Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Emerging Asia Cup 2023: ಭಾರತ ಎ ತಂಡದ ಆಲ್‌ರೌಂಡ್ ಪ್ರದರ್ಶನ; ನೇಪಾಳ ವಿರುದ್ಧ ಭರ್ಜರಿ ಗೆಲುವು

ಸೋಮವಾರ, ಜುಲೈ 17ರಂದು ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ 2023ರ ಉದಯೋನ್ಮುಖ ಏಷ್ಯಾ ಕಪ್ ಪಂದ್ಯಾವಳಿಯ ಪಂದ್ಯದಲ್ಲಿ ನೇಪಾಳ ತಂಡದ ವಿರುದ್ಧ ಭಾರತ ಎ ತಂಡ ಭರ್ಜರಿ ಗೆಲುವು ದಾಖಲಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನೇಪಾಳ ತಂಡ 39.2 ಓವರ್‌ಗಳಲ್ಲಿ 167 ರನ್‌ಗಳಿಗೆ ಆಲೌಟ್ ಆಯಿತು. 168 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಭಾರತ ಎ ತಂಡ 22.1 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು 172 ರನ್ ಗಳಿಸಿ 9 ವಿಕೆಟ್‌ಗಳ ಜಯ ಸಾಧಿಸಿತು.

Emerging Asia Cup 2023

ಭಾರತ ಎ ತಂಡದ ಪರ ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ಸಾಯಿ ಸುದರ್ಶನ್ ಮೊದಲ ವಿಕೆಟ್‌ಗೆ 139 ರನ್‌ಗಳ ಜೊತೆಯಾಟ ನೀಡಿ ಗೆಲುವಿಗೆ ಮುನ್ನುಡಿ ಬರೆದರು. ಇನ್ನು 2023ರ ಉದಯೋನ್ಮುಖ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಭಾರತ ಎ ತಂಡ ಸತತ ಎರಡನೇ ಗೆಲುವು ಪಡೆಯಿತು.

ಅಭಿಷೇಕ್ ಶರ್ಮಾ 69 ಎಸೆತಗಳಲ್ಲಿ 12 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 87 ರನ್ ಬಾರಿಸಿದರೆ, ಸಾಯಿ ಸುದರ್ಶನ್ 52 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ಸಮೇತ 58 ರನ್ ಗಳಿಸಿದರು. ಉಳಿದಂತೆ ಧ್ರುವ್ ಜುರೆಲ್ 12 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 21 ರನ್ ಗಳಿಸಿ ಭಾರತ ಎ ತಂಡವನ್ನು ಗೆಲ್ಲಿಸಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ನೇಪಾಳ ತಂಡದ ಪರ ನಾಯಕ ರೋಹಿತ್ ಕುಮಾರ್ ಪೌಡೆಲ್ 85 ಎಸೆತಗಳಲ್ಲಿ 7 ಬೌಂಡರಿ ಸಮೇತ 65 ರನ್ ಗಳಿಸಿದರೆ, ಗುಲ್ಶನ್ ಕುಮಾರ್ ಝಾ 30 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 38 ರನ್, ದೇವ್ ಖನಲ್ 15 ರನ್ ಗಳಿಸಿದ್ದು ಬಿಟ್ಟರೆ, ಉಳಿದವರಾರು ಎರಡಂಕಿ ಮೊತ್ತ ದಾಟಲಿಲ್ಲ.

Emerging Asia Cup 2023

ಭಾರತ ಎ ತಂಡದ ಪರ ಬೌಲಿಂಗ್‌ನಲ್ಲಿ ನಿಶಾಂತ್ ಸಂಧು 3.2 ಓವರ್‌ಗಳಲ್ಲಿ 14 ರನ್ ನೀಡಿ 4 ವಿಕೆಟ್ ಕಬಳಿಸಿದರು. ಆರ್‌ಎಸ್ ಹಂಗೇರ್ಕರ್ 6 ಓವರ್‌ಗಳಲ್ಲಿ 25 ರನ್ ನೀಡಿ 3 ವಿಕೆಟ್ ಪಡೆದರೆ, ಹರ್ಷಿತ್ ರಾಣಾ 5 ಓವರ್‌ಗಳಲ್ಲಿ 16 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಮಾನವ್ ಸುತಾರ್ 1 ವಿಕೆಟ್ ತಮ್ಮದಾಗಿಸಿಕೊಂಡರು.

ಭರ್ಜರಿಯಾಗಿ 87 ರನ್ ಬಾರಿಸಿದ ಭಾರತ ಎ ತಂಡದ ಅಭಿಷೇಕ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಮೂಲಕ 2023ರ ಉದಯೋನ್ಮುಖ ಏಷ್ಯಾ ಕಪ್ ಪಂದ್ಯಾವಳಿಯ ಬಿ ಗುಂಪಿನಲ್ಲಿ ಭಾರತ ಎ ತಂಡ 4 ಅಂಕಗಳನ್ನು ಕಲೆಹಾಕಿ ಅಗ್ರಸ್ಥಾನದಲ್ಲಿದೆ.

ಇನ್ನು ಭಾರತ ಎ ತಂಡ ತನ್ನ ಮುಂದಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎ ತಂಡವನ್ನು ಬುಧವಾರ, ಜುಲೈ 19ರಂದು ಕೊಲಂಬೊದಲ್ಲಿ ಎದುರಿಸಲಿದೆ. ಈ ಪಂದ್ಯವು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

Story first published: Monday, July 17, 2023, 19:40 [IST]
Other articles published on Jul 17, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+