
ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್ 500ರನ್‌ಗಳ ಗಡಿದಾಟಿದ್ದು, ನ್ಯೂಜಿಲೆಂಡ್‌ನ 553ರನ್‌ಗಳ ಬೃಹತ್ ಮೊತ್ತವನ್ನ ಹಿಂದಿಕ್ಕಲು ಸಮೀಪಿಸಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ನ 553ರನ್‌ಗೆ ಉತ್ತರವಾಗಿ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ವೇಗವಾಗಿ 500ರನ್ ದಾಟಿದ್ದು, ಜೋ ರೂಟ್ ದ್ವಿಶತಕದತ್ತ ಹೆಜ್ಜೆ ಹಾಕುತ್ತಿದ್ದ ವೇಳೆಯಲ್ಲಿ 176ರನ್‌ಗೆ ಟ್ರೆಂಟ್ ಬೋಲ್ಟ್ ಬೌಲಿಂಗ್‌ನಲ್ಲಿ ಸೌಥಿಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದ್ದಾರೆ. ಜೋ ರೂಟ್ ಇನ್ನಿಂಗ್ಸ್‌ನಲ್ಲಿ 26 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡಿತ್ತು.
ಇನ್ನು ಜೋ ರೂಟ್‌ಗೆ ಉತ್ತಮ ಸಾಥ್ ಕೊಟ್ಟಿದ್ದ ಬೆನ್ ಫೋಕ್ಸ್ ಅರ್ಧಶತಕ ದಾಖಲಿಸುವ ಮೂಲಕ ವೇಗವಾಗಿ ರನ್ ಕಲೆಹಾಕುತ್ತಿದ್ದಾರೆ.
ಮೂರನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 473ರನ್ ಕಲೆಹಾಕಿತ್ತು. ಜೋ ರೂಟ್ ಅಜೇಯ 163 ಮತ್ತು ಬೆನ್ ಫೋಕ್ಸ್ ಅಜೇಯ 24 ರನ್ ಕಲೆಹಾಕಿದ್ದರು. ಆದ್ರೆ ಇಂದು ಮೊದಲ ಸೆಷನ್‌ನಲ್ಲಿ ವೇಗವಾಗಿ ಬ್ಯಾಟ್ ಬೀಸುತ್ತಿರುವ ಫೋಕ್ಸ್ ಅರ್ಧಶತಕ ದಾಖಲಿಸಿದ್ದಾರೆ. ಪಂದ್ಯದ ಲೈವ್ ಸ್ಕೋರ್ ಈ ಕೆಳಗಿದೆ.
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಪ್ಲೇಯಿಂಗ್ 11
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್(ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ವಿಲ್ ಯಂಗ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್, ಕೈಲ್ ಜೇಮಿಸನ್, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್