Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

England vs Bangladesh t20: ಬಟ್ಲರ್ ಬಳಗಕ್ಕೆ ಬಾಂಗ್ಲಾ ಆಘಾತ; 6 ವಿಕೆಟ್‌ ಅಂತರದ ಗೆಲುವು

Eng vs Ban 1st T20I, Bangladesh win against England by 6 wickets, Highlights

ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಟಿ20 ಸರಣಿಯ ಮೊದಲ ಪಂದ್ಯದಲ್ಲಿಯೇ ಆಘಾತಕ್ಕೆ ಒಳಗಾಗಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಾಂಗ್ಲಾದೇಶ ಮೊದಲಿಗೆ ಬೌಲಿಂಗ್‌ನಲ್ಲಿ ಯಶಸ್ಸು ಸಾಧಿಸಿದ ಬಳಿಕ ಬ್ಯಾಟಿಂಗ್‌ನಲ್ಲಿಯೂ ಭರ್ಜರಿ ಪ್ರದರ್ಶನ ನೀಡಿದೆ. ಈ ಮೂಲಕ ಈ ಪಂದ್ಯವನ್ನು ಭರ್ಜರಿ 6 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದ್ದು ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂ್ಗ್ ನಡೆಸಿದ ಇಂಗ್ಲೆಂಡ್ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಮೊದಲ ವಿಕೆಟ್‌ಗೆ ಜೋಸ್ ಬಟ್ಲರ್ ಹಾಗೂ ಫಿಲಿಪ್ ಸಾಲ್ಟ್ ಜೋಡಿ 80 ರನ್‌ಗಳ ಜೊತೆಯಾಟ ನೀಡಿದರು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ಇಂಗ್ಲೆಂಡ್ ತಂಡಕ್ಕೆ ಉತ್ತಮ ಜೊತೆಯಾಟ ದೊರೆಯಲೇ ಇಲ್ಲ. ನಾಯಕ ಜೋಸ್ ಬಟ್ಲರ್ 42 ಎಸೆತಗಳಲ್ಲಿ 67 ರನ್ ಬಾರಿಸಿ ಮಿಂಚಿದರಾದರೂ ಮತ್ತೊಂದು ತುದಿಯಲ್ಲಿ ಅವರಿಗೆ ಸಾಥ್ ದೊರೆಯಲಿಲ್ಲ.

ಸಾಲ್ಟ್ 38 ರನ್‌ಗಳ ಕೊಡುಗೆ ನೀಡಿದರೆ ಬೆನ್ ಡಕೆಟ್ 20 ರನ್‌ಗಳಿಸಿದರು. ಉಳಿದ ಎಲ್ಲಾ ಆಟಗಾರರು ಕೂಡ ಒಂದಂಕಿಗೆ ವಿಕೆಟ್ ಕಳೆದುಕೊಂಡರು. ಹೀಗಾಗಿ ನಿಗದಿತ 20 ಓವರ್‌ಗಳಲ್ಲಿ ಇಂಗ್ಲೆಂಡ್ ತಂಡ 6 ವಿಕೆಟ್ ಕಳೆದುಕೊಂಡು ಕೇವಲ 156 ರನ್ ಮಾತ್ರವೇ ಗಳಿಸಿತು. ಬೌಲಿಂಗ್‌ನಲ್ಲಿ ಬಾಂಗ್ಲಾದೇಶ ಸಂಘಟಿತ ಪ್ರದರ್ಶನ ನೀಡಿದ್ದು ಗಮನಸೆಳೆಯಿತು.

ಇನ್ನು ಇಂಗ್ಲೆಂಡ್ ನೀಡಿದ 157 ರನ್‌ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಸಾಧಾರಣ ಆರಂಭ ಪಡೆದುಕೊಂಡಿತು. ಆದರೆ ಮೂರನೇ ಕ್ರಮಾಂಕದ ಆಟಗಾರ ನಜ್ಮುಲ್ ಹುಸೇನ ಶಂಟೋ ಬಾಂಗ್ಲಾದೇಶ ಪರವಾಗಿ ಮತ್ತಿಂದಯ ಅದ್ಭುತ ಇನ್ನಿಂಗ್ಸ್ ಆಡಿ ಗಮನಸೆಳೆದರು. 30 ಎಸೆತ ಎದುರಿಸಿದ ಶಂಟೋ 52 ರನ್ ಬಾರಿಸಿ ಮಿಂಚಿದ್ದಾರೆ. ಅವರಿಗೆ ತೌಹಿದ್ ಕ್ರಿದೊಯ್ ಉತ್ತಮವಾಗಿ ಸಾಥ್ ನೀಡಿದರು. ಬಳಿಕ ನಾಯಕ ಶಕೀಬ್ ಅಲ್ ಹಸನ್ ಕೂಡ ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ಮಿಂಚಿದ್ದಾರೆ.

ತೌಹಿದ್ ಹ್ರಿದೋಯ್ 17 ಎಸೆತಗಳಲ್ಲಿ 24 ರನ್‌ಗಳಿಸಿದರೆ ನಾಯಕ ಶಕೀಬ್ ಅಲ್ ಹಸನ್ 24 ಎಸೆತಗಳಲ್ಲಿ 34 ರನ್ ಬಾರಿಸಿ ಮಿಂಚಿದ್ದಾರೆ. ಅಂತಿಮವಾಗಿ ಅಫಿಫ್ ಹುಸೇನ್ ಕೂಡ ವಿಕೆಟ್ ಕಳೆದುಕೊಳ್ಳದೆ 15 ರನ್ ಬಾರಿಸಿ ಬಾಂಗ್ಲಾದೇಶದ ಗೆಲುವಿನಲ್ಲಿ ಕೊಡುಗೆ ನೀಡಿದರು. ಹೀಗಾಗಿ ಇನ್ನೂ ಭರ್ತಿ 12 ಎಸೆತಗಳು ಬಾಕಿಯಿರುವಂತೆಯೇ ಬಾಂಗ್ಲಾದೇಶ ಗೆಲುವಿನ ದಡ ಸೇರುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಬಾಂಗ್ಲಾದೇಶ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಬಾಂಗ್ಲಾದೇಶ ಆಡುವ ಬಳಗ: ರೋನಿ ತಾಲುಕ್ದಾರ್, ಲಿಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೋ, ಶಕೀಬ್ ಅಲ್ ಹಸನ್ (ನಾಯಕ), ಶಮೀಮ್ ಹೊಸೈನ್, ಅಫೀಫ್ ಹೊಸೈನ್, ತೌಹಿದ್ ಹೃದೋಯ್, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್

ಬೆಂಚ್: ನೂರುಲ್ ಹಸನ್, ಮೆಹಿದಿ ಹಸನ್ ಮಿರಾಜ್, ತನ್ವಿರ್ ಇಸ್ಲಾಂ, ರೆಜೌರ್ ರೆಹಮಾನ್ ರಾಜಾ

ಇಂಗ್ಲೆಂಡ್ ಆಡುವ ಬಳಗ: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಫಿಲಿಪ್ ಸಾಲ್ಟ್, ಡೇವಿಡ್ ಮಲನ್, ಬೆನ್ ಡಕೆಟ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಮಾರ್ಕ್ ವುಡ್
ಬೆಂಚ್: ರೀಸ್ ಟೋಪ್ಲಿ, ರೆಹಾನ್ ಅಹ್ಮದ್

Story first published: Thursday, March 9, 2023, 18:25 [IST]
Other articles published on Mar 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+