Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Eng vs NZ 2nd Test: ಕುತೂಹಲ ಹಂತದಲ್ಲಿ ಅಂತಿಮ ದಿನದಾಟ Livescore

New zealand Test Final day

ಟ್ರೆಂಟ್‌ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯವು ಕುತೂಹಲಕ್ಕೆ ಕಾರಣವಾಗಿದ್ದು, ಅಂತಿಮ ದಿನದಾಟದಲ್ಲಿ ಫಲಿತಾಂಶ ಹೊರಬರುವ ಸಾಧ್ಯತೆ ಹೆಚ್ಚಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 14ರನ್‌ಗಳ ಅಲ್ಪ ಮುನ್ನಡೆ ಸಾಧಿಸಿರುವ ನ್ಯೂಜಿಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ ನಾಲ್ಕನೇ ದಿನದಾಟದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 224ರನ್ ಕಲೆಹಾಕಿದೆ.

ನಾಲ್ಕನೇ ದಿನದಾಟದಲ್ಲಿ 238ರನ್‌ಗಳ ಲೀಡ್ ಪಡೆದಿರುವ ಕಿವೀಸ್ ಅಂತಿಮ ದಿನದಾಟದಲ್ಲಿ 300ರ ಗಡಿದಾಟುವ ನಿರೀಕ್ಷೆ ಹೊಂದಿದೆ. ಕಿವೀಸ್ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ದಾಖಲಿಸಿದ್ದ ಡೆರಿಲ್ ಮಿಚೆಲ್ ಅಜೇಯ 32, ಮ್ಯಾಟ್ ಹೆನ್ರಿ 8 ರನ್ ಕಲೆಹಾಕಿ ಅಂತಿಮ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ನಾಲ್ಕನೇ ದಿನದಂದು ಇಂಗ್ಲೆಂಡ್ ಪರ ಜೋ ರೂಟ್ 176ರನ್‌ಗಳಿಗೆ ಔಟಾದ ಬಳಿಕ, ಅರ್ಧಶತಕ ದಾಖಲಿಸಿದ್ದ ಬೆನ್ ಫೋಕ್ಸ್‌ 56ರನ್‌ಗೆ ವಿಕೆಟ್ ಒಪ್ಪಿಸಿದ್ರು. ಇದಾದ ಬಳಿಕ ಕೆಳಕ್ರಮಾಂಕದಲ್ಲಿ ಸ್ಟುವರ್ಟ್ ಬ್ರಾಡ್ 9, ಮ್ಯಾಟಿ ಫಾಟ್ಸ್ 3, ಜೇಮ್ಸ್ ಆ್ಯಡರ್ಸನ್ 9 ರನ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು.

ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 539 ರನ್‌ಗಳಿಗೆ ಆಲೌಟ್ ಆಗಿದ್ದು, ಈ ಮೂಲಕ ನ್ಯೂಜಿಲೆಂಡ್ 14 ರನ್ ಮುನ್ನಡೆ ಸಾಧಿಸಿತು. ಅಂತಿಮ ದಿನದಾಟದ ಲೈವ್‌ಸ್ಕೋರ್ ಬೋರ್ಡ್ ಕೆಳಗಿದೆ

1
51777

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಪ್ಲೇಯಿಂಗ್ 11

ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್(ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್

ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ವಿಲ್ ಯಂಗ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್, ಕೈಲ್ ಜೇಮಿಸನ್, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್

Story first published: Tuesday, June 14, 2022, 16:03 [IST]
Other articles published on Jun 14, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+