IPL 2025: ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿಗೆ ಕಾಡುವ ಬೌಲರ್ ಇವರೇ..
ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಇದಕ್ಕೂ ಮೊದಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‍ಸಿಬಿ) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಚೊಚ್ಚಲ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿರುವ ವಿರಾಟ್ ಕೊಹ್ಲಿ ಆರ್‍ಸಿಬಿ ತಂಡವನ್ನು ಚಾಂಪಿಯನ್ ಮಾಡಲು ರೆಡಿಯಾಗುತ್ತಿದ್ದಾರೆ. ಆದರೆ, ಇದಕ್ಕೂ ಮುನ್ನ ಐಪಿಎಲ್‌ನಲ್ಲಿ ತಮಗೆ ಕಾಡುವ ಒಬ್ಬ ಬೌಲರ್ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದಾರೆ.
ವಿರಾಟ್ ಕೊಹ್ಲಿ ಅವರಿಗೆ ವಿಶ್ವದ ಟಾಪ್ ಬೌಲರ್‍ಸ್ ಬೌಲಿಂಗ್ ಮಾಡಲು ಎದುರುತ್ತಾರೆ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ತಮ್ಮ ವೃತ್ತಿಜೀವನದಲ್ಲಿ ಇದುವರೆಗಿನ ಅತ್ಯಂತ ಕಷ್ಟಕರವಾದ ಬೌಲರ್ ಎಂದು ವಿರಾಟ್ ಕೊಹ್ಲಿ ಬಣ್ಣಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ವಿರುದ್ಧ ಎದುರಾಳಿ ತಂಡದ ಬ್ಯಾಟರ್‍ಸ್ ಆಡುವುದು ಸುಲಭವಲ್ಲ. ವಿರಾಟ್ ಕೊಹ್ಲಿ ಕೂಡ ಇದರಿಂದ ಹೊರತಾಗಿಲ್ಲ. ಇತ್ತೀಚೆಗೆ ಆರ್‌ಸಿಬಿಯ ಕಾರ್ಯಕ್ರಮವೊಂದರಲ್ಲಿ ವಿರಾಟ್ ಕೊಹ್ಲಿ, 'ಜಸ್ಪ್ರೀತ್ ಬುಮ್ರಾ ಎಲ್ಲಾ ಸ್ವರೂಪಗಳಲ್ಲಿ ವಿಶ್ವದ ಅತ್ಯುತ್ತಮ ಬೌಲರ್ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಅವರು ಐಪಿಎಲ್‌ನಲ್ಲಿ ನನ್ನನ್ನು ಹಲವು ಬಾರಿ ಔಟ್ ಮಾಡಿದ್ದಾರೆ' ಎಂದು ಹೇಳಿದ್ದಾರೆ.
ವಿರಾಟ್ ಕೊಹ್ಲಿ ಐಪಿಎಲ್ 2013 ರಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ಮೊದಲು ಎದುರಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‍ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರನ್ನು ಜಸ್ಪ್ರೀತ್ ಬುಮ್ರಾ ಔಟ್ ಮಾಡಿದ್ದರು. ಇಂದಿಗೂ ಈ ವಿಕೆಟ್ ಜಸ್ಪ್ರೀತ್ ಬುಮ್ರಾ ಅವರ ವೃತ್ತಿಜೀವನದಲ್ಲಿ ಮುಖ್ಯ ಪಾತ್ರವಹಿಸಿದೆ.
ಐಪಿಎಲ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ವಿರಾಟ್ ಕೊಹ್ಲಿ 16 ಬಾರಿ ಎದುರಿಸಿದ್ದಾರೆ. ಈ ಅವಧಿಯಲ್ಲಿ ವಿರಾಟ್ 147.36 ಸ್ಟ್ರೈಕ್ ರೇಟ್‌ನಲ್ಲಿ ಬುಮ್ರಾ ವಿರುದ್ಧ 140 ರನ್ ಗಳಿಸಿದ್ದರೆ, ಜಸ್ಪ್ರೀತ್ ಬುಮ್ರಾ 5 ಬಾರಿ ವಿರಾಟ್ ಅವರನ್ನು ಔಟ್ ಮಾಡಿದ್ದಾರೆ.
ಟೀಮ್ ಇಂಡಿಯಾ ನೆಟ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ವಿರಾಟ್ ಕೊಹ್ಲಿ ಹೆಚ್ಚು ಎದುರಿಸುವುದಿಲ್ಲ. ಆದರೆ ಈ ಇಬ್ಬರ ಪೈಪೋಟಿ ಐಪಿಎಲ್‌ನಲ್ಲಿ ಜೋರಾಗಿದೆ. ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಪಂದ್ಯಗಳು ಅಭಿಮಾನಿಗಳು ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications