ಡಬಲ್ ಒಲಿಂಪಕ್ಸ್ ಪದಕ ವಿಜೇತ ನೀರಜ್‌ಗೆ ಸೇನೆಯಲ್ಲಿ ದೊಡ್ಡ ಹುದ್ದೆ
ಒಲಿಂಪಿಕ್ಸ್‌ನಲ್ಲಿ ಡಬಲ್ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಜಾವೇಲಿನ್ ಥ್ರೋ ಕ್ರೀಡಾ ಪಟು ನೀರಜ್ ಚೋಪ್ರಾ ಅವರಿಗೆ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. ವಿಶ್ವದ ಶ್ರೇಷ್ಠ ಜಾವೆಲಿನ್ ಎಸೆತಾಗರರಲ್ಲಿ ಒಬ್ಬರಾಗಿರುವ ನೀರಜ್ ಚೋಪ್ರಾ ಅವರಿಗೆ ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಲಾಗಿದೆ. ನೀರಜ್ ಚೋಪ್ರಾ ಅವರು ದೇಶದ ಪರ ಹಲವು ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡಿ ಪದಕದ ಬೇಟೆ ನಡೆಸಿದ್ದಾರೆ.
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದರು. ಇವರು ಒಲಿಂಪಿಕ್ಸ್ ಕ್ರೀಡಾಕೂಟದ ಟ್ರ್ಯಾಕ್ ಹಾಗೂ ಫೀಲ್ಡ್ ವಿಭಾಗದಲ್ಲಿ ಬಂಗಾರದ ಸಾಧನೆ ಮಾಡಿದ ಮೊದಲ ಭಾರತೀಯ ಕ್ರೀಡಾ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ರು. ಇವರು ಕಳೆದ ವರ್ಷ ಪ್ಯಾರೀಸ್‌ನಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಮೋಘ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದಿದ್ದರು. ಈ ಮೂಲಕ ಎರಡು ಒಲಿಂಪಿಕ್ಸ್ ಪದಕ ಗೆದ್ದ ಕೆಲವೇ ಕೆಲವು ಕ್ರೀಡಾಪಟುಗಳ ಸಾಲಿಗೆ ನೀರಜ್ ಚೋಪ್ರಾ ಸೇರಿದ್ದಾರೆ.

ಆಗಸ್ಟ್ 26, 2016 ರಂದು ಭಾರತೀಯ ಸೇನೆಯಲ್ಲಿ ನೈಬ್ ಸುಬೇದಾರ್ ಹುದ್ದೆಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಆಗಿ ನೀರಜ್ ಕಾರ್ಯವನ್ನು ಆರಂಭಿಸಿದ್ರು. ಇವರಿಗೆ ಎರಡು ವರ್ಷಗಳ ಬಳಿಕ ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
90 ಮೀಟರ್ ಮಾರ್ಕ್
ನೀರಜ್ ಚೋಪ್ರಾ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇವರು ಮೇ 23 ರಂದು ಅಂತಾರಾಷ್ಟ್ರೀಯ ಸರ್ಕಿಟ್‌ಗೆ ಗ್ರ್ಯಾಂಡ್ ಎಂಟ್ರಿ ನೀಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ವೇಳೆ ನೀರಜ್ ಚೋಪ್ರಾ ಅವರ ಕಣ್ಣುಗಳ ಮ್ಯಾಜಿಕ್ ನಂಬರ್ ಮೇಲೆ ನೆಟ್ಟಿರಲಿವೆ. ನೀರಜ್ ಈ ವರ್ಷ 90 ಮೀಟರ್ ಮಾರ್ಕ್ ದಾಟುವ ವಿಶ್ವಾಸವನ್ನು ಹೊಂದಿದ್ದಾರೆ.
ಮೇ 23 ರಂದು ಪೋಲೆಂಡ್‌ನಲ್ಲಿ ಟೂರ್ನಿ
ನೀರಜ್ ಚೋಪ್ರಾ ಅವರು ಮೇ 23 ರಂದು ಪೋಲೆಂಡ್‌ನಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. ಇದೇ ಅವಧಿಯಲ್ಲಿ ಭಾರತದಲ್ಲಿ ಆಯೋಜಿಸಲಾಗಿದ್ದ ಒಂದು ಟೂರ್ನಿ ರದ್ದಾಗಿದೆ. ಇದೇ ತಿಂಗಳು 24 ರಂದು ನೀರಜ್ ಚೋಪ್ರಾ ಬೆಂಗಳೂರಿನಲ್ಲಿ ನಡೆಯ ಬೇಕಿದ್ದ, ಎನ್‌ಸಿ ಕ್ಲಾಸಿಕ್ ಟೂರ್ನಿಯಲ್ಲಿ ಭಾಗವಹಿಸಬೇಕಿತ್ತು. ಆದರೆ ಭಾರತ ಹಾಗೂ ಪಾಕಿಸ್ತಾನ ನಡುವಣ ಉದ್ವಿಗ್ನತೆಯಿಂದಾಗಿ ಈ ಟೂರ್ನಿಯನ್ನು ಮುಂದೂಡಲಾಗಿದೆ. ಪೋಲೆಂಡ್‌ನಲ್ಲಿ ನೀರಜ್ ಎರಡು ಬಾರಿಯ ವಿಶ್ವ ಚಾಂಪಿಯನ್ ಮತ್ತು ಪ್ಯಾರಿಸ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಗ್ರೆನಡಾದ ಆಂಡರ್ಸನ್ ಪೀಟರ್ಸ್, ಜರ್ಮನಿಯ ಜೂಲಿಯನ್ ವೆಬರ್ ಅವರ ಸವಾಲುಗಳನ್ನು ಎದುರಿಸಲಿದ್ದಾರೆ.

ಪೋಲೆಂಡ್‌ನಲ್ಲಿ ನಡೆಯಲಿರುವ ಟೂರ್ನಿ ನೀರಜ್ ಅವರಿಗೆ ಈ ಋತುವಿನ ಮೂರನೇ ಪಂದ್ಯಾವಳಿ ಆಗಿರಲಿದೆ. ನೀರಜ್ ಚೋಪ್ರಾ ದಕ್ಷಿಣ ಆಫ್ರಿಕಾದಲ್ಲಿ ಮೈದಾನ ಪ್ರವೇಶಿಸುವ ಮೂಲಕ ಋತುವನ್ನು ಆರಂಭಿಸಿದರು. ಇನ್ನು ಮೇ 16 ರಂದು ದೋಹಾ ಡೈಮಂಡ್ ಲೀಗ್‌ನಲ್ಲಿ ಭಾಗವಹಿಸಲಿದ್ದಾರೆ. ಈ ಟೂರ್ನಿಯಲ್ಲಿ ನೀರಜ್ ಚೋಪ್ರಾ ಪದಕ ಗೆಲ್ಲುವ ನೆಚ್ಚಿನ ಸ್ಪರ್ಧಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications