ಇಂಗ್ಲೆಂಡ್‌ನಲ್ಲಿ ಐಪಿಎಲ್ ಆಯೋಜನೆ ಬಗ್ಗೆ ಬಿಸಿಸಿಐನಿಂದ ಯಾವುದೇ ಸೂಚನೆಯಿಲ್ಲ: ಇಸಿಬಿ

ಈ ಬಾರಿಯ ಐಪಿಎಲ್ ಆವೃತ್ತಿ ಕೊರೊನಾ ವೈರಸ್‌ನ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಸದ್ಯದ ಬೆಳವಣಿಗೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೂರ್ನಿಯ ಉಳಿದ ಪಂದ್ಯಗಳು ಆಯೋಜನೆಯಾಗುವುದು ಅಸಾಧ್ಯ. ಅಲ್ಲದೆ ಸದ್ಯದ ಸ್ಥಿತಿಯಲ್ಲಿ ಸೆಪ್ಟೆಂಬರ್ ವರೆಗೆ ಐಪಿಎಲ್ ಟೂರ್ನಿಯನ್ನು ಆಯೋಜಿಸುವುದು ಸಾಧ್ಯವೂ ಇಲ್ಲ. ಹೀಗಾಗಿ ಟೂರ್ನಿ ಎಲ್ಲಿ ಯಾವಾಗ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ
ಈ ಮಧ್ಯೆ ಟೂರ್ನಿ ಮುಂದೂಡಿಕೆಯಾದಾಗಿನಿಂದ ಮೂರು ತಾಣಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಇಂಗ್ಲೆಂಡ್, ಯುಎಇ ಮತ್ತು ಆಸ್ಟ್ರೇಲಿಯಾದಲ್ಲಿ ಈ ಬಾರಿಯ ಐಪಿಎಲ್‌ನ ಉಳಿದ ಪಂದ್ಯಗಳನ್ನು ಆಯೋಜಿಸುವ ಸಾಧ್ಯತೆಗಳ ಬಗ್ಗೆ ಮಾತುಗಳು ಕೇಳಿ ಬರಲು ಆರಂಭಿಸಿದೆ. ಈ ಬಗ್ಗೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಈಗ ಪ್ರತಿಕ್ರಿಯೆ ನೀಡಿದೆ.
"ನಾವು ಬಿಸಿಸಿಐ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಇಂಗ್ಲೆಂಡ್ ಪ್ರವಾಸದ ಬಗ್ಗೆ ಹಾಗೂ ಇತರ ಸಂಗತಿಗಳ ಬಗ್ಗೆ ಚರ್ಚೆಯನ್ನು ನಡೆಸುತ್ತಿದ್ದೇವೆ. ಆದರೆ ಈವರೆಗೂ ಮುಂದೂಡಿಕೆಯಾಗಿರುವ ಐಪಿಎಲ್ ಟೂರ್ನಿಯ ಮುಂದುವರಿದ ಭಾಗದ ಆಯೋಜನೆಗೆ ಇಂಗ್ಲೆಂಡ್‌ಅನ್ನು ಪರ್ಯಾಯವಾಗಿ ಆಯ್ಕೆ ಮಾಡುವ ಬಗ್ಗೆ ಯಾವುದೇ ಸೂಚನೆಗಳನ್ನು ಕೂಡ ಅವರು ನಮಗೆ ನೀಡಿಲ್ಲ" ಎಂದು ಇಸಿಬಿ ವಕ್ತಾರ ಡೈಲಿ ಮೇಲ್‌ಗೆ ನೀಡಿದ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ.
ಇನ್ನು ಇದೇ ವರದಿಯಲ್ಲಿ ಕೊರೊನಾ ವೈರಸ್‌ನ ಕಾರಣದಿಂದಾಗಿ ಮುಂದೂಡಿಕೆಯಾಗಿರುವ ಈ ಟೂರ್ನಿಯನ್ನು ಯುಕೆಗೆ ತರಲು ಇಂಗ್ಲೀಷ್ ಕೌಂಟಿಗಳು ಉತ್ಸುಕವಾಗಿದೆ. ಕಿಯಾ ಓವಲ್, ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಹಾಗೂ ಎಡ್ಜ್ ಬಾಸ್ಟನ್ ಅಂಗಳಗಳನ್ನು ಐಪಿಎಲ್ 14ನೇ ಆವೃತ್ತಿಯಲ್ಲಿ ಆಯೋಜನೆಗೆ ಬಾಕಿಯಿರುವ 31 ಪಂದ್ಯಗಳಿಗೆ ಸಂಭಾವ್ಯ ತಾಣಗಳು ಎಂದು ಈ ವರದಿಯಲ್ಲಿ ಹೇಳಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications