ENG vs IND: ಭಾರತ ವಿರುದ್ಧದ ಏಕದಿನ ಸರಣಿಯ ತಂಡದಲ್ಲಿ ಜೋ ರೂಟ್‌ಗೆ ಸ್ಥಾನ
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಐದು ಟಿ20 ಪಂದ್ಯಗಳ ಸರಣಿಯನ್ನು ಆಡುತ್ತಿವೆ. ಈ ಸರಣಿಯ ಎರಡನೇ ಪಂದ್ಯ ಶನಿವಾರ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸುವುದು ಉಭಯ ತಂಡಗಳಿಗೆ ಮಹತ್ವದಾಗಿದೆ. ಎರಡೂ ತಂಡಗಳ ನಡುವಣ ಮೊದಲ ಟಿ20 ಪಂದ್ಯದಲ್ಲಿ ಭಾರತ 190 ರನ್‌ಗಳ ಟಾರ್ಗೆಟ್ ಆತಿಥೇಯ ಇಂಗ್ಲೆಂಡ್ ತಂಡಕ್ಕೆ ನೀಡಿತ್ತು. ಆದರೆ ಇಂಗ್ಲೆಂಡ್ ಬ್ಯಾಟಿಂಗ್ ಮಾಡುವ ವೇಳೆ ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಪಂದ್ಯ ಫಲಿತಾಂಶ ಹೀನವಾಯಿತು. ಉಭಯ ತಂಡಗಳು ಟಿ20 ಸರಣಿಯ ಬಳಿಕ ಏಕದಿನ ಸರಣಿಯನ್ನು ಆಡಲಿವೆ. ಈ ಸರಣಿಯ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಭಾರತ ಈಗಾಗಲೇ ಈ ಸರಣಿಗೆ ತನ್ನ ತಂಡವನ್ನು ಪ್ರಕಟಿಸಿದೆ. ಶುಕ್ರವಾರ ಇಂಗ್ಲೆಂಡ್ ಸಹ ಈ ಸರಣಿಗೆ ತನ್ನ ತಂಡವನ್ನು ಪ್ರಕಟಿಸಿದೆ.
ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಇಂಗ್ಲೆಂಡ್ ತಂಡವು ಏಕದಿನ ಸರಣಿಗೆ ಹ್ಯಾರಿ ಬ್ರೂಕ್ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಈ ಸರಣಿ ಮಹತ್ವ ಪಡೆದಿದೆ. ಹೀಗಾಗಿ ಇಸಿಬಿ ತಂಡದ ಅನುಭವಿ ಬ್ಯಾಟರ್ ಜೋ ರೂಟ್ ಅವರಿಗೂ ಸಹ ಏಕದಿನ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಇಂಗ್ಲೆಂಡ್ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ಫಿಲ್ ಸಾಲ್ಟ್ ಅವರಿಗೆ ಇಸಿಬಿ ಏಕದಿನ ತಂಡದಿಂದ ಕೈ ಬಿಟ್ಟಿದೆ. ಅನುಭವಿ ಹಾಗೂ ಯುವ ಆಟಗಾರರನ್ನು ಹೊಂದಿರುವ 16 ಜನರ ತಂಡವನ್ನು ಶುಕ್ರವಾರ ಪ್ರಕಟಿಸಿದೆ.
ಮೂರು ಪಂದ್ಯಗಳ ಏಕದಿನ ಸರಣಿ
ಉಭಯ ತಂಡಗಳ ನಡುವಣ ಮೊದಲ ಏಕದಿನ ಪಂದ್ಯ ಜುಲೈ 14 ರಂದು ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯಕ್ಕೆ ಬರ್ಮಿಂಗ್‌ಹ್ಯಾಮ್ ಮೈದಾನ ಆತಿಥ್ಯ ನೀಡಲಿದೆ. ಇನ್ನು ಎರಡನೇ ಏಕದಿನ ಪಂದ್ಯ ಜುಲೈ 16 ರಂದು ಕಾರ್ಡಿಫ್‌ನಲ್ಲಿ, ಮೂರನೇ ಏಕದಿನ ಪಂದ್ಯ ಜುಲೈ 19 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ.

ಆರಂಭಿಕರಾಗಿ ಬೆನ್ ಡಕೆಟ್, ಟಾಮ್ ಬ್ಯಾಂಟನ್ ಮತ್ತು ವಿಲ್ ಜ್ಯಾಕ್ಸ್ ತಂಡದಲ್ಲಿದ್ದಾರೆ. ಫಿನಿಷರ್ ರೂಪದಲ್ಲಿ ಜೇಮ್ಸ್ ಕೋಲ್ಸ್ ಅವರನ್ನು ಇದೇ ಮೊದಲ ಬಾರಿಗೆ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಜೋಫ್ರಾ ಆರ್ಚರ್, ಜೋಶ್ ಟಂಗ್, ಗಸ್ ಅಟ್ಕಿನ್ಸನ್, ಸಾಕಿಬ್ ಮಹಮೂದ್ ಮತ್ತು ಸ್ಯಾಮ್ ಕರನ್ ವೇಗದ ಬೌಲರ್‌ಗಳ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸ್ಪಿನ್ ಬೌಲರ್‌ಗಳಾಗಿ ರೆಹಾನ್ ಅಹ್ಮದ್ ಮತ್ತು ಆದಿಲ್ ರಶೀದ್ ಸ್ಥಾನ ಪಡೆದಿದ್ದಾರೆ.
ಭಾರತ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಫ್ರಾ ಆರ್ಚರ್, ಜೋ ರೂಟ್, ಟಾಮ್ ಬ್ಯಾಂಟನ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಜೇಮ್ಸ್ ಕೋಲ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜಾಕ್ಸ್, ಸಾಕಿಬ್ ಮಹಮೂದ್, ರೆಹಾನ್ ಅಹ್ಮದ್, ಆದಿಲ್ ರಶೀದ್, ಜೋಶ್ ಟಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications