ಗೌತಮ್ ಗಂಭೀರ್ ಹೊಸ ಹೆಡ್ ಕೋಚ್ ಆದ ನಂತರ ಟೀಮ್ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಭಾರೀ ಕುತೂಹಲ ಮೂಡಿಸಿದ ಭಾರತ ಟಿ20 ತಂಡದ ನಾಯಕನ ಆಯ್ಕೆ ಪ್ರಕ್ರಿಯೆವನ್ನು ಅವರು ಯಶಸ್ವಿಯಾಗಿ ಮುಗಿಸಿದ್ದಾರೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಭಾರತ ಟೆಸ್ಟ್ ತಂಡದ ಉಪನಾಯಕರಾಗಿಯೂ ಆಯ್ಕೆಯಾಗಿದ್ದಾರೆ.
ಜಸ್ಪ್ರೀತ್ ಬುಮ್ರಾ ಅವರನ್ನು ಟೆಸ್ಟ್ ತಂಡದ ಉಪನಾಯಕನನ್ನಾಗಿ ಮಾಡುವ ಮೂಲಕ ಬಿಸಿಸಿಐ ಮೂವರು ಆಟಗಾರರಿಗೆ ಅನ್ಯಾಯ ಮಾಡಿದೆ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಭಾರತದ ಟೆಸ್ಟ್ ಉಪನಾಯಕನಾಗಲು ಮೂವರು ಆಟಗಾರರು ಕನಸು ಕಂಡಿದ್ದರು. ಆದರೆ ಬಿಸಿಸಿಐ ಅವರಿಗೆ ಅನ್ಯಾಯ ಮಾಡಿದೆ. ಭಾರತದ ಟೆಸ್ಟ್ ಉಪನಾಯಕರಾಗಲು ಆರ್ಹತೆ ಹೊಂದಿದ್ದ ಆ 3 ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಟೀಮ್ ಇಂಡಿಯಾದ ಯುವ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ ಟೆಸ್ಟ್ ಉಪನಾಯಕನಾಗುವ ಪ್ರಬಲ ಸ್ಪರ್ಧಿಯಾಗಿದ್ದರು. ಅವರು ಕ್ಲಾಸಿಕ್ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಉಪನಾಯಕನಾಗಿಯೂ ಕಾರ್ಯನಿರ್ವಹಿಸಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಈ ಬಾರಿ ಅವಕಾಶ ಕೈ ತಪ್ಪಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಶುಭಮನ್ ಗಿಲ್ ಭವಿಷ್ಯ ಉಜ್ವಲವಾಗಿದ್ದು, ಮುಂದಿನ 10 ರಿಂದ 15 ವರ್ಷಗಳ ಕಾಲ ಭಾರತಕ್ಕಾಗಿ ಕ್ರಿಕೆಟ್ ಆಡು ಸಾಮರ್ಥ್ಯ ಹೊಂದಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ವಿಕೆಟ್ ಕೀಪರ್- ಬ್ಯಾಟರ್ ಆಗಿ ರಿಷಬ್ ಪಂತ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಇದನ್ನು ಪರಿಗಣಿಸಿ ಬಿಸಿಸಿಐ ಭಾರತದ ಮುಂದಿನ ಟೆಸ್ಟ್ ಉಪನಾಯಕನನ್ನಾಗಿ ಮಾಡಬಹುದು ಎನ್ನಲಾಗಿತ್ತು. ಆದರೆ ಈ ನಿರೀಕ್ಷೆ ಹುಸಿಯಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು ಭಾರತದ ಮ್ಯಾಚ್ ವಿನ್ನರ್ ಆಗಿ ಗುರುತಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾ ಪರ ರಿಷಭ್ ಪಂತ್ ವಿಶ್ವದಾದ್ಯಂತ ಹಲವು ಕಠಿಣ ಮೈದಾನಗಳಲ್ಲಿ ಏಕಾಂಗಿ ಆಡಿ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದಂತಹ ದೇಶಗಳಲ್ಲಿ ಅವವರು ಟೆಸ್ಟ್ ಶತಕಗಳನ್ನು ಗಳಿಸಿದ್ದಾರೆ.
ಕೆಎಲ್ ರಾಹುಲ್ ಕೂಡ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಲ್ಲದೆ, ವೈಟ್ ಕ್ರಿಕೆಟ್‌ನಲ್ಲಿಯೂ ಮಿಂಚುತ್ತಿದ್ದಾರೆ. ಹೀಗಾಗಿ ಇವರಿಗೂ ಟೆಸ್ಟ್ ಉಪನಾಯಕನ ಪಟ್ಟ ಸಿಗಬಹುದು ಎಂಬ ನಿರೀಕ್ಷೆಯಿದ್ದರೂ, ಅದು ಸಾಧ್ಯವಾಗಿಲ್ಲ. ಕೆಎಲ್ ರಾಹುಲ್ ಅದ್ಭುತ ವಿಕೆಟ್ ಕೀಪರ್ ಮತ್ತು ಬ್ಯಾಟರ್. ಟೆಸ್ಟ್ ಕ್ರಿಕೆಟ್‌ನಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದರ ಜೊತೆಗೆ, ವಿಕೆಟ್ ಕೀಪಿಂಗ್ ಮತ್ತು ಫೀಲ್ಡಿಂಗ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ.