ಐರ್ಲೆಂಡ್, ಪಾಕಿಸ್ತಾನ ಸರಣಿಗಳಿಗೆ ಇಂಗ್ಲೆಂಡ್ ತಂಡದಲ್ಲಿ ಡಕೆಟ್, ಮಲಾನ್‌ಗೆ ಸ್ಥಾನ

ಲಂಡನ್, ಏಪ್ರಿಲ್ 30: ಐರ್ಲೆಂಡ್ ವಿರುದ್ಧದ ಏಕೈಕ ಏಕದಿನ ಪಂದ್ಯ ಮತ್ತು ಪಾಕಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಟಿ20 ಸರಣಿಗೆ ಪ್ರಕಟಿಸಲಾದ ಇಂಗ್ಲೆಂಡ್ ತಂಡದಲ್ಲಿ ಡೇವಿಡ್ ಮಲಾನ್ ಮತ್ತು ಬೆನ್ ಡಕೆಟ್ ಸ್ಥಾನ ಪಡೆದಿದ್ದಾರೆ.
ಬೆನ್ ಡಕೆಟ್ 2016ರಲ್ಲಿ ಬಾಂಗ್ಲಾದೇಶ ವಿರುದ್ಧ ಎರಡು ಅರ್ಧಶತಕಗಳನ್ನು ದಾಖಲಿಸಿದ್ದರು. ಬಳಿಕ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದ್ದರು. ಮತ್ತೊಂದೆಡೆ 2017ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ತಂಡಕ್ಕೆ ಪದಾರ್ಪಣೆ ಮಾಡಿ 44 ಎಸೆತಗಳಲ್ಲಿ 78 ರನ್‌ಗಳನ್ನು ಸಿಡಿಸಿದ್ದರು. ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಎದುರು ತಮ್ಮ ವೃತ್ತಿ ಬದುಕಿನ ಚೊಚ್ಚಲ ಶತಕ ದಾಖಲಿಸಿದ್ದರು.
ಬೆನ್ನು ನೋವಿನ ಸಮಸ್ಯೆ ಎದುರಿಸುತ್ತಿರುವ ಜೇಸನ್ ರಾಯ್ ವಿಶ್ರಾಂತಿ ಪಡೆದಿದ್ದು, ವಿಶ್ವಕಪ್ ಆರಂಭಕ್ಕೂ ಮುನ್ನ ತಂಡ ಸೇರಿಕೊಳ್ಳುವುದನ್ನು ಎದುರು ನೋಡುತ್ತಿದ್ದಾರೆ. ಮತ್ತೊಂದೆಡೆ ಜೇಮ್ಸ್ ವಿನ್ಸ್‌ಗೆ ಪಾಕಿಸ್ತಾನ ವಿರುದ್ಧದ 5 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಆಯ್ಕೆಯಾಗಿದ್ದಾರೆ.
ಅಲೆಕ್ಸ್ ಹೇಲ್ಸ್ ಡೋಪ್ ಟೆಸ್ಟ್‌ನಲ್ಲಿ ಎರಡನೇ ಬಾರಿ ಸಿಕ್ಕಿಬಿದ್ದು 21 ದಿನಗಳ ನಿಷೇಧ ಎದುರಿಸುತ್ತಿರುವ ಕಾರಣ ಇಂಗ್ಲೆಂಡ್ ತಂಡದಲ್ಲಿ ಅನಿವಾರ್ಯವಾಗಿ ಬದಲಾವಣೆ ತರುವಂತಾಗಿದೆ. ಇನ್ನು ಜೋಸ್ ಬಟ್ಲರ್ ಮತ್ತು ಜಾನಿ ಬೈರ್‌ಸ್ಟೋವ್‌ಗೆ ವಿಶ್ರಾಂತಿ ನೀಡಿರುವ ಕಾರಣ ಬೆನ್ ಫೋಕ್ಸ್ ವಿಕೆಟ್‌ಕೀಪಿಂಗ್ ಜವಾಬ್ದಾರಿ ನಿಭಾಯಿಸಲಿದ್ದಾರೆ.

ಪಾಕ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಗೆ
ಐಯಾನ್ ಮಾರ್ಗನ್ (ನಾಯಕ), ಮೊಯೀನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋವ್, ಜೋಸ್ ಬಟ್ಲರ್, ಟಾಮ್ ಕರ್ರನ್, ಜೋ ಡೆನ್ಲೀ, ಕ್ರಿಸ್ ಜಾರ್ಡನ್, ಲಿಯಾಮ್ ಪ್ಲಂಕೆಟ್, ಆದಿಲ್ ರಶಿದ್, ಜೋ ರೂಟ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ಜೇಮ್ಸ್ ವಿನ್ಸ್, ಡೇವಿಡ್ ವಿಲ್ಲೀ, ಕ್ರಿಸ್ ವೋಕ್ಸ್, ಮಾರ್ಕ್ ವುಡ್.

ಐರ್ಲೆಂಡ್ ವಿರುದ್ಧದ ಏಕದಿನ ಮತ್ತು ಪಾಕ್ ವಿರುದ್ಧದ ಟಿ20ಗೆ
ಐಯಾನ್ ಮಾರ್ಗನ್ (ನಾಯಕ), ಜೋಫ್ರಾ ಆರ್ಚರ್, ಟಾಮ್ ಕರ್ರನ್, ಜೋ ಡೆನ್ಲೀ, ಬೆನ್ ಡಕೆಟ್, ಬೆನ್ ಫೋಕ್ಸ್, ಕ್ರಿಸ್ ಜಾರ್ಡನ್, ಡೇವಿಡ್ ಮಲಾನ್, ಲಿಯಾಮ್ ಪ್ಲಂಕೆಟ್, ಆದಿಲ್ ರಶೀದ್, ಜೋ ರೂಟ್, ಜೇಮ್ಸ್ ವಿನ್ಸ್, ಡೇವಿಡ್ ವಿಲ್ಲೀ.

ವಿಶ್ವಕಪ್‌ಗೆ ಪ್ರಕಟಿಸಿರುವ ತಂಡ
ಐಯಾನ್ ಮಾರ್ಗನ್ (ನಾಯಕ), ಜಾನಿ ಬೈರ್‌ಸ್ಟೋವ್, ಜೇಸನ್ ರಾಯ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಲಿಯಾಮ್ ಪ್ಲಂಕೆಟ್, ಆದಿಲ್ ರಶೀದ್, ಮಾರ್ಕ್ ವುಡ್, ಟಾಮ್ ಕರ್ರನ್, ಜೋ ಡೆನ್ಲೀ, ಲಿಯಾಮ್ ಪ್ಲಂಕೆಟ್.

ಭರ್ಜರಿ ಸಿದ್ಧತೆಯಲ್ಲಿ ಇಂಗ್ಲೆಂಡ್
ಮುಂಬರುವ ವಿಶ್ವಕಪ್‌ಗೆ ಭರ್ಜರಿ ಸಿದ್ದತೆಯಲ್ಲಿರುವ ಇಂಗ್ಲೆಂಡ್ ತಂಡ, ಅಭ್ಯಾಸ ಸಲುವಾಗಿ ಐರ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳ ವಿರುದ್ಧ ಏಕದಿನ ಸರಣಿಗಳನ್ನು ಆಡಲಿದೆ. ಮೊದಲಿಗೆ ಐರ್ಲೆಂಡ್ ವಿರುದ್ಧ ಮೇ 3ರಂದು ಏಕೈಕ ಏಕದಿನ ಪಂದ್ಯವನ್ನಾಡಲಿದ್ದು, ಬಳಿಕ ಪಾಕಿಸ್ತಾನದ ಎದುರು ಮೇ 6ರಿಂದ 5 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಇನ್ನು ವಿಶ್ವಕಪ್‌ನಲ್ಲಿ ಮೇ 30ರಂದು ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ತನ್ನ ಅಭಿಯಾನ ಆರಂಭಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications