ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಧೋನಿ ನಾಯಕರಾಗಿದ್ದಾಗ ಭಾರತಕ್ಕೆ ಪಾಕಿಸ್ತಾನ ಲೆಕ್ಕಕ್ಕೇ ಇರಲಿಲ್ಲ ಎಂದ ಶಾಹಿದ್ ಅಫ್ರಿದಿ

During MS Dhoni Captaincy Team India Sidelined Pakistan : Shahid Afridi

ಎಂಎಸ್‌ ಧೋನಿ ನಾಯಕತ್ವದಲ್ಲಿದ್ದ ಟೀಂ ಇಂಡಿಯಾ ಪಾಕಿಸ್ತಾನವನ್ನು ಸಂಪೂರ್ಣವಾಗಿ ಕಡೆಗಣಿಸಿತ್ತು ಎಂದು ಪಾಕಿಸ್ತಾನ ಮಾಜಿ ಆಲ್‌ ರೌಂಡರ್ ಶಾಹಿದ್ ಅಫ್ರಿದಿ ಹೇಳಿದ್ದಾರೆ. ದೋಣಿ ನಾಯಕತ್ವದ ಟೀಂ ಇಂಡಿಯಾ ಪಾಕಿಸ್ತಾನದ ವಿರುದ್ಧ ಸ್ಪಷ್ಟವಾಗಿ ಮೇಲುಗೈ ಸಾಧಿಸಿತ್ತು, ಆದರೆ ಈಗ ಪರಿಸ್ಥಿತಿ ಸ್ವಲ್ಪ ಬದಲಾಗಿದೆ ಎಂದು ಅವರು ಹೇಳಿದ್ದಾರೆ.

IND Vs SA ODI : ಸಿಕ್ಕಿರುವ ಅವಕಾಶಗಳನ್ನು ಬಳಸಿಕೊಳ್ಳಿ ಎಂದ ಆಕಾಶ್ ಚೋಪ್ರಾIND Vs SA ODI : ಸಿಕ್ಕಿರುವ ಅವಕಾಶಗಳನ್ನು ಬಳಸಿಕೊಳ್ಳಿ ಎಂದ ಆಕಾಶ್ ಚೋಪ್ರಾ

2021 ರ ಟಿ20 ವಿಶ್ವಕಪ್ ವರೆಗೆ, ಪಾಕಿಸ್ತಾನವು ವಿಶ್ವಕಪ್‌ಗಳಲ್ಲಿ ಭಾರತದ ವಿರುದ್ಧ ಒಂದು ಬಾರಿಯೂ ಗೆಲ್ಲಲು ಸಾಧ್ಯವಾಗಿರಲಿಲ್ಲ. ಸತತವಾಗಿ ಏಳು ಏಕದಿನ ಪಂದ್ಯಗಳು ಮತ್ತು ಐದು ಟಿ20 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿತ್ತು. 1992ರಿಂದ 2021ರವರೆಗೆ ಪಾಕಿಸ್ತಾನಕ್ಕೆ ಭಾರತವನ್ನು ಸೋಲಿಸಲು ಸಾಧ್ಯವಾಗಿರಲಿಲ್ಲ.

ಭಾರತ ತಂಡ ಏಷ್ಯಾಕಪ್‌ನಲ್ಲಿ ಪಾಕಿಸ್ತಾನಕ್ಕಿಂತ ಉತ್ತಮ ದಾಖಲೆಯನ್ನು ಹೊಂದಿದೆ. ಆದರೂ, ಈ ಬಾರಿ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಕೂಡ ಭಾರತ ತಂಡದ ವಿರುದ್ಧ ಪಾಕಿಸ್ತಾನ 10 ವಿಕೆಟ್‌ಗಳ ಜಯ ಗಳಿಸಿತ್ತು.

ಎಂಎಸ್ ಧೋನಿ ನೇತೃತ್ವದ ಭಾರತ ತಂಡವು ತಮ್ಮ ಸಾಂಪ್ರದಾಯಿಕ ಎದುರಾಳಿಗಳನ್ನು ಬದಿಗೊತ್ತಿದೆ ಮತ್ತು ಇತರ ತಂಡಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಧೋನಿ ಇದ್ದಾಗ ಪಾಕಿಸ್ತಾನವನ್ನು ಕೇವಲವಾಗಿ ನೋಡುತ್ತಿದ್ದರು

ಧೋನಿ ಇದ್ದಾಗ ಪಾಕಿಸ್ತಾನವನ್ನು ಕೇವಲವಾಗಿ ನೋಡುತ್ತಿದ್ದರು

ಸಾಮಾ ಟಿವಿಯೊಂದಿಗೆ ಮಾತನಾಡಿದ ಅಫ್ರಿದಿ, ಧೋನಿ ನಾಯಕರಾಗಿದ್ದ ಅವಧಿಯಲ್ಲಿ ಭಾರತವು ಪಾಕಿಸ್ತಾನವನ್ನು ಕಡೆಗಣಿಸುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಸತತವಾಗಿ ಗೆಲುವಿನಲ್ಲಿ ಧೋನಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಅವರು ಹೇಳಿದ್ದಾರೆ.

ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾವನ್ನು ಕಡೆಗಣಿಸಿ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಂತಹ ತಂಡಗಳೊಂದಿಗೆ ಸ್ಪರ್ಧಿಸಲು ಪ್ರಾರಂಭಿಸಿತು ಎಂದು ಅಫ್ರಿದಿ ಹೇಳಿದ್ದಾರೆ.

IND vs SA ODI: ಪುಟ್ಟ ಅಭಿಮಾನಿ ಸಾವಿಗೆ ಕಂಬನಿ ಮಿಡಿದ ಡೇವಿಡ್ ಮಿಲ್ಲರ್

ಸಂಪೂರ್ಣ ಮೇಲುಗೈ ಸಾಧಿಸಿದ್ದ ಟೀಂ ಇಂಡಿಯಾ

ಸಂಪೂರ್ಣ ಮೇಲುಗೈ ಸಾಧಿಸಿದ್ದ ಟೀಂ ಇಂಡಿಯಾ

"ನೀವು ಭಾರತ ತಂಡವನ್ನು ನೋಡಿದರೆ, ಧೋನಿ ಅಧಿಕಾರಾವಧಿಯಲ್ಲಿ ಅವರು ಪಾಕಿಸ್ತಾನದ ಬಗ್ಗೆ ಇದ್ದ ದೃಷ್ಟಿಕೋನವನ್ನು ಬದಲಾಯಿಸಿದರು. ಭಾರತ-ಪಾಕಿಸ್ತಾನ ನಡುವೆ ಇದ್ದ ಪೈಪೋಟಿಯನ್ನು ಕೊನೆಗೊಳಿಸಿದರು. ಅವರು ಪಾಕಿಸ್ತಾನದ ವಿರುದ್ಧದ ಪಂದ್ಯಗಳನ್ನು ಸತತವಾಗಿ ಗೆಲ್ಲುತ್ತಿದ್ದರು. ಪ್ರತಿ ಬಾರಿ ಪಂದ್ಯ ಆಡುವಾಗಲೂ ಪಾಕಿಸ್ತಾನಕ್ಕೆ ಸೋಲು ಖಚಿತವಾಗಿರುತ್ತಿತ್ತು" ಎಂದು ಹೇಳಿದ್ದಾರೆ.

ಭಾರತವು ಈಗ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ನೊಂದಿಗೆ ಹೆಚ್ಚು ಸ್ಪರ್ಧಿಸಲು ಪ್ರಾರಂಭಿಸಿದಾಗ ಹಿಂದಿನಂತೆ ಭಿನ್ನವಾಗಿ ತಮ್ಮ ಮನಸ್ಥಿತಿಯನ್ನು ಬದಲಾಯಿಸಿದೆ. ಭಾರತವು ಪಾಕಿಸ್ತಾವನ್ನು ನಿರ್ಲಕ್ಷಿಸಿತ್ತು ಎಂದು ಹೇಳಿದ್ದಾರೆ.

ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಸೋತಿದ್ದ ಪಾಕಿಸ್ತಾನ

ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಸೋತಿದ್ದ ಪಾಕಿಸ್ತಾನ

2007 ರಲ್ಲಿ ಮೊದಲ ಬಾರಿಗೆ ಭಾರತ ತಂಡದ ನಾಯಕರಾಗಿದ್ದ ಧೋನಿ, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದರು. ಜೋಹಾನ್ಸ್‌ಬರ್ಗ್‌ನಲ್ಲಿ 2007 ರ ವಿಶ್ವ ಟಿ20 ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕವಾಗಿ ಗೆಲುವು ಸಾಧಿಸಿದ್ದರು.

ಅಂದಿನಿಂದ ಧೋನಿ ನಾಯಕರಾಗಿದ್ದ ಅವಧಿಯಲ್ಲಿ ಟೀಂ ಇಂಡಿಯಾ ಪಾಕಿಸ್ತಾನದ ವಿರುದ್ಧ ಒಂದು ಪಂದ್ಯವನ್ನು ಕೂಡ ಸೋತಿರಲಿಲ್ಲ ಎನ್ನುವುದು ದಾಖಲೆ.

ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಲು ಕ್ಷಣಗಣನೆ ಆರಂಭವಾಗಿದೆ. ಎರಡು ತಂಡಗಳು ಅಕ್ಟೋಬರ್ 23ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ (MCG) ಟಿ20 ವಿಶ್ವಕಪ್‌ನ ತಮ್ಮ ಮೊದಲ ಪಂದ್ಯವನ್ನು ಆಡಲಿವೆ.

ಕಳೆದ ವರ್ಷ ಸಾಂಪ್ರದಾಯಿಕ ಎದುರಾಳಿ ವಿರುದ್ಧ 10 ವಿಕೆಟ್‌ಗಳಿಂದ ಸೋತಿದ್ದ ರೋಹಿತ್ ಶರ್ಮಾ ನೇತೃತ್ವದ ಭಾರತವು ಸೋಲಿಗೆ ಸೇಡು ತೀರಿಸಿಕೊಳ್ಳಲು ಬಯಸುತ್ತದೆ. ಪಾಕಿಸ್ತಾನ ತಂಡ ಕೂಡ ಅತ್ಯುತ್ತಮ ಬೌಲಿಂಗ್ ವಿಭಾಗವನ್ನು ಹೊಂದಿದೆ, ಅವರ ಅಗ್ರ ಕ್ರಮಾಂಕದ ಬ್ಯಾಟರ್ ಗಳು ಉತ್ತಮ ಫಾರ್ಮ್‌ನಲ್ಲಿದ್ದಾರೆ. ಈ ಪಂದ್ಯದಲ್ಲಿ ಗೆಲುವಿನಗಾಗಿ ಎರಡೂ ತಂಡಗಳು ಉತ್ತಮ ಪೈಪೋಟಿ ನಡೆಸಲಿವೆ.

Story first published: Sunday, October 9, 2022, 14:08 [IST]
Other articles published on Oct 9, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X