ಐಪಿಎಲ್: ತನ್ನ ಅತಿಹೆಚ್ಚು ವಿಕೆಟ್ ದಾಖಲೆ ಸರಿದೂಗಿಸಿದ ಹರ್ಷಲ್ ಪಟೇಲ್ ಕುರಿತು ಬ್ರಾವೊ ಪ್ರತಿಕ್ರಿಯೆ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿಯುವ ಹಂತಕ್ಕೆ ಬಂದು ತಲುಪಿದೆ. ಇತ್ತೀಚೆಗಷ್ಟೇ ಲೀಗ್ ಹಂತದ ಪಂದ್ಯಗಳು ಮುಗಿದು ಪ್ಲೇ ಆಫ್ ಸುತ್ತಿನ ಪಂದ್ಯಗಳು ಆರಂಭವಾಗಿವೆ. ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಪ್ಲೇ ಆಫ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದ್ದವು. ಹೀಗೆ ಪ್ಲೇ ಆಫ್ ಸುತ್ತಿನ ಮೊದಲನೇ ಪಂದ್ಯವಾದ ಕ್ವಾಲಿಫೈಯರ್ 1ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಡಿದವು. ಈ ಪಂದ್ಯದಲ್ಲಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೇರವಾಗಿ ಫೈನಲ್ ಪ್ರವೇಶಿಸಿತು, ಸೋತ ಡೆಲ್ಲಿ ಕ್ಯಾಪಿಟಲ್ಸ್ ಕ್ವಾಲಿಫೈಯರ್ 2 ಪಂದ್ಯಕ್ಕೆ ಪ್ರವೇಶಿಸಿದೆ.

ಪಂಜಾಬ್ ಕಿಂಗ್ಸ್‌ ಬಿಟ್ಟು ಹೊರಬರುವ ಕೆಎಲ್ ರಾಹುಲ್‌ಗೆ ನಾಯಕ ಸ್ಥಾನ ನೀಡಲು ಸಿದ್ಧವಾಗಿವೆ ಈ 3 ತಂಡಗಳು!ಪಂಜಾಬ್ ಕಿಂಗ್ಸ್‌ ಬಿಟ್ಟು ಹೊರಬರುವ ಕೆಎಲ್ ರಾಹುಲ್‌ಗೆ ನಾಯಕ ಸ್ಥಾನ ನೀಡಲು ಸಿದ್ಧವಾಗಿವೆ ಈ 3 ತಂಡಗಳು!

ಇತ್ತ ಇತ್ತೀಚೆಗಷ್ಟೇ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಿದವು. ಈ ರೋಚಕ ಪಂದ್ಯದ ಅಂತಿಮ ಹಂತದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಜಯ ಸಾಧಿಸುವುದರ ಮೂಲಕ ಕ್ವಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆಯನ್ನು ಪಡೆದುಕೊಂಡಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹತ್ವದ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಶರಣಾಗುವುದರ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದೆ.

ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟ್ರೋಫಿ ಗೆಲ್ಲುವ ಕನಸು ನನಸಾಗಿಲ್ಲ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ ಹರ್ಷಲ್ ಪಟೇಲ್ ಮಾತ್ರ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಐಪಿಎಲ್ ಇತಿಹಾಸದಲ್ಲಿ ನಿರ್ಮಾಣವಾಗಿದ್ದ ದಾಖಲೆಯೊಂದನ್ನು ಸರಿದೂಗಿಸಿಕೊಳ್ಳುವುದರ ಮೂಲಕ ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ.

ಹೌದು, ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಹರ್ಷಲ್ ಪಟೇಲ್ 15 ಪಂದ್ಯಗಳನ್ನಾಡುವ ಮೂಲಕ 32 ವಿಕೆಟ್‍ಗಳನ್ನು ಪಡೆದು ಪರ್ಪಲ್ ಕ್ಯಾಪ್ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಮೂಲಕ 2013ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡ್ವೇನ್ ಬ್ರಾವೋ ಮಾಡಿದ್ದ ದಾಖಲೆಯನ್ನು ಹರ್ಷಲ್ ಪಟೇಲ್ ಸರಿದೂಗಿಸಿದ್ದಾರೆ. 2013ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡ್ವೇನ್ ಬ್ರಾವೊ ಕೂಡ 32 ವಿಕೆಟ್‍ಗಳನ್ನು ಪಡೆದುಕೊಂಡಿದ್ದರು. ಇದೀಗ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಹರ್ಷಲ್ ಪಟೇಲ್ ಕೂಡ 32 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಡ್ವೇನ್ ಬ್ರಾವೊ ಅವರ ಆ ದಾಖಲೆಯನ್ನು ಸರಿದೂಗಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಈ ದಾಖಲೆಯನ್ನು ಡ್ವೇನ್ ಬ್ರಾವೋ ಮತ್ತು ಹರ್ಷಲ್ ಪಟೇಲ್ ಹೊರತುಪಡಿಸಿ ಬೇರೆ ಯಾವುದೇ ಬೌಲರ್‌ಗಳು ಕೂಡ ಮಾಡಿಲ್ಲ. ಇನ್ನು ಹರ್ಷಲ್ ಪಟೇಲ್ ಅವರಿಗೆ ಡ್ವೇನ್ ಬ್ರಾವೊ ಅವರ ಈ ದಾಖಲೆಯನ್ನು ಮುರಿಯುವ ಅವಕಾಶ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಇತ್ತು. ಆದರೆ ಹರ್ಷಲ್ ಪಟೇಲ್ ಎಸೆತದಲ್ಲಿ ಸುನಿಲ್ ನರೈನ್ ಕ್ಯಾಚ್ ನೀಡಿದಾಗ ದೇವದತ್ ಪಡಿಕ್ಕಲ್ ಆ ಕ್ಯಾಚನ್ನು ಕೈಬಿಟ್ಟ ಕಾರಣ ಹರ್ಷಲ್ ಪಟೇಲ್ ಈ ದಾಖಲೆಯನ್ನು ಮುರಿಯುವಲ್ಲಿ ವಿಫಲರಾದರು. ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ 4 ಓವರ್ ಮಾಡಿದ ಹರ್ಷಲ್ ಪಟೇಲ್ 19 ರನ್ ನೀಡಿ 2 ವಿಕೆಟ್ ಪಡೆದರು.

ಕೊಹ್ಲಿ ನಾಯಕತ್ವದ ಕೊನೆಯ ಪಂದ್ಯ ಸೋತು ಟೂರ್ನಿಯಿಂದ ಹೊರಬಿದ್ದ ಆರ್‌ಸಿಬಿ; ಸೋಲಿಗೆ ಕಾರಣ ತಿಳಿಸಿದ ಕೊಹ್ಲಿಕೊಹ್ಲಿ ನಾಯಕತ್ವದ ಕೊನೆಯ ಪಂದ್ಯ ಸೋತು ಟೂರ್ನಿಯಿಂದ ಹೊರಬಿದ್ದ ಆರ್‌ಸಿಬಿ; ಸೋಲಿಗೆ ಕಾರಣ ತಿಳಿಸಿದ ಕೊಹ್ಲಿ

ಹೀಗೆ ತನ್ನ ದೊಡ್ಡ ಮಟ್ಟದ ದಾಖಲೆಯನ್ನು ಬರೋಬ್ಬರಿ 8 ವರ್ಷಗಳ ಬಳಿಕ ಆಟಗಾರನೊಬ್ಬ ಸರಿದೂಗಿಸಿರುವುದರ ಕುರಿತಾಗಿ ಪ್ರತಿಕ್ರಿಯಿಸಿರುವ ಡ್ವೇನ್ ಬ್ರಾವೊ ಹರ್ಷಲ್ ಪಟೇಲ್ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಲಿಮಿನೇಟರ್ ಪಂದ್ಯ ಮುಗಿದ ಕೂಡಲೇ ಪ್ರತಿಕ್ರಿಯಿಸಿರುವ ಡ್ವೇನ್ ಬ್ರಾವೊ 'ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೀವು ತೋರಿರುವ ಪ್ರದರ್ಶನಕ್ಕೆ ಶುಭಾಶಯಗಳು, ಇನ್ನೂ ಎತ್ತರಕ್ಕೆ ಹೋಗುವ ಅರ್ಹತೆ ನಿಮಗಿದೆ' ಎಂದು ಹರ್ಷಲ್ ಪಟೇಲ್ ಅವರನ್ನು ಡ್ವೇನ್ ಬ್ರಾವೋ ಹೊಗಳಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Tuesday, October 12, 2021, 14:30 [IST]
Other articles published on Oct 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X