Emerging Asia Cup 2024: ಭಾರತ ತಂಡಕ್ಕೆ ಹ್ಯಾಟ್ರಿಕ್ ಗೆಲುವು
ಎಸಿಸಿ ಉದಯೋನ್ಮುಖ ಏಷ್ಯಾಕಪ್ 2024ರಲ್ಲಿ ತನ್ನ ಮೂರನೇ ಪಂದ್ಯದಲ್ಲಿ ಒಮಾನ್ ವಿರುದ್ಧ ಭಾರತ ಎ ಅದ್ಭುತ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿದೆ. ಇದಕ್ಕೂ ಮುನ್ನ ಭಾರತ ಪಾಕಿಸ್ತಾನ ಮತ್ತು ಯುಎಇ ತಂಡಗಳನ್ನು ಸೋಲಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಒಮನ್ ವಿರುದ್ಧ 6 ವಿಕೆಟ್‌ಗಳಿಂದ ಸುಲಭ ಜಯ ಸಾಧಿಸಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಒಮಾನ್ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಒಮಾನ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿ ಭಾರತದ ಪರ0 ಅಭಿಷೇಕ್ ಶರ್ಮಾ, ಆಯುಷ್ ಬದೋನಿ ಮತ್ತು ತಿಲಕ್ ವರ್ಮಾ ಅದ್ಭುತ ಬ್ಯಾಟಿಂಗ್ ಮಾಡಿದರು. ಹೀಗಾಗಿ ಭಾರತ 30 ಎಸೆತಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದು ಬೀಗಿತು.

ಒಮಾನ್ ಪರದಾಟ
ಮೊದಲು ಬ್ಯಾಟಿಂಗ್ ಮಾಡಿದ ಒಮಾನ್‌ನ ಯಾವುದೇ ಬ್ಯಾಟರ್ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ. ಆತಿಥೇಯ ತಂಡದ ಪರ ಮೊಹಮ್ಮದ್ ನದೀಮ್ 49 ಎಸೆತಗಳಲ್ಲಿ ಗರಿಷ್ಠ 41 ರನ್ ಗಳಿಸಿದರು. ಇದಲ್ಲದೇ ಹಮ್ಜಾ ಮಿರ್ಜಾ (28) ಹಾಗೂ ವಾಸಿಂ ಅಲಿ (24) ತಂಡದ ಪರ ಗರಿಷ್ಠ ಸ್ಕೋರರ್ ಆದರು. ಈ ಮೂವರು ಬ್ಯಾಟರ್‌ಗಳ ಹೊರತಾಗಿ ಬೇರೆ ಯಾವುದೇ ಆಟಗಾರರು ಭಾರತದ ಬೌಲರ್‌ಗಳ ವಿರುದ್ಧ ರನ್ ಗಳಿಸಲು ಸಾಧ್ಯವಾಗಲಿಲ್ಲ.
ಬಿರುಸಿನ ಬ್ಯಾಟಿಂಗ್
ಒಮನ್ ನೀಡಿದ 140 ರನ್ ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಪರ ಆರಂಭಿಕ ಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಬಿರುಸಿನ ಬ್ಯಾಟಿಂಗ್ ಮಾಡಿದರು. ಅವರು 15 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 5 ಬೌಂಡರಿ ನೆರವಿನಿಂದ 34 ರನ್ ಗಳಿಸಿದರು. ಅನುಜ್ ರಾವತ್ 8 ರನ್ ಗಳಿಸಿ ಔಟಾದರು. ನಾಲ್ಕನೇ ವಿಕೆಟ್‌ಗೆ ಜೊತೆಯಾದ ನಾಯಕ ತಿಲಕ್ ವರ್ಮಾ ಮತ್ತು ಆಯುಷ್ ಬದೋನಿ ಕೂಡ ಅದ್ಭುತ ಇನ್ನಿಂಗ್ಸ್ ಆಡಿದರು. ಆಯುಷ್ ಬದೋನಿ 27 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 6 ಬೌಂಡರಿಗಳ ಸಹಾಯದಿಂದ 51 ರನ್ ಗಳಿಸಿದರು. ಇದಲ್ಲದೇ ನಾಯಕ ತಿಲಕ್ ವರ್ಮಾ 29 ಎಸೆತಗಳಲ್ಲಿ 35 ರನ್ ಗಳಿಸಿ ಅಜೇಯರಾಗಿ ಉಳಿದರು. ಇದರೊಂದಿಗೆ ಭಾರತ ತಂಡ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಗುರಿ ಮುಟ್ಟಿತು.
8 ಬೌಲರ್ ಪ್ರಯೋಗ
ಭಾರತದ ಪರ 8 ಬೌಲರ್‌ಗಳು ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದರು. ಅದರಲ್ಲಿ ಐವರು ಬೌಲರ್‌ಗಳು ತಲಾ ಒಂದು ವಿಕೆಟ್ ಪಡೆದು ಮಿಂಚಿದರು. ಆಕಿಬ್ ಖಾನ್, ರಸಿಖ್ ಸಲಾಂ, ನಿಶಾಂತ್ ಸಿಂಧು ಮತ್ತು ರಮಣದೀಪ್ ಸಿಂಗ್ ವಿಕೆಟ್ ಪಡೆದ ಬೌಲರ್‌ಗಳು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications