ENG vs BAN: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಬಾಂಗ್ಲಾದೇಶ

ಹಾಲಿ ಟಿ20 ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಬಾಂಗ್ಲಾದೇಶ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಮಾರ್ಚ್ ಕೊನೆಯಲ್ಲಿ ಸರಣಿ ನಡೆಯಲಿದ್ದು, ಸರಣಿಗಾಗಿ ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ರಾಷ್ಟ್ರೀಯ ತಂಡಕ್ಕೆ ಕರೆ ನೀಡಲಾಗಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ (ಬಿಪಿಎಲ್) ಅದ್ಭುತ ಪ್ರದರ್ಶನ ನೀಡಿದ ನಂತರ ಬ್ಯಾಟ್ಸ್‌ಮನ್ ತೌಹಿದ್ ಹೃದೋಯ್, ವೇಗಿ ರೆಜೌರ್ ರೆಹಮಾನ್ ರಾಜಾ ಮತ್ತು ಎಡಗೈ ಸ್ಪಿನ್ನರ್ ತನ್ವಿರ್ ಇಸ್ಲಾಂ ಈ ಮೂವರು ಆಟಗಾರರನ್ನು ಬಾಂಗ್ಲಾದೇಶ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಇದೇ ವೇಳೆ ಬ್ಯಾಟ್ಸ್‌ಮನ್‌ಗಳಾದ ಶಮೀಮ್ ಹೊಸೈನ್ ಮತ್ತು ರೋನಿ ತಾಲುಕ್ದಾರ್ ಕೂಡ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಂತರ ಬಾಂಗ್ಲಾದೇಶ ತಂಡಕ್ಕೆ ಮರಳಿದ್ದಾರೆ.
ನವೆಂಬರ್ 2021ರಲ್ಲಿ ಬಾಂಗ್ಲಾದೇಶ ತಂಡಕ್ಕಾಗಿ ಕೊನೆಯ ಬಾರಿ ಆಡಿದ್ದ ಶಮೀಮ್ ಹೊಸೈನ್ ರಾಷ್ಟ್ರೀಯ ಪುನರಾಗಮನವನ್ನು ಮಾಡಿದರು. ಇನ್ನು, ರೋನಿ ತಾಲುಕ್ದಾರ್ ಅವರ ಏಕೈಕ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು 2015ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ್ದರು.

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಯಾಸಿರ್ ಅಲಿ, ಸೌಮ್ಯ ಸರ್ಕಾರ್, ಆಲ್‌ರೌಂಡರ್ ಮೊಸಾಡೆಕ್ ಹೊಸೈನ್ ಮತ್ತು ವೇಗಿಗಳಾದ ಎಬಾಡೋಟ್ ಹೊಸೈನ್ ಮತ್ತು ಶೋರಿಫುಲ್ ಇಸ್ಲಾಂ ಅವರನ್ನು ತಂಡದಿಂದ ಕೈಬಿಡಲಾಗಿದೆ. ಇವರು ಕಳೆದ ವರ್ಷ ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶ ತಂಡದ ಭಾಗವಾಗಿದ್ದರು.
ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಸರಣಿಯ ಮೊದಲ ಪಂದ್ಯವು ಮಾರ್ಚ್ 9ರಂದು ಜಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡು ಮತ್ತು ಮೂರನೇ ಪಂದ್ಯಗಳು ಕ್ರಮವಾಗಿ ಮಾರ್ಚ್ 12 ಮತ್ತು ಮಾರ್ಚ್ 14ರಂದು ಢಾಕಾದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಗಮನಾರ್ಹ ವಿಷಯವೆಂದರೆ, ಬಾಂಗ್ಲಾದೇಶ ಮತ್ತು ಇಂಗ್ಲೆಂಡ್ ನಡುವಿನ ಮೊದಲ ದ್ವಿಪಕ್ಷೀಯ ಟಿ20 ಅಂತಾರಾಷ್ಟ್ರೀಯ ಸರಣಿ ಇದಾಗಿದೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಬಾಂಗ್ಲಾದೇಶ ತಂಡ
ಶಕೀಬ್ ಅಲ್ ಹಸನ್ (ನಾಯಕ), ಲಿಟನ್ ದಾಸ್, ನಜ್ಮುಲ್ ಹೊಸೈನ್, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ನಸುಮ್ ಅಹ್ಮದ್, ನೂರುಲ್ ಹಸನ್, ಶಮೀಮ್ ಹೊಸೈನ್, ರೋನಿ ತಾಲೂಕ್ದಾರ್, ತೌಹಿದ್ ಹೃದಯೋಯ್, ರೆಜೌರ್ ರೆಹಮಾನ್ ರಾಜಾ, ತನ್ವಿರ್ ಇಸ್ಲಾಂ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications