಂಗ್ ವಿರುದ್ಧ ಆಡುವ ಕೌಶಲ್ಯ ಹಾಗೂ ತಾಂತ್ರಿಕತೆಯಿದೆ ಎಂದಿದ್ದಾರೆ ಡಿಕೆ. "ಟೀಮ್ ಇಂಡಿಯಾದಲ್ಲಿ ಈಗ ಸಂಜು ಸ್ಯಾಮ್ಸನ್ ಆಡುವ ಬಳಗದಲ್ಲಿ ಸೇರಿಕೊಳ್ಳಲು ಸೂರ್ಯಕುಮಾರ್ ಯಾದವ್‌ಗೆ ಬದಲಿಯಾಗಿ ಕಣಕ್ಕಿಳಿಯಬಹುದು. ಏಕದಿನ ಸರಣಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಬಹುದು. ಉಳಿದವರು ಈಗಷ್ಟೇ ಸೇರಿಕೊಂಡಿದ್ದು ಅವರನ್ನು ಹೊರಗಿಟ್ಟರೆ ಅನ್ಯಾಯವಾಗುತ್ತದೆ" ಎಂದಿದ್ದಾರೆ ದಿನೇಶ್ ಕಾರ್ತಿಕ್.

ಬ್ಯಾಟಿಂಗ್ ಆಯ್ಕೆ ಮಾಡಿದ ನ್ಯೂಜಿಲೆಂಡ್

ಬ್ಯಾಟಿಂಗ್ ಆಯ್ಕೆ ಮಾಡಿದ ನ್ಯೂಜಿಲೆಂಡ್

ಇನ್ನು ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ರನ್ ಬೆನ್ನಟ್ಟುವ ಸವಾಲು ಸ್ವೀಕರಿಸಿದೆ. ಪಂದ್ಯದ ಆರಂಭಕ್ಕೆ ಮಳೆ ಅಡ್ಡಿಯಾದ ಕಾರಣ ಪಂದ್ಯ ಸ್ವಲ್ಪ ತಡವಾಗಿ ಆರಂಭವಾಯಿತು.

ಇತ್ತಂಡಗಳ ಆಡುವ ಬಳಗ

ಇತ್ತಂಡಗಳ ಆಡುವ ಬಳಗ

ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ (ನಾಯಕ), ಆಡಮ್ ಮಿಲ್ನೆ, ಲೂಕಿ ಫರ್ಗ್ಯೂಸನ್
ಬೆಂಚ್: ಮೈಕೆಲ್ ಬ್ರೇಸ್ವೆಲ್, ಬ್ಲೇರ್ ಟಿಕ್ನರ್

ಟೀಮ್ ಇಂಡಿಯಾ ಆಡುವ ಬಳಗ: ಇಶಾನ್ ಕಿಶನ್, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್
ಬೆಂಚ್: ಸಂಜು ಸ್ಯಾಮ್ಸನ್, ಕುಲದೀಪ್ ಯಾದವ್, ಶುಬ್ಮನ್ ಗಿಲ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್

Story first published: Tuesday, November 22, 2022, 12:54 [IST]
Other articles published on Nov 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X