ಭಾರತದ ಮಾಜಿ ಆಟಗಾರರಾದ ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ ಅವರಿಗೆ ಇಡಿ ಸಮನ್ಸ್ ನೀಡಿದೆ.
ಟೀಮ್ ಇಂಡಿಯಾದ ಮಾಜಿ ಸೂಪರ್ ಸ್ಟಾರ್ ಆಟಗಾರ ಯುವರಾಜ್ ಸಿಂಗ್ ಹಾಗೂ ಕನ್ನಡಿಗ ರಾಬಿನ್ ಉತ್ತಪ್ಪ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ಆನ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಯುವರಾಜ್ ಸಿಂಗ್ ಅವರಿಗೆ ವಿಚಾರಣೆಗೆ ಸೆಪ್ಟಂಬರ್ 23 ರಂದು ಹಾಜರಾಗುವಂತೆ ಇಡಿ ತಿಳಿಸಿದೆ. ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಟೀಮ್ ಇಂಡಿಯಾದ ಮಾಜಿ ಆಟಗಾರರಿಗೆ ಸಮನ್ಸ್ ಜಾರಿ ಮಾಡಿದೆ.
ಇದೇ ಪ್ರಕಟಣಕ್ಕೆ ಸಂಬಂಧಿಸಿದಂತೆ ಈ ಮೊದಲು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಹಾಗೂ ಸ್ಟಾರ್ ಮಾಜಿ ಆಲ್‌ರೌಂಡರ್ ಸುರೇಶ್ ರೈನ್ ಅವರಿಗೂ ಇಡಿ ವಿಚಾರಣೆಗೆ ಕರೆದಿತ್ತು. ಅಪ್ಲೀಕೇಷನ್ ಸಂಬಂಧಿಸಿದಂತೆ ಹಣದ ವಹಿವಾಟಿನ ಪಡೆಯಲು ಈ ಮೊದಲು ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ಆಟಗಾರರ ಹೆಸರುಗಳನ್ನು ಹಾಗೂ ಫೋಟೋಳ್ನು ದರ್ಬಳಿಕೆ ಮಾಡಿಕೊಳ್ಳಲಾಗಿದೆಯಾ ಎಂಬ ಬಗ್ಗೆಯೂ ಇಡಿ ಚಿತ್ತ ನೆಟ್ಟಿದೆ.

ಏನಿದು ಪ್ರಕರಣ?
ಸದ್ಯ ಇಡಿ ನಡೆಸುತ್ತಿರುವ ತನಿಖೆ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳಿಗೆ ಸಂಬಂಧಿಸಿದೆ. ಈ ಅಪ್ಲಿಕೇಶನ್ ಮೂಲಕ ಜನ ಸಾಮಾನ್ಯರಿಗೆ ಕೋಟ್ಯಾಂತರ ರೂಪಾಯಿ ಮೋಸ ಮಾಡಲಾಗಿದ್ದು, ದೊಡ್ಡ ಪ್ರಮಾಣದಲ್ಲಿ ತೆರಿಗೆ ವಂಚನೆ ಮಾಡಲಾಗಿದೆ ಎಂದು ತನಿಖೆ ನಡೆಯುತ್ತಿದೆ. 1xBet ಬೆಟ್ಟಿಂಗ್ ಉದ್ಯಮದಲ್ಲಿ 18 ವರ್ಷದ ಅನುಭವ ಹೊಂದಿದೆ. ಈ ಕಂಪನಿ ಹೇಳಕೊಳ್ಳುವಂತೆ ಈ ಪ್ಲಾಟ್ ಫಾರ್ಮ್‌ನಲ್ಲಿ ಬಳಕೆದಾರರು ಸಾವಿರಾರು ಕ್ರೀಡೆಗಳ ಮೇಲೆ ಬೆಟ್ಟಿಂಗ್ ಮಾಡುವ ಸೌಲಭ್ಯವನ್ನು ಪಡೆಯುತ್ತಾರೆ. ಇನ್ನು ಈ ಕಂಪಿಯ ವೆಬ್‌ಸೈಟ್ ಹಾಗೂ ಅಪ್ಲಕೇಶನ್ 70 ಭಾಷೆಗಳಲ್ಲಿ ಲಭ್ಯವಿದೆ.
ಯುವರಾಜ್ ಸಿಂಗ್ ಸಾಧನೆ
ಟೀಮ್ ಇಂಡಿಯಾದ ಪರ ಸಿಕ್ಸರ್ ಸಿಂಗ್ ಎಂದೇ ಖ್ಯಾತಿ ಪಡೆದಿರುವ ಆಟಗಾರ ಯುವರಾಜ್ ಸಿಂಗ್. ಇವರು 2007ರಲ್ಲಿ ನಡೆದ ಟ20 ವಿಶ್ವಕಪ್ ಹಾಗೂ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಇವರು ಟೀಮ್ ಇಂಡಿಯಾ ಪರ 40 ಟೆಸ್ಟ್ ಪಂದ್ಯಗಳಲ್ಲಿ 1900 ರನ್ ಹಾಗೂ 28 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 3 ಶತಕಗಳು ಮತ್ತು 11 ಅರ್ಧಶತಕಗಳು ಸೇರಿವೆ. ಇನ್ನು 304 ಏಕದಿನ ಪಂದ್ಯಗಳಲ್ಲಿ ಭಾರತದ ಪರ ಆಡಿದ್ದು, 14 ಶತಕ ಹಾಗೂ 52 ಅರ್ಧಶತಕ ಬಾರಿಸಿದ್ದು, 111 ವಿಕೆಟ್ ಕಬಳಿಸಿದ್ದಾರೆ. ಇನ್ನು ಟಿ20ಯಲ್ಲಿ ಯುವಿ 1177 ರನ್ ಸಿಡಿಸಿದ್ದು, 9 ವಿಕೆಟ್ ಕಬಳಿಸಿದ್ದಾರೆ.
ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯ
ಟೀಮ್ ಇಂಡಿಯಾ 2007ರಲ್ಲಿ ಟಿ20 ವಿಶ್ವಕಪ್ ಗೆದ್ದಾಗ ತಂಡದ ಸದಸ್ಯರಾಗಿದ್ದ ರಾಬಿನ್ ಉತ್ತಪ್ಪ ಭಾರತದ ಪರ 46 ಏಕದಿನ, 13 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 934 ಹಾಗೂ ಟಿ20ಯಲ್ಲಿ 249 ರನ್ ಸಿಡಿಸಿದ್ದಾರೆ. ಅಲ್ಲದೆ ಐಪಿಎಲ್‌ನಲ್ಲಿ ಉತ್ತಪ್ಪ 4 ಸಾವಿರ ರನ್ ಕಲೆ ಹಾಕಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications