ಭಾರತ vs ಇಂಗ್ಲೆಂಡ್: ನಾಯಕನಾಗಿ ಮಹತ್ವದ ಮೈಲಿಗಲ್ಲು ಸಾಧಿಸಿದ ರೋಹಿತ್ ಶರ್ಮಾ

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಆರಂಭವಾಗಿದ್ದು ಮೊದಲ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸುದೀರ್ಘ ಕಾಲದ ಬಳಿಕ ತಂಡಕ್ಕೆ ಮರಳಿದ್ದು ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ಟಿ20 ತಂಡದ ನಾಯಕನಾಗಿ 1000 ರನ್ ಪೂರ್ಣಗೊಳಿಸಿದ್ದಾರೆ.
ಸೌಥಾಂಪ್ಟನ್‌ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಸ್ಪೋಟಕ ಆರಂಬ ಪಡೆ ಭಾರತ ದೊಡ್ಡ ಮೊತ್ತ ಕಲೆಹಾಕುವ ಸೂಚನೆ ನೀಡಿದೆ. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಸ್ಪೋಟಕ ಆರಂಭವನ್ನು ನೀಡಿದರು. ರೋಹಿತ್ ಶರ್ಮಾ 14 ಎಸೆತಗಳಲ್ಲಿ 24 ರನ್ ಗಳಿಸುವ ಮೂಲಕ ಉತ್ತಮ ಆರಂಭವನ್ನು ನೀಡಿದರು. ಆದರೆ ಮೊಯೀನ್ ಅಲಿ ಎಸೆತದಲ್ಲಿ ವಿಕೆಟ್ ಕೀಪರ್ ಜೋಸ್ ಬಟ್ಲರ್‌ಗೆ ಕ್ಯಾಚ್‌ನೀಡುವ ಮೂಲಕ ವಿಕೆಟ್ ಕಳೆದುಕೊಂಡಿದ್ದಾರೆ.

ಪದಾರ್ಪಣೆ ಮಾಡಿದ ಅರ್ಶ್‌ದೀಪ್
ಇನ್ನು ಈ ಪಂದ್ಯದ ಮೂಲಕ ಯುವ ವೇಗದ ಬೌಲರ್ ಅರ್ಶ್‌ದೀಪ್ ಸಿಂಗ್ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಐಪಿಎಲ್‌ನಲ್ಲಿ ಕಳೆದ ಎರಡು ಆವೃತ್ತಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಅರ್ಶದೀಪ್ ಸಿಂಗ್ ಭಾರತ ತಂಡಕ್ಕೆ ಸ್ಥಾನವನ್ನು ಪಡೆದುಕೊಂಡಿದ್ದರು. ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಪಡೆಯುವ ಮೂಲಕ ತಮ್ಮ ಕನಸು ನನಸು ಮಾಡಿಕೊಂಡಿದ್ದಾರೆ. ಇಂಗ್ಲೆಂಡ್‌ನಲ್ಲಿ ಎರಡು ಅಭ್ಯಾಸ ಪಂದ್ಯದಲ್ಲಿ ಆಡಿದ್ದ ಅರ್ಶ್‌ದೀಪ್ ಗಮನಾರ್ಹ ಪ್ರದರ್ಶನ ನೀಡಿದ್ದರು.

ಪ್ರಮುಖ ಆಟಗಾರರಿಗೆ ವಿಶ್ರಾಂತಿ
ಇನ್ನು ಈ ಪಂದ್ಯದಲ್ಲಿ ಭಾರತ ತಂಡದ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಭಾಗವಾಗಿದ್ದ ಆಟಗಾರರಾದ ವಿರಾಟ್ ಕೊಹ್ಲಿ, ರಿಷಭ್ ಪಂತ್, ಶ್ರೇಯಸ್ ಐಯ್ಯರ್ ಜಸ್ಪ್ರೀತ್ ಬೂಮ್ರಾ ಮೊದಲಾದ ಆಟಗಾರರು ವಿಶ್ರಾಂತಿ ಪಡೆದುಕೊಂಡಿದ್ದಾರೆ. ಎರಡು ಹಾಗೂ ಮೂರನೇ ಟಿ20 ಪಂದ್ಯಕ್ಕೆ ಹೆಸರಿಸಲಾದ ತಂಡದಲ್ಲಿ ಈ ಆಟಗಾರರು ಸ್ಥಾನ ಪಡೆದಿದ್ದಾರೆ.

ಭಾರತ ಆಡುವ ಬಳಗ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್
ಬೆಂಚ್: ಉಮ್ರಾನ್ ಮಲಿಕ್, ಸಂಜು ಸ್ಯಾಮ್ಸನ್, ರಾಹುಲ್ ತ್ರಿಪಾಠಿ, ಅವೇಶ್ ಖಾನ್, ವೆಂಕಟೇಶ್ ಅಯ್ಯರ್, ಋತುರಾಜ್ ಗಾಯಕ್ವಾಡ್, ರವಿ ಬಿಷ್ಣೋಯ್

ಇಂಗ್ಲೆಂಡ್ ಆಡುವ ಬಳಗ
ಜೇಸನ್ ರಾಯ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಡೇವಿಡ್ ಮಲನ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಸ್ಯಾಮ್ ಕುರಾನ್, ಕ್ರಿಸ್ ಜೋರ್ಡಾನ್, ಟೈಮಲ್ ಮಿಲ್ಸ್, ರೀಸ್ ಟೋಪ್ಲಿ, ಮ್ಯಾಥ್ಯೂ ಪಾರ್ಕಿನ್ಸನ್
ಬೆಂಚ್: ರಿಚರ್ಡ್ ಗ್ಲೀಸನ್, ಫಿಲಿಪ್ ಸಾಲ್ಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications