For Quick Alerts
ALLOW NOTIFICATIONS  
For Daily Alerts
 

Uwanted record: ಸತತ ಎರಡು ಟಿ20 ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾದ ಭಾರತದ ಬ್ಯಾಟರ್‌ಗಳು

ಇತ್ತೀಚಿನ ದಿನಗಳಲ್ಲಿ ಟಿ20 ಮಾದರಿ ಕ್ರಿಕೆಟ್‌ ಅತ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಟಿ20 ಲೀಗ್ ಅಥವಾ ಅಂತಾರಾಷ್ಟ್ರೀಯ ಪಂದ್ಯಗಳನ್ನು ನೋಡಿ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಸದಾ ಕಾಯುತ್ತಿರುತ್ತಾರೆ. ಅಲ್ಲದೆ, ಟಿ20 ಕ್ರಿಕೆಟ್‌ನಲ್ಲಿ ಸಾಕಷ್ಟು ಆಟಗಾರರು ಮಿಂಚುವ ಮೂಲಕ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಕೆಲವು ಆಟಗಾರರ ಚುಟುಕು ಕ್ರಿಕೆಟ್‌ನಲ್ಲಿ ಅನಗತ್ಯ ದಾಖಲೆಯನ್ನು ಮಾಡಿದ್ದಾರೆ. ಈ ಅನಗತ್ಯ ದಾಖಲೆಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಇದ್ದಾರೆ. ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿ ಭಾರತದ 6 ಸ್ಟಾರ್ ಬ್ಯಾಟರ್‌ಗಳು ಅನಗತ್ಯ ದಾಖಲೆಯನ್ನು ಮಾಡಿದ್ದಾರೆ.

ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿರುವುದು ಬ್ಯಾಟರ್‌ಗೆ ಬೇಸರದ ಸಂಗತಿಯಾಗಿದೆ. ಯಾವುದೇ ಕ್ರಿಕೆಟಿಗರು ಈ ನಾಚಿಕೆಗೇಡಿನ ದಾಖಲೆಯನ್ನು ತಪ್ಪಿಸಲು ಬಯಸುತ್ತಾರೆ. ಆದರೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಟೀಮ್ ಇಂಡಿಯಾದ 6 ಬ್ಯಾಟರ್‌ಗಳ ಅನಗತ್ಯ ದಾಖಲೆಯ ಹಣೆ ಪಟ್ಟಿಯನ್ನು ಕಟ್ಟಿಕೊಂಡಿದ್ದಾರೆ. ಅಂತಹ ಟೀಮ್ ಇಂಡಿಯಾದ 6 ಬ್ಯಾಟರ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ.

Do you know who are the Indian batsmen who got out for zero in two consecutive T20 internationals

ಅಂಬಟಿ ರಾಯುಡು

ಅಂಬಟಿ ರಾಯುಡು ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗುವ ಅನಗತ್ಯ ದಾಖಲೆಯನ್ನು ಹೊಂದಿದ್ದಾರೆ. 2015ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಸತತ ಎರಡು ಪಂದ್ಯದಲ್ಲಿ ಅಂಬಟಿ ರಾಯುಡು ಶೂನ್ಯಕ್ಕೆ ಔಟಾಗಿದ್ದರು.

ವಾಷಿಂಗ್ಟನ್ ಸುಂದರ್

ಟೀಮ್ ಇಂಡಿಯಾದ ಸ್ಟಾರ್ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಕೂಡ ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. 2020ರಲ್ಲಿ ನಡೆದ ಶ್ರೀಲಂಕಾ ವಿರುದ್ಧದ ವಾಷಿಂಗ್ಟನ್ ಸುಂದರ್ ತಮ್ಮ ಖಾತೆಯನ್ನು ತೆರೆಯದೆ ಪೆವಿಲಿಯನ್‌ಗೆ ಮರಳಿದ್ದರು. ಬಳಿಕ ವೆಲ್ಲಿಂಗ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮುಂದಿನ ಪಂದ್ಯದಲ್ಲಿ ವಾಷಿಂಗ್ಟನ್ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡಿದ್ದರು.

ಕೆಎಲ್ ರಾಹುಲ್

ಭಾರತ ತಂಡದ ಸ್ಟಾರ್ ವಿಕೆಟ್‌ಕೀಪರ್ ಮತ್ತು ಬ್ಯಾಟರ್ ಕೆಎಲ್ ರಾಹುಲ್ ಅವರು ಪ್ರಸ್ತುತ ಫಾರ್ಮ್‌ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿಂದೆಯೂ ಕೆಎಲ್ ರಾಹುಲ್ ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗುವ ಬೇಡದ ದಾಖಲೆಯನ್ನು ಹೊಂದಿದ್ದಾರೆ. 2021ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ರಾಹುಲ್ ಖಾತೆ ತೆರೆಯದೆ ವಿಕೆಟ್ ಕಳೆದುಕೊಂಡಿದ್ದಾರೆ.

ದೀಪಕ್ ಹೂಡಾ

ಟೀಮ್ ಇಂಡಿಯಾದ ಆಲ್‌ರೌಂಡರ್ ದೀಪಕ್ ಹೂಡಾ ಅವರು ಸಹಾ ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. 2022ರಲ್ಲಿ ಪರ್ತ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ದೀಪಕ್ ಹೂಡಾ ಶೂನ್ಯಕ್ಕೆ ಔಟಾದರು. ಇದಾದ ನಂತರ ಅದೇ ವರ್ಷ ಮೌಂಟ್ ಮೌಂಗನುಯಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮುಂದಿನ ಪಂದ್ಯದಲ್ಲಿ ದೀಪಕ್ ಹೂಡಾ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದ್ದರು.

ರೋಹಿತ್ ಶರ್ಮಾ

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಕೂಡ ಈ ಅನಗತ್ಯ ದಾಖಲೆಯನ್ನು ಮಾಡಿದ್ದಾರೆ.
2024ರಲ್ಲಿ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧ ಪಂದ್ಯದಲ್ಲಿ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ನಂತರ, 2024ರಲ್ಲಿ ಇಂದೋರ್‌ನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿಯೂ ರೋಹಿತ್ ಶರ್ಮಾ ಖಾತೆ ತೆರೆಯಲು ಸಾಧ್ಯವಾಗಲಿದ್ದಾರೆ.

ಸಂಜು ಸ್ಯಾಮ್ಸನ್

ಕಳೆದು ಒಂದು ದಶಕದ ಬಳಿಕ ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂಜು ಕೂಡ ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಪ್ರಸ್ತುತ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಶೂನ್ಯಕ್ಕೆ ಔಟಾಗಿದ್ದಾರೆ.

Story first published: Thursday, November 14, 2024, 16:06 [IST]
Other articles published on Nov 14, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+