ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ವರುಣ್ ಚಕ್ರವರ್ತಿಗೆ ಅವಕಾಶ? ಬಿಸಿಸಿಐ ಗಮನ ಸೆಳೆಯುತ್ತಾ ಡಿಕೆ ಟ್ವೀಟ್?
ಟೀಮ್ ಇಂಡಿಯಾದ ಯುವ ತಂಡ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಆಡಬೇಕಿದೆ. ಈ ವೇಳೆ ಟೀಮ್ ಇಂಡಿಯಾ ತಾನಾ ಮಾಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಎರಡನೇ ಟಿ20 ಪಂದ್ಯದಲ್ಲಿ ಸೋಲು ಕಂಡಿದೆ. ಈ ಮೂಲಕ ಭಾರತದ ಅಜೇಯ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. ಟೀಮ್ ಇಂಡಿಯಾ ಎರಡನೇ ಟಿ20 ಪಂದ್ಯದಲ್ಲಿ ಸೋಲು ಕಂಡಿದ್ದರೂ, ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ ಸ್ಥಿರ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.
ವರುಣ್ ಚಕ್ರವರ್ತಿ ಅವರ ಮೊನಚಾರ ದಾಳಿಯನ್ನು ಎದುರಿಸುವಲ್ಲಿ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳು ವಿಫಲರಾಗಿದ್ದಾರೆ. ಇವರ ಅಮೋಘ ಸ್ಪಿನ್‌ಗೆ ಆತಿಥೇಯ ತಂಡದ ಅರ್ಧದಷ್ಟು ಬ್ಯಾಟರ್‌ಗಳು ಪೆವಿಲಿಯನ್ ಹಾದಿ ಹಿಡಿದಿದ್ದಾರೆ. ಇವರ ಈ ಪ್ರದರ್ಶನವನ್ನು ಕಂಡು ಇವರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಥಾನ ನೀಡಬೇಕು ಎಂಬ ಕೂಗುಗಳು ಕೇಳಿ ಬರುತ್ತಿವೆ. ಟೀಮ್ ಇಂಡಿಯಾದ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಸಹ ಇದಕ್ಕೆ ಧ್ವನಿ ಗೂಡಿಸಿದ್ದು, ವರುಣ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವಂತೆ ತಿಳಿಸಿದ್ದಾರೆ.

ಡಿಕೆ ಹೇಳಿದ್ದೇನು?
ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟರ್, ಆಯ್ಕೆದಾರರಿಗೆ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಈ ವೇಳೆ ಟೀಮ್ ಇಂಡಿಯಾಕ್ಕೆ ಈ ಯುವ ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ ಅವರಿಗೆ ಸ್ಥಾನ ನೀಡಬೇಕು ಎಂದು ಹೇಳಿದ್ದಾರೆ. ಯುವ ಸ್ಪಿನ್ ಬೌಲರ್ ಸದ್ಯ ತಮ್ಮ ವೃತ್ತಿ ಜೀವನದ ಅಮೋಘ ಫಾರ್ಮ್‌ನಲ್ಲಿದ್ದಾರೆ. ಇವರನ್ನು ತಂಡಕ್ಕೆ ಆಯ್ಕೆ ಮಾಡದೇ ಇದ್ದಲ್ಲಿ ದೊಡ್ಡ ತಪ್ಪು ಆಗಲಿದೆ ಎಂದು ಸಾಬೀತಾಗುತ್ತದೆ ಎಂದು ಕಾರ್ತಿ ಸಾಮಾಜಿಕ ತಾಣದಲ್ಲಿ ತಮ್ಮ ಅನಿಸಿಕೆಯನ್ನು ಪೋಸ್ಟ್ ಮಾಡಿದ್ದಾರೆ.
ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿರುವ ದಿನೇಶ್ ಕಾರ್ತಿಕ್, ಭಾರತೀಯ ತಂಡ ವರುಣ್ ಚಕ್ರವರ್ತಿಯ ಅನುಭವವನ್ನು ಪರಿಗಣಿಸಿ, ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ನೀಡಬೇಕು. ಇಲ್ಲದೇ ಇದ್ದರೆ ಅದು ದೊಡ್ಡ ತಪ್ಪಾಗುತ್ತದೆ. ಇವರ ಪ್ರದರ್ಶನವನ್ನು ಕಡೆಗಣಿಸುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ವರುಣ್ ಚಕ್ರವರ್ತಿ ಬಹಳ ದಿನಗಳ ಕಾಯಯವಿಕೆಯ ಬಳಿಕ ತವರಿನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಟಿ20 ಪಂದ್ಯದಲ್ಲಿ ಕಂ ಬ್ಯಾಕ್ ಮಾಡಿದರು. ಅಲ್ಲದೆ ಈ ಸರಣಿಯಲ್ಲಿ ತಂಡಕ್ಕೆ ನೆರವಾದರು. ಯುಎಇಯಲ್ಲಿ ನಡೆದ 2021 ರ ಟಿ 20 ವಿಶ್ವಕಪ್ ನಂತರ ವರುಣ್ ತಂಡದಲ್ಲಿ ಅವಕಾಶ ವಂಚಿತರಾಗಿದ್ದರು. ಆದರೆ ಐಪಿಎಲ್‌ನಲ್ಲಿ ನೀಡಿದ ಪ್ರದರ್ಶನ ಅವರಿಗೆ ಮತ್ತೆ ಬ್ಲ್ಯೂ ಜೆರ್ಸಿ ತೊಡುವಂತೆ ಮಾಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications