Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ashes 2023: ಉಸ್ಮಾನ್ ಖವಾಜಾ ಭರ್ಜರಿ ಶತಕ; ಇಂಗ್ಲೆಂಡ್‌ಗೆ ತಿರುಗೇಟು ನೀಡಿದ ಆಸ್ಟ್ರೇಲಿಯಾ

ಶನಿವಾರ, ಜೂನ್ 17ರಂದು ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಆಶಸ್ ಸರಣಿಯ ಮೊದಲ ಪಂದ್ಯದ ಎರಡನೇ ದಿನದಂದು ಆತಿಥೇಯ ಇಂಗ್ಲೆಂಡ್ ತಂಡದ ವಿರುದ್ಧ ಆಸ್ಟ್ರೇಲಿಯಾ ತಿರುಗೇಟು ನೀಡಿದೆ.

ಆರಂಭಿಕ ಹಿನ್ನಡೆಯ ಹೊರತಾಗಿಯೂ ಆಸೀಸ್ ಪಡೆ ಚೇತರಿಕೆಗೆ ಕಾರಣರಾದ ಉಸ್ಮಾನ್ ಖವಾಜಾ ಇಂಗ್ಲೆಂಡ್‌ನಲ್ಲಿ ಚೊಚ್ಚಲ ಟೆಸ್ಟ್ ಶತಕ ಗಳಿಸಿ ಆಸರೆಯಾದರು. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ನ 393 ರನ್‌ಗಳಿಗೆ ಪ್ರತ್ಯುತ್ತರವಾಗಿ, ಎರಡನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 5 ವಿಕೆಟ್‌ಗೆ 311 ರನ್ ಗಳಿಸಿದೆ.

ENG vs AUS Ashes 2023: Usman Khawaja Smashes Century; Australia Scored 311/5 in 1st Innings

ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಸತತ ಎರಡು ಎಸೆತಗಳಲ್ಲಿ ಡೇವಿಡ್ ವಾರ್ನರ್ ಮತ್ತು ಮಾರ್ನಸ್ ಲ್ಯಾಬುಸ್‌ಚಾಗ್ನೆ ಅವರ ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾಗೆ ಆರಂಭಿಕ ಆಘಾತ ನೀಡಿದರು. ಆಗ ಪ್ಯಾಟ್ ಕಮ್ಮಿನ್ಸ್ ಪಡೆ 67 ರನ್‌ಗೆ 3 ವಿಕೆಟ್ ಕಳೆದುಕೊಂಡು ಹೆಣಗಾಡುತ್ತಿತ್ತು.

ಸ್ಟೀವ್ ಸ್ಮಿತ್ 16 ರನ್ ಗಳಿಸಿ ಔಟಾದರೆ, ಟ್ರಾವಿಸ್ ಹೆಡ್ 63 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 50 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮುನ್ನ ತಂಡದ ಮೊತ್ತ ಹೆಚ್ಚಳಕ್ಕೆ ಕಾರಣರಾದರು.

ಆ ಬಳಿಕ ಆರಂಭಿಕ ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜಾ 279 ಎಸೆತಗಳಲ್ಲಿ 14 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ ಅಜೇಯ 126 ರನ್ ಮತ್ತು ವಿಕೆಟ್‌ಕೀಪರ್ ಅಲೆಕ್ಸ್ ಕ್ಯಾರಿ 80 ಎಸೆತಗಳಲ್ಲಿ 7 ಬೌಂಡರಿ ಮತ್ತು 1ಸಿಕ್ಸರ್ ನೆರವಿನಿಂದ ಅಜೇಯ 52 ರನ್‌ಗಳೊಂದಿಗೆ ಮುರಿಯದ 6ನೇ ವಿಕೆಟ್‌ಗೆ 91 ರನ್‌ಗಳ ಜೊತೆಯಾಟ ನಿರ್ಮಿಸಿ, ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ENG vs AUS Ashes 2023: Usman Khawaja Smashes Century; Australia Scored 311/5 in 1st Innings

ಇಂಗ್ಲೆಂಡ್ ಪರ ಬೌಲಿಂಗ್‌ನಲ್ಲಿ ಸ್ಟುವರ್ಟ್ ಬ್ರಾಡ್ 16 ಓವರ್‌ಗಳಲ್ಲಿ 49 ರನ್ ನೀಡಿ 2 ವಿಕೆಟ್ ಪಡೆದರೆ, ಮೊಯಿನ್ ಅಲಿ 29 ಓವರ್‌ಗಳಲ್ಲಿ 124 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಬೆನ್ ಸ್ಟೋಕ್ಸ್ 7 ಓವರ್‌ಗಳಲ್ಲಿ 33 ರನ್ ನೀಡಿ 1 ವಿಕೆಟ್ ಪಡೆದಿದ್ದಾರೆ.

ಇದಕ್ಕೂ ಮುನ್ನ ಮೊದಲ ದಿನ ಜೋ ರೂಟ್ ಅವರ ಅಜೇಯ 118 ರನ್‌ಗಳ ನೆರವಿನಿಂದ ಇಂಗ್ಲೆಂಡ್ ತಂಡ 393-8ಕ್ಕೆ ಡಿಕ್ಲೇರ್ ಮಾಡಿಕೊಂಡಿತ್ತು. ಇದೀಗ ಆಸ್ಟ್ರೇಲಿಯ ತಂಡ ಇಂಗ್ಲೆಂಡ್‌ ತಂಡದ ಮೊತ್ತಕ್ಕಿಂತ 82 ರನ್‌ಗಳಿಂದ ಹಿಂದೆ ಉಳಿದಿದೆ.

Story first published: Sunday, June 18, 2023, 8:22 [IST]
Other articles published on Jun 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+