Double Champions: ವಿಶೇಷ ಕ್ಲಬ್ ಸೇರಿದ ಟೀಮ್ ಇಂಡಿಯಾದ 8 ಆಟಗಾರರು
ಅಹಮದಾಬಾದ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಸ್ಥಿರ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಭಾರತ ತಂಡದ ಯುವ ಆಟಗಾರರು ಹಾಗೂ ಅನುಭವಿ ಆಟಗಾರರು ಭಾರತ ತಂಡ ತವರಿನಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಈ ಪಂದ್ಯದಲ್ಲಿ ಇದ್ದ ಹಲವು ಆಟಗಾರರು ಎರಡನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯರಾಗಿದ್ದಾರೆ. ಭಾರತಕ್ಕಾಗಿ ಎರಡು ಬಾರಿ ಟಿ20 ವಿಶ್ವಕಪ್ ಗೆದ್ದ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ.
ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಎರಡು ಬಾರಿ ಅಲಂಕರಿಸಿದ ಆಟಗಾರರ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ರೋಹಿತ್ ಶರ್ಮಾ, ನಾಯಕ ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಇತರ ಸ್ಟಾರ್ ಆಟಗಾರರು ಸೇರಿದ್ದಾರೆ.

ಭಾರತ ತಂಡದ ಪರ ಒಂಬತ್ತು ಆಟಗಾರರು ಎರಡು ಬಾರಿ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿದ್ದಾರೆ. ಈ ಒಂಬತ್ತು ಆಟಗಾರರಲ್ಲಿ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್ಪ್ರಿತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ಕುಲ್ದೀಪ್ ಯಾದವ್, ಶಿವಂ ದುಬೆ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್ ಮತ್ತು ಅರ್ಷದೀಪ್ ಸಿಂಗ್ ಸೇರಿದ್ದಾರೆ. ಈ ಪಟ್ಟಿಯಲ್ಲಿರುವ ರೋಹಿತ್ ಶರ್ಮಾ 2007ರ ಚೊಚ್ಚಲ ಟಿ20 ವಿಶ್ವಕಪ್ ಹಾಗೂ 2024ರ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು.
ದಾಖಲೆ ಬರೆದ 8 ಆಟಗಾರರು
ರೋಹಿತ್ ಬಿಟ್ಟು ಉಳಿದ 8 ಆಟಗಾರರು 2024 ಹಾಗೂ 2026ರ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆದಿದ್ದರು. ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ಕುಲದೀಪ್ ಯಾದವ್, ಶಿವಂ ದುಬೆ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್ ಮತ್ತು ಅರ್ಷದೀಪ್ ಸಿಂಗ್ ತಂಡದ ಭಾಗವಾಗಿದ್ದರು. ಆದರೆ ಕಳೆದ ಬಾರಿಯ ವಿಶ್ವಕಪ್‌ನಲ್ಲಿ ಸಂಜು ಸ್ಯಾಮ್ಸನ್ ಒಂದೇ ಒಂದು ಪಂದ್ಯವನ್ನು ಆಡಿರಲಿಲ್ಲ.
ವಿಶ್ವ ಕ್ರಿಕೆಟ್‌ನಲ್ಲಿ ಎರಡು ಬಾರಿ ಟಿ 20 ವಿಶ್ವಕಪ್ ಗೆದ್ದ ಒಟ್ಟು 18 ಆಟಗಾರರಿದ್ದಾರೆ. ಇದರಲ್ಲಿ ವಿಂಡೀಸ್ ತಂಡದ 9 ಹಾಗೂ ಭಾರತ ತಂಡದ 9 ಆಟಗಾರರು ಸೇರಿದ್ದಾರೆ. ವಿಂಡೀಸ್ ತಂಡದ ಪರ ಡ್ಯಾರೆನ್ ಸ್ಯಾಮಿ, ಮರ್ಲಾನ್ ಸ್ಯಾಮುಯೆಲ್ಸ್, ಕ್ರಿಸ್ ಗೇಲ್, ಜಾನ್ಸನ್ ಚಾರ್ಲ್ಸ್, ಡ್ವೇನ್ ಬ್ರಾವೋ, ಸ್ಯಾಮ್ಯುಯೆಲ್ ಬದ್ರಿ, ಆಂಡ್ರೆ ರಸೆಲ್ ಮತ್ತು ದಿನೇಶ್ ರಾಮ್ದಿನ್ ಎರಡು ಬಾರಿ ಚಾಂಪಿಯನ್ ತಂಡದ ಭಾಗವಾಗಿರುವ ಸಾಧನೆ ಮಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications