ದುಲೀಪ್ ಟ್ರೋಫಿ ಫೈನಲ್: ಬಾಬಾ ಇಂದ್ರಜಿತ್ ಭರ್ಜರಿ ಶತಕ; ಮುನ್ನಡೆ ಸಾಧಿಸಿದ ಸೌತ್ ಝೋನ್

ದುಲೀಪ್ ಟ್ರೋಫಿಯ ಫೈನಲ್ ಪಂದ್ಯದ ಎರಡನೇ ದಿನದಾಟದಲ್ಲಿಯೂ ಸೌತ್ ಝೋನ್ ಅದ್ಭುತ ಪ್ರದರ್ಶನ ನೀಡಿದ್ದು ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಝೋನ್ ತಂಡವನ್ನು 270 ರನ್‌ಗಳಿಗೆ ಆಲೌಟ್ ಮಾಡಿದ ಸೌತ್ ಝೋನ್ ಬಳಿಕ ಬ್ಯಾಟಿಂಗ್‌ನಲ್ಲಿಯೂ ಮಿಂಚಿದೆ. ಬಾಬಾ ಇಂದ್ರಜಿತ್ ಅವರ ಭರ್ಜರಿ ಶತಕದ ನೆರವಿನಿಂದಾಗಿ ಎರಡನೇ ದಿನದಾಟದ ಅಂತ್ಯಕ್ಕೆ ಸೌತ್ ಝೋನ್ 7 ವಿಕೆಟ್ ಕಳೆದುಕೊಂಡು 318 ರನ್‌ಗಳನ್ನು ಗಳಿಸಿದೆ.
ಉತ್ತಮ ಆರಂಭ ಪಡೆಯಲು ಸೌತ್ ಝೋನ್ ವಿಫಲ: ಇನ್ನು ವೆಸ್ಟ್ ಝೋನ್ ರೀತಿಯಲ್ಲಿಯೇ ಸೌತ್ ಝೋನ್‌ಗೆ ಕೂಡ ಉತ್ತಮ ಆರಂಭ ದೊರೆಯಲಿಲ್ಲ. ಮಯಾಂಕ್ ಅಗರ್ವಾಲ್ 9 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ರೋಹನ್ ಕನ್ನುಮಲ್ 31 ರನ್‌ಗಳಿಸಿದರು. ನಾಯಕ ಹನುಮ ವಿಹಾರಿಯಿಂದ 25 ರನ್‌ಗಳ ಕೊಡುಗೆ ಬಂದಿತು. ಆದರೆ ನಂತರ ಬಾಬಾ ಇಂದ್ರಜಿತ್ ಹಾಗೂ ಮನೀಶ್ ಪಾಂಡೆ ಶತಕದ ಜೊತೆಯಾಟ ನೀಡುವ ಮೂಲಕ ತಂಡವನ್ನು ಉತ್ತಮ ಮೊತ್ತದತ್ತ ಮುನ್ನಡೆಸಿದರು.
ಬಾಬಾ ಇಂದ್ರಜಿತ್ ಭರ್ಜರಿ ಶತಕ: 48 ರನ್‌ಗಳನ್ನು ಗಳಿಸಿ ಮನೀಶ್ ಪಾಂಡೆ ವಿಕೆಟ್ ಕಳೆದುಕೊಂಡರೆ ಬಾಬಾ ಇಂದ್ರಜಿತ್ ಭರ್ಜರಿ ಶತಕ ಸಿಡಿಸಿ ಮಿಂಚಿದರು. 125 ಎಸೆತಗಳನ್ನು ಎದುರಿಸಿದ ಇಂದ್ರಜಿತ್ 118 ರನ್‌ಗಳಿಸಿ ಜಯ್‌ದೇವ್ ಉನಾದ್ಕಟ್‌ಗೆ ವಿಕೆಟ್ ಒಪ್ಪಿಸಿದರು. ನಂತರ ಕೃಷ್ಣಪ್ಪ ಗೌತಮ್ 43 ರನ್‌ಗಳ ಕೊಡುಗೆ ನೀಡಿದರೆ ಕೆ ರವಿ ತೇಜ 26 ರನ್‌ಗಳಿಸಿ ಮೂರನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಮತ್ತೊಂದು ತುದಿಯಲ್ಲಿ ಸಾಯಿಕಿಶೋರ್ 6 ರನ್‌ಗಳಿಸಿ ಅಜೇಯವಾಗಿದ್ದು ಮೂರನೇ ದಿನ ಆಟವನ್ನು ಮುಂದುವರಿಸಲಿದ್ದಾರೆ. ಎರಡನೇ ದಿನದಾಟದ ಅಂತ್ಯದಲ್ಲಿ ಸೌತ್ ಝೋನ್ 48 ರನ್‌ಗಳ ಮುನ್ನಡೆ ಸಾಧಿಸಿದೆ.
ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದ ವೆಸ್ಟ್ ಜೋನ್: ಇನ್ನು ಇದಕ್ಕೂ ಮುನ್ನ ಟಾಸ್ ಗೆದ್ದ ವೆಸ್ಟ್ ಜೋನ್ ತಂಡ ಆರಂಭದಿಂದಲೇ ಹಿನ್ನಡೆ ಅನುಭವಿಸಿತು. ಆದರೆ ವಿಕೆಟ್ ಕೀಪರ್ ಬ್ಯಾಟರ್ ಹೆತ್ ಪಟೇಲ್ ಇಂಥಾ ಕಠಿಣ ಸಂದರ್ಭದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅತಿಥ್ ಶೇಥ್ ಹಾಗೂ ಜಯದೇವ್ ಉನಾದ್ಕಟ್ ಜೊತೆಗೆ ಉತ್ತಮ ಜೊತೆಯಾಟದಲ್ಲಿ ಭಾಗಿಯಾಗಿರುವ ಹೆತ್ ಪಟೇಲ್ 97 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಮತ್ತೊಂದು ತುದಿಯಲ್ಲಿ ಜಯ್‌ದೇವ್ ಉನಾದ್ಕಟ್ ಉತ್ತಮವಾಗಿ ಸಾಥ್ ನೀಡಿದ್ದು 47 ರನ್‌ಗಳಿಸಿ ಅಜೇಗುಳಿದರು. ಈ ಮೂಲಕ ವೆಸ್ಟ್ ಜೋನ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 270 ರನ್‌ಗಳಿಗೆ ಆಲೌಟ್ ಆಗಿದೆ.
ಇತ್ತಂಡಗಳ ಆಡುವ ಬಳಗ ಹೀಗಿದೆ
ಸೌತ್ ಝೋನ್ ಸ್ಕ್ವಾಡ್ ಹೀಗಿದೆ: ರೋಹನ್ ಕುನ್ನುಮ್ಮಲ್, ಮಯಾಂಕ್ ಅಗರ್ವಾಲ್, ಬಾಬಾ ಇಂದ್ರಜಿತ್, ಹನುಮ ವಿಹಾರಿ (ನಾಯಕ), ಮನೀಶ್ ಪಾಂಡೆ, ರಿಕಿ ಭುಯಿ (ವಿಕೆಟ್ ಕೀಪರ್), ಕೃಷ್ಣಪ್ಪ ಗೌತಮ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ತುಳಸಿ ತಂಪಿ, ತೆಲುಕುಪಲ್ಲಿ ರವಿತೇಜ, ಚೀಪುರಪಲ್ಲಿ ಸ್ಟೀಫನ್
ಬೆಂಚ್: ತನಯ್ ತ್ಯಾಗರಾಜನ್, ಲಕ್ಷಯ್ ಗಾರ್ಗ್, ಏಕನಾಥ್ ಕೇರ್ಕರ್, ದೇವದತ್ ಪಡಿಕ್ಕಲ್
ವೆಸ್ಟ್ ಜೋಸ್ ಸ್ಕ್ವಾಡ್ ಹೀಗಿದೆ: ಯಶಸ್ವಿ ಜೈಸ್ವಾಲ್, ಪ್ರಿಯಾಂಕ್ ಪಾಂಚಾಲ್, ಅಜಿಂಕ್ಯ ರಹಾನೆ (ನಾಯಕ), ಶ್ರೇಯಸ್ ಅಯ್ಯರ್, ಸರ್ಫರಾಜ್ ಖಾನ್, ಅತಿತ್ ಶೇಠ್, ಶಮ್ಸ್ ಮುಲಾನಿ, ಹೆಟ್ ಪಟೇಲ್ (ವಿಕೆಟ್ ಕೀಪರ್), ತನುಷ್ ಕೋಟ್ಯಾನ್, ಜಯದೇವ್ ಉನದ್ಕತ್, ಚಿಂತನ್ ಗಜಾ
ಬೆಂಚ್: ರಾಹುಲ್ ತ್ರಿಪಾಠಿ, ಅರ್ಮಾನ್ ಜಾಫರ್, ಚಿರಾಗ್ ಜಾನಿ, ಸತ್ಯಜೀತ್ ಬಚಾವ್, ಚೇತನ್ ಸಕರಿಯಾ, ಹಾರ್ದಿಕ್ ತಮೋರ್, ಪೃಥ್ವಿ ಶಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications