ಜುಲೈ 22 ಸೋಮವಾರ, ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಜುಲೈ 27 ರಂದು ಸಂಜೆ 7:00 ಗಂಟೆಗೆ ಪಲ್ಲೆಕೆಲೆಯಲ್ಲಿ ನಡೆಯಲಿದೆ. ನೂತನ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಹೆಡ್ ಕೋಚ್ ಗೌತಮ್ ಗಂಭೀರ್ ನೇತೃತ್ವದಲ್ಲಿ ಟೀಮ್ ಇಂಡಿಯಾದ ಮುನ್ನಡೆಯಲಿದೆ.
ಪ್ರಮುಖವಾಗಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಹಲವು ಯುವ ಆಟಗಾರರ ಜೊತೆಗೆ ಅನುಭವಿಗಳಿಗೂ ಅವಕಾಶ ನೀಡಲಾಗಿದೆ. ಆದಾಗ್ಯೂ, ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಬೆಂಚ್ ಕಾಯು ಪರಿಸ್ಥಿತಿಯಲ್ಲಿದ್ದಾರೆ. ಈ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ.

ಟೀಮ್ ಇಂಡಿಯಾದ ವಿಕೆಟ್‌ಕೀಪರ್ ಮತ್ತು ಬ್ಯಾಟರ್ ಸಂಜು ಸ್ಯಾಮ್ಸನ್ ಅದ್ಭುತ ಪ್ರತಿಭೆ ಹೊಂದಿದ್ದರೂ ಆಡುವ ಅವಕಾಶ ಸಿಕ್ಕಿರುವುದು ಬಹಳ ಕಡಿಮೆ. ಏಕೆಂದರೆ ಟಿ20 ವಿಶ್ವಕಪ್ 2024ರ ಚಾಂಪಿಯನ್ ಭಾರತ ತಂಡದಲ್ಲಿ ಸಂಜು ಸ್ಥಾನ ಪಡೆದಿದ್ದರು. ಆದರೆ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವಾಡದೆ ಬೆಂಚ್ ಕಾದಿದ್ದರು.
ಇದೀಗ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿರುವ ಸಂಜು ಅವರಿಗೆ ಮತ್ತೊಮ್ಮೆ ಸವಾಲು ಎದುರಾಗಿದೆ. ಟೀಮ್ ಇಂಡಿಯಾದಲ್ಲಿ ಸಂಜು ಗಿಂತಲೂ ಶ್ರೇಷ್ಠ ಕ್ರಿಕೆಟಿಗರು ಇದ್ದಾರೆ. ಇದಲ್ಲದೇ ವಿಕೆಟ್‌ಕೀಪರ್ ಆಗಿ ಟೀಮ್ ಮ್ಯಾನೇಜ್‌ಮೆಂಟ್‌ನ ಮೊದಲ ಆಯ್ಕೆ ರಿಷಬ್ ಪಂತ್ ಆಗಿರುತ್ತದೆ.
ಇಂತಹ ಪರಿಸ್ಥಿತಿಯಲ್ಲಿ ಟಿ20 ಸ್ಪೆಷಲಿಸ್ಟ್ ಬ್ಯಾಟರ್ ಆಗಿದ್ದರೂ, ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಸಂಜು ಬೆಂಚ್ ಕಾಯುವುದು ಪಕ್ಕ ಎನ್ನಲಾಗುತ್ತಿದೆ. ಟೀಮ್ ಇಂಡಿಯಾ ಈಗಾಗಲೇ ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್ ಮತ್ತು ಶಿವಂ ದುಬೆ ಅವರಂತಹ ಕ್ರಿಕೆಟಿಗರ ಬಲವನ್ನು ಹೊಂದಿದೆ.
ಹೀಗಿರುವಾಗ ತಂಡದ ಮ್ಯಾನೇಜ್‌ಮೆಂಟ್ ಆಡುವ ಹನ್ನೊಂದರಲ್ಲಿ ಸಂಜು ಸ್ಯಾಮ್ಸನ್‌ಗೆ ಪ್ರಾಮುಖ್ಯತೆ ನೀಡುವುದು ಅನುಮಾನವಾಗಿದೆ. ಈ ಆಟಗಾರನು ಸರಣಿಯುದ್ದಕ್ಕೂ ಮೈದಾನದಲ್ಲಿ ಆಟಗಾರರಿಗೆ ನೀರು ಕೊಡುವುದನ್ನು ಕಾಣಬಹುದು.
ಆಫ್ ಸ್ಪಿನ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಶ್ರೀಲಂಕಾ ವಿರುದ್ಧದ ಈ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಪರ ಒಂದೇ ಒಂದು ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ. ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಸ್ಪಿನ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಮತ್ತು ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಅವರಿಗೆ ಆದ್ಯತೆ ನೀಡಲಿದೆ.
ಇಂತಹ ಪರಿಸ್ಥಿತಿಯಲ್ಲಿ ವಾಷಿಂಗ್ಟನ್ ಸುಂದರ್ ಟೀಮ್ ಇಂಡಿಯಾದ ಪ್ಲೇಯಿಂಗ್-11 ನಲ್ಲಿ ಪಾಲ್ಗೊಳ್ಳುವುದು ಕಷ್ಟ. ಅಕ್ಷರ್ ಪಟೇಲ್ ಒಬ್ಬ ಅತ್ಯುತ್ತಮ ಕ್ರಿಕೆಟಿಗರಾಗಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಟೀಮ್ ಇಂಡಿಯಾ ಪರ ಸಾಕಷ್ಟು ಸದ್ದು ಮಾಡಿದ್ದಾರೆ.
ರವಿ ಬಿಷ್ಣೋಯ್ ಸಹಾ ವಾಷಿಂಗ್ಟನ್ ಸುಂದರ್ ಅವರಿಗಿಂತ ಹೆಚ್ಚು ಮಾರಕ ಸ್ಪಿನ್ನರ್ ಆಗಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ವಾಷಿಂಗ್ಟನ್ ಸುಂದರ್ ಟಿ20 ಸರಣಿಯಲ್ಲಿ ಬೆಂಚ್ ಕಾಯಲಿದ್ದು. ಸಹಾ ಆಟಗಾರರಿಗೆ ನೀರು ನೀಡಲಿದ್ದಾರೆ.
ಶ್ರೀಲಂಕಾ ವಿರುದ್ಧದ ಈ ಟಿ20 ಸರಣಿಯ ತಂಡದಲ್ಲಿ ರಿಯಾನ್ ಪರಾಗ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.
ಟೀಮ್ ಇಂಡಿಯಾದ ಪ್ಲೇಯಿಂಗ್ ಹನ್ನೊಂದರಲ್ಲಿ ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್ ಮತ್ತು ಶಿವಂ ದುಬೆ ಆಡುವುದು ಬಹುತೇಕ ಖಚಿತವಾಗಿದೆ.
ಈ ಸಂದರ್ಭ ಇಂತಹ ಪರಿಸ್ಥಿತಿಯಲ್ಲಿ ರಿಯಾನ್ ಪರಾಗ್ ಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಸ್ಥಾನ ಉಳಿದಿಲ್ಲ. ಅದೇನೇ ಇರಲಿ, ಜಿಂಬಾಬ್ವೆ ವಿರುದ್ಧದ ಕೊನೆಯ ಟಿ20 ಸರಣಿಯಲ್ಲಿ ರಿಯಾನ್ ಪರಾಗ್ ಅವರ ಪ್ರದರ್ಶನ ತೀರಾ ಕಳಪೆಯಾಗಿತ್ತು.
ಈ ಕಾರಣದಿಂದಾಗಿ ಅವರು ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವಂತೆ ಕಾಣುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ರಿಯಾನ್ ಪರಾಗ್ ಇಡೀ ಟಿ 20 ಸರಣಿಯಿಂದ ದೂರ ಉಳಿಬಹುದು.
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಖಲೀಲ್ ಅಹ್ಮದ್ ಮತ್ತು ಮೊಹಮ್ಮದ್ ಸಿರಾಜ್.