ಭಾರತ ಸದ್ಯ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಿದೆ. ಈ ವೇಳೆ ಭಾರತ, ಆತಿಥೇಯ ತಂಡದ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಟೆಸ್ಟ್ ಸರಣಿ 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸಾಲಿನಲ್ಲಿ ನಡೆಯಲಿದೆ. ಹೀಗಾಗಿ ಸರಣಿ ಕುತೂಹಲ ಮೂಡಿಸಿದೆ. ಟೀಮ್ ಇಂಡಿಯಾದಲ್ಲಿ ಯುವ ಆಟಗಾರರೇ ಇದ್ದಾರೆ. ಅನುಭವಿಗಳ ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡಲಿದೆ. ಇನ್ನು ಇಂಗ್ಲೆಂಡ್ ತಂಡಕ್ಕೆ ಆ ಒಬ್ಬ ಪ್ಲೇಯರ್ ಆಟ ಬಹುವಾಗಿ ಕಾಡುತ್ತಿದೆ. ತನ್ನ ಚಿಕ್ಕ ವಯಸ್ಸಿನಲ್ಲಿ ಆಂಗ್ಲ ಬೌಲರ್‌ಗಳನ್ನು ಭಾರತದಲ್ಲಿ ಸದೆ ಬಡೆದಿದ್ದ.
ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್, ಇಂಗ್ಲೆಂಡ್ ತಂಡದ ಚಿಂತೆಯನ್ನು ದ್ವಿಗುಣ ಮಾಡಿದ್ದಾರೆ. ಇವರನ್ನು ಕಟ್ಟಿ ಹಾಕುವುದು ಹೇಗೆ ಎಂಬ ಪ್ರಶ್ನೆಗೆ ಇಂಗ್ಲೆಂಡ್ ತಂಡ ಉತ್ತರ ಹುಡುಕಿಕೊಳ್ಳುವ ಪ್ರಯತ್ನ ನಡೆಸಿದೆ. ಇವರು ಒಮ್ಮೆ ಕ್ರೀಸ್‌ನಲ್ಲಿ ತಳವೂರಿ ನಿಂತಲ್ಲಿ ಬಿಗ್ ಇನಿಂಗ್ಸ್ ಫಿಕ್ಸ್. ಕಳೆದ ಬಾರಿ ಇಂಗ್ಲೆಂಡ್ ಭಾರತದ ಪ್ರವಾಸವನ್ನು ಬೆಳೆಸಿದ್ದಾಗ ಈ ಯುವ ಆಟಗಾರ, ಇಂಗ್ಲೀಷ್ ಬೌಲರ್‌ಗಳನ್ನು ಬಹುವಾಗಿ ಕಾಡಿದ್ದರು.

23 ವರ್ಷದ ಯುವ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ತಂಡದ ಚಿಂತೆಯನ್ನು ದ್ವಿಗುಣ ಮಾಡಿದ್ದಾರೆ. ಇವರು ಭಾರತದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಇತಿಹಾಸವನ್ನೇ ಬರೆದಿದ್ದರು. ಒಂದೇ ಟೆಸ್ಟ್ ಸರಣಿಯಲ್ಲಿ 700ಕ್ಕೂ ಹೆಚ್ಚು ರನ್ ಕಲೆ ಹಾಕಿದ ಭಾರತದ, ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದರು. ಇವರು ಆಸ್ಟ್ರೇಲಿಯಾ ಪ್ರವಾಸದಲ್ಲೂ ಚೇತೋಹಾರಿ ಪ್ರದರ್ಶನವನ್ನೇ ನೀಡಿದ್ದಾರೆ. ಹೀಗಾಗಿ ಇವರು ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಯಶಸ್ವಿ ಜೈಸ್ವಾಲ್ ಆಡಿದ 5 ಪಂದ್ಯಗಳ 10 ಇನಿಂಗ್ಸ್‌ಗಳಲ್ಲಿ 43ರ ಸರಾಸರಿಯಲ್ಲಿ 391 ರನ್ ಕಲೆ ಹಾಕಿ ಮಿಂಚಿದ್ದರು.
ಯಶಸ್ವಿ ಜೈಸ್ವಾಲ್ ಭಾರತದಲ್ಲಿ ಇಂಗ್ಲೆಂಡ್ ವಿರುದ್ಧ ಆರ್ಭಟಿಸಿದ್ದರು. ಇವರು ಆಡಿದ 5 ಪಂದ್ಯಗಳ 9 ಇನಿಂಗ್ಸ್‌ನಲ್ಲಿ 89ರ ಸರಾಸರಿಯಲ್ಲಿ 712 ರನ್ ಕಲೆ ಹಾಕಿದ್ದರು. ಈ ವೇಳೆ ಎರಡು ಶತಕ ಹಾಗೂ 3 ಅರ್ಧಶತಕಗಳನ್ನು ಸಹ ಬಾರಿಸಿದ್ದರು. ಅಲ್ಲದೆ 68 ಬೌಂಡರಿ ಹಾಗೂ 26 ಬಾನೆತ್ತರದ ಸಿಕ್ಸರ್ ಬಾರಿಸಿ ಇಂಗ್ಲೆಂಡ್ ಬೌಲರ್‌ಗಳನ್ನು ಕಾಡಿದ್ದರು. ಬೌನ್ಸಿ ಟ್ರ್ಯಾಕ್‌ಗಳಲ್ಲಿ ಇವರು ಹೇಗೆ ಆಡುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ಆದರೆ ಇವರ ಆಟ ಇಂಗ್ಲೆಂಡ್ ಬೌಲರ್‌ಗಳ ನಿದ್ದೆ ಗೆಡಿಸಿದೆ.

ಯಶಸ್ವಿ ಜೈಸ್ವಾಲ್ ಈಗಾಗಲೇ ಭರವಸೆ ಮೂಡಿಸಿರುವ ಬ್ಯಾಟರ್. ಇವರು ಈಗಾಗಲೇ ಭಾರತದ ಪರ 19 ಟೆಸ್ಟ್ ಪಂದ್ಯಗಳನ್ನು ಆಡಿದ್ದು 52ರ ಸರಾಸರಿಯಲ್ಲಿ 1798 ರನ್ ಕಲೆ ಹಾಕಿದ್ದಾರೆ. ಈ ವೇಳೆ 4 ಶತಕ ಹಾಗೂ 10 ಅರ್ಧಶತಕಗಳು ಸಹ ಸೇರಿವೆ. ಇವರ ಪ್ರದರ್ಶನ ಇಂಗ್ಲೆಂಡ್‌ನಲ್ಲಿ ಹೇಗಿರಲಿದೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಈ ಪ್ರಶ್ನೆಗೆ ಜೂನ್ 20 ರಿಂದ ಆರಂಭವಾಗುವ ಸರಣಿಯಲ್ಲಿ ಉತ್ತರ ಸಿಗಲಿದೆ.