ENG vs NZ: 3ನೇ ಟೆಸ್ಟ್‌ನ ಸಂಭಾವ್ಯ ಆಡುವ ಬಳಗ, ಪಿಚ್ ವರದಿ ಮತ್ತು ನೇರಪ್ರಸಾರದ ಮಾಹಿತಿ

ಇಂಗ್ಲೆಂಡ್ ಏಕಕಾಲಕ್ಕೆ 2 ವಿವಿಧ ತಂಡಗಳ ಜತೆ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಭಾಗವಹಿಸುತ್ತಿದೆ. ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತವರಿನಲ್ಲಿ ಸೆಣಸಾಟ ನಡೆಸುತ್ತಿದ್ದರೆ, ಜಾಸ್ ಬಟ್ಲರ್ ನಾಯಕತ್ವದ ಮತ್ತೊಂದು ಇಂಗ್ಲೆಂಡ್ ತಂಡ ನೆದರ್ಲೆಂಡ್ಸ್ ಪ್ರವಾಸ ಕೈಗೊಂಡು 3 ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದೆ.
ಹೀಗೆ ನೆದರ್ಲೆಂಡ್ಸ್ ಪ್ರವಾಸ ಕೈಗೊಂಡ ಜಾಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಎಲ್ಲಾ 3 ಪಂದ್ಯಗಳಲ್ಲಿಯೂ ಗೆದ್ದು ಆತಿಥೇಯ ನೆದರ್ಲೆಂಡ್ಸ್ ತಂಡಕ್ಕೆ ವೈಟ್ ವಾಶ್ ಬಳಿದಿದೆ. ಇತ್ತ ತವರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಮೊದಲೆರಡು ಪಂದ್ಯಗಳನ್ನು ಆಡಿ ಮುಗಿಸಿರುವ ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ 2 ಪಂದ್ಯಗಳಲ್ಲಿ ಗೆದ್ದು 2-0 ಅಂತರದಿಂದ ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಂಡು ಉಳಿದಿರುವ ಪಂದ್ಯವೊಂದನ್ನು ಗೆದ್ದು ವೈಟ್ ವಾಶ್ ಬಳಿಯುವ ಯೋಜನೆಯಲ್ಲಿದೆ.
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಈ ತೃತೀಯ ಟೆಸ್ಟ್ ಪಂದ್ಯ ಲೀಡ್ಸ್ ನ ಹೆಡಿಂಗ್ಲೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯ ನಾಳೆ ( ಜೂನ್ 23 ) ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭಗೊಳ್ಳಲಿದೆ. ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಎಂಬುದರ ಕುರಿತಾದ ಮಾಹಿತಿ ಮುಂದೆ ಇದೆ ಓದಿ.

ಪಂದ್ಯದ ಮಾಹಿತಿ, ಪಿಚ್ ವರದಿ, ಮುಖಾಮುಖಿ ಫಲಿತಾಂಶ ಮತ್ತು ನೇರ ಪ್ರಸಾರದ ಮಾಹಿತಿ
ಇತ್ತಂಡಗಳ ನಡುವಿನ ಈ ಪಂದ್ಯ ಲೀಡ್ಸ್ ನ ಹೆಡಿಂಗ್ಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ವೇಗಿಗಳಿಗೆ ಆರಂಭದಲ್ಲಿ ಸಹಕರಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಹೊಸ ಚೆಂಡು ಬಂದಾಗಲೆಲ್ಲಾ ಬ್ಯಾಟ್ಸ್‌ಮನ್‌ಗಳು ಜಾಗರೂಕತೆಯಿಂದ ಬ್ಯಾಟ್ ಬೀಸಬೇಕಿದ್ದು, ಪಂದ್ಯ ಮುಂದುವರಿದಂತೆ ಬ್ಯಾಟ್ಸ್‌ಮನ್‌ಗಳಿಗೆ ಪಿಚ್ ಸಹಕರಿಸಲಿದೆ. ಈ ಪಂದ್ಯವನ್ನು ಭಾರತದಲ್ಲಿ ಸೋನಿ ಸಿಕ್ಸ್ ಚಾನೆಲ್ ಅಥವಾ ಸೋನಿ ಲೀವ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.

ಆಡುವ ಬಳಗ
ಇಂಗ್ಲೆಂಡ್ ಆಡುವ ಬಳಗ:ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್),ಜೇಮೀ ಓವರ್‌ಟನ್, ಸ್ಟುವರ್ಟ್ ಬ್ರಾಡ್, ಮ್ಯಾಟ್ ಪಾಟ್ಸ್, ಜ್ಯಾಕ್ ಲೀಚ್.
ನ್ಯೂಜಿಲೆಂಡ್ ಸಂಭಾವ್ಯ ಆಡುವ ಬಳಗ: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ನೀಲ್ ವ್ಯಾಗ್ನರ್, ಟ್ರೆಂಟ್ ಬೌಲ್ಟ್

ಮುಖಾಮುಖಿ ಪಂದ್ಯಗಳ ಫಲಿತಾಂಶ
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇದುವರೆಗೂ ಒಟ್ಟು 109 ಟೆಸ್ಟ್ ಪಂದ್ಯಗಳು ನಡೆದಿದ್ದು, ನ್ಯೂಜಿಲೆಂಡ್ 12 ಪಂದ್ಯಗಳಲ್ಲಿ ಗೆದ್ದಿದ್ದರೆ, ಇಂಗ್ಲೆಂಡ್ 50 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದ 47 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. ಈ ಮೂಲಕ ಇತ್ತಂಡಗಳ ನಡುವಿನ ಟೆಸ್ಟ್ ಮುಖಾಮುಖಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಸ್ಪಷ್ಟ ಮೇಲುಗೈ ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications