Emerging Asia Cup 2023: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯದ ವರದಿ; ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಬುಧವಾರ, ಜುಲೈ 19ರಂದು ಕೊಲಂಬೊದಲ್ಲಿ ನಡೆಯಲಿರುವ ಬಹು ನಿರೀಕ್ಷಿತ 2023ರ ಎಸಿಸಿ ಪುರುಷರ ಉದಯೋನ್ಮುಖ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಭಾರತ ಎ ಮತ್ತು ಪಾಕಿಸ್ತಾನ ಎ ತಂಡಗಳು ಪರಸ್ಪರ ಸೆಣಸಾಡಲಿವೆ.
ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ಹೈ-ವೋಲ್ಟೇಜ್ ಪಂದ್ಯಕ್ಕಾಗಿ ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಕಾದು ಕುಳಿತಿದ್ದಾರೆ.
ಇದಕ್ಕೂ ಮೊದಲು ಭಾರತ ಎ ತಂಡ ಯುಎಇ ಎ ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ್ದರೆ, ನಂತರದ ಪಂದ್ಯದಲ್ಲಿ ನೇಪಾಳ ತಂಡದ ವಿರುದ್ಧ 9 ವಿಕೆಟ್‌ಗಳ ನಿರಾಯಾಸ ಜಯ ಕಂಡಿತು.

ಮತ್ತೊಂದೆಡೆ, ಪಾಕಿಸ್ತಾನ ಎ ತಂಡವು ತನ್ನ ಮೊದಲ ಪಂದ್ಯದಲ್ಲಿ ನೇಪಾಳ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿದ್ದರೆ, ಎರಡನೇ ಪಂದ್ಯದಲ್ಲಿ ಯುಎಇ ಎ ತಂಡದ ವಿರುದ್ಧ 184 ರನ್‌ಗಳ ಬೃಹತ್ ಗೆಲುವು ದಾಖಲಿಸಿದೆ. ಇದೀಗ ಎರಡೂ ಗೆದ್ದ ತಂಡಗಳು ಮುಖಾಮುಖಿಯಾಗಲಿವೆ.
ಈಗಾಗಲೇ ದೇಶೀಯ ಟೂರ್ನಿಯಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿರುವ ಭರವಸೆಯ ಯುವ ಆಟಗಾರರು ಭಾರತ ಎ ತಂಡವನ್ನು ಮುನ್ನಡೆಸುತ್ತಿದ್ದಾರೆ. ಯಶ್ ಧುಲ್, ಧ್ರುವ್ ಜುರೆಲ್, ಸಾಯಿ ಸುದರ್ಶನ್ ಮತ್ತು ಅಭಿಷೇಕ್ ಶರ್ಮಾ ಅವರಂತಹ ಆಟಗಾರರು ಐಪಿಎಲ್ ಅವೃತ್ತಿಯ ನಂತರ ಹಿರಿಯರ ರಾಷ್ಟ್ರೀಯ ತಂಡದ ಬಾಗಿಲು ತಟ್ಟಲು ನೋಡುತ್ತಿದ್ದಾರೆ.
ಭಾರತ ಎ ಮತ್ತು ಪಾಕಿಸ್ತಾನ ಎ ಪಂದ್ಯದ ವಿವರ
ದಿನಾಂಕ ಮತ್ತು ಸ್ಥಳ: ಭಾರತ ಎ vs ಪಾಕಿಸ್ತಾನ ಎ ತಂಡಗಳ ನಡುವಿನ 2023ರ ಉದಯೋನ್ಮುಖ ಏಷ್ಯಾ ಕಪ್ ಪಂದ್ಯವು ಬುಧವಾರ, ಜುಲೈ 19ರಂದು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಂದ್ಯದ ಸಮಯ: ಭಾರತ ಎ vs ಪಾಕಿಸ್ತಾನ ಎ ತಂಡಗಳ ನಡುವಿನ 2023ರ ಉದಯೋನ್ಮುಖ ಏಷ್ಯಾ ಕಪ್ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಭಾರತ ಎ vs ಪಾಕಿಸ್ತಾನ ಎ ತಂಡಗಳ ನಡುವಿನ 2023ರ ಉದಯೋನ್ಮುಖ ಏಷ್ಯಾ ಕಪ್ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮತ್ತು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.
ಭಾರತ ಎ vs ಪಾಕಿಸ್ತಾನ ಎ ಪೂರ್ಣ ತಂಡಗಳು
ಭಾರತ ಎ: ಯಶ್ ಧುಲ್ (ನಾಯಕ), ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ (ವಿಕೆಟ್ ಕೀಪರ್), ನಿಕಿನ್ ಜೋಸ್, ಪ್ರದೋಶ್ ರಂಜನ್ ಪಾಲ್, ರಿಯಾನ್ ಪರಾಗ್, ನಿಶಾಂತ್ ಸಿಂಧು, ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಮಾನವ್ ಸುತಾರ್, ಯುವರಾಜ್‌ಸಿಂಗ್ ದೋಡಿಯಾ, ಹರ್ಷಿತ್ ರಾಣಾ, ಆಕಾಶ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಾಜವರ್ಧನ್ ಹಂಗರ್ಗೇಕರ್.
ಪಾಕಿಸ್ತಾನ ಎ: ಮೊಹಮ್ಮದ್ ಹ್ಯಾರಿಸ್ (ನಾಯಕ/ವಿಕೆಟ್ ಕೀಪರ್), ಒಮೈರ್ ಬಿನ್ ಯೂಸುಫ್ (ಉಪನಾಯಕ), ಅಮದ್ ಬಟ್, ಅರ್ಷದ್ ಇಕ್ಬಾಲ್, ಹಸೀಬುಲ್ಲಾ, ಕಮ್ರಾನ್ ಗುಲಾಮ್, ಮೆಹ್ರಾನ್ ಮುಮ್ತಾಜ್, ಮುಬಾಸಿರ್ ಖಾನ್, ಮೊಹಮ್ಮದ್ ವಾಸಿಂ ಜೂನಿಯರ್, ಖಾಸಿಮ್ ಅಕ್ರಮ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಶಾನವಾಜ್ ದಹಾನಿ, ಸುಫಿಯಾನ್ ಮುಖೀಮ್, ತಯ್ಯಬ್ ತಾಹಿರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications