For Quick Alerts
ALLOW NOTIFICATIONS  
For Daily Alerts
 

Emerging Asia Cup 2023: ಭಾರತ vs ಪಾಕಿಸ್ತಾನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಬುಧವಾರ, ಜುಲೈ 19ರಂದು ಕೊಲಂಬೊದಲ್ಲಿ ನಡೆಯುತ್ತಿರುವ 2023ರ ಎಸಿಸಿ ಪುರುಷರ ಉದಯೋನ್ಮುಖ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಭಾರತ ಎ ಮತ್ತು ಪಾಕಿಸ್ತಾನ ಎ ತಂಡಗಳು ಪರಸ್ಪರ ಸೆಣಸಾಡುತ್ತಿವೆ.

ಟಾಸ್ ಗೆದ್ದ ಪಾಕಿಸ್ತಾನ ಎ ತಂಡದ ನಾಯಕ ಮೊಹಮ್ಮದ್ ಹ್ಯಾರಿಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಯಶ್ ಧುಲ್ ನಾಯಕತ್ವದ ಭಾರತ ಎ ತಂಡ ಮೊದಲು ಬೌಲಿಂಗ್ ಮಾಡುತ್ತಿದೆ.

Emerging Asia Cup 2023: India A vs Pakistan A Match Toss Report, Playing 11 And Live Score

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ಮತ್ತೊಂದು ಹೈ-ವೋಲ್ಟೇಜ್ ಪಂದ್ಯಕ್ಕಾಗಿ ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಕಣ್ಣರಳಿಸಿ ನೋಡುತ್ತಿದ್ದಾರೆ.

ಇದಕ್ಕೂ ಮೊದಲು ಭಾರತ ಎ ತಂಡ ಯುಎಇ ಎ ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ್ದರೆ, ನಂತರದ ಪಂದ್ಯದಲ್ಲಿ ನೇಪಾಳ ತಂಡದ ವಿರುದ್ಧ 9 ವಿಕೆಟ್‌ಗಳ ನಿರಾಯಾಸ ಜಯ ಕಂಡಿತು.

ಮತ್ತೊಂದೆಡೆ, ಪಾಕಿಸ್ತಾನ ಎ ತಂಡವು ತನ್ನ ಮೊದಲ ಪಂದ್ಯದಲ್ಲಿ ನೇಪಾಳ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿದ್ದರೆ, ಎರಡನೇ ಪಂದ್ಯದಲ್ಲಿ ಯುಎಇ ಎ ತಂಡದ ವಿರುದ್ಧ 184 ರನ್‌ಗಳ ಬೃಹತ್ ಗೆಲುವು ದಾಖಲಿಸಿದೆ. ಇದೀಗ ಎರಡೂ ಗೆದ್ದ ತಂಡಗಳು ಮುಖಾಮುಖಿಯಾಗಿವೆ.

ಭಾರತ ಎ vs ಪಾಕಿಸ್ತಾನ ಎ ಆಡುವ 11ರ ಬಳಗ
ಭಾರತ ಎ: ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ, ನಿಕಿನ್ ಜೋಸ್, ಯಶ್ ಧುಲ್ (ನಾಯಕ), ರಿಯಾನ್ ಪರಾಗ್, ನಿಶಾಂತ್ ಸಿಂಧು, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಮಾನವ್ ಸುತಾರ್, ಹರ್ಷಿತ್ ರಾಣಾ, ನಿತೀಶ್ ರೆಡ್ಡಿ, ರಾಜವರ್ಧನ್ ಹಂಗರಗೇಕರ್.

ಪಾಕಿಸ್ತಾನ ಎ: ಸೈಮ್ ಅಯೂಬ್, ಹಸೀಬುಲ್ಲಾ ಖಾನ್, ಮೊಹಮ್ಮದ್ ಹ್ಯಾರಿಸ್ (ನಾಯಕ/ ವಿಕೆಟ್ ಕೀಪರ್), ಕಮ್ರಾನ್ ಗುಲಾನ್, ಸಾಹಿಬ್ಜಾದಾ ಫರ್ಹಾನ್, ಒಮೈರ್ ಯೂಸುಫ್, ಖಾಸಿಮ್ ಅಕ್ರಮ್, ಮುಬಾಶಿರ್ ಖಾನ್, ಮೆಹ್ರಾನ್ ಮುಮ್ತಾಜ್, ಮೊಹಮ್ಮದ್ ವಾಸಿಮ್, ಶಹನವಾಜ್ ದಹಾನಿ.

Story first published: Wednesday, July 19, 2023, 14:19 [IST]
Other articles published on Jul 19, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+