ENG vs NZ: ಅಂತಿಮ ಟೆಸ್ಟ್ ಗೆದ್ದು ವೈಟ್‌ವಾಷ್ ಮುಖಭಂಗದಿಂದ ಪಾರಾಗುತ್ತಾ ನ್ಯೂಜಿಲೆಂಡ್? ಲೈವ್ ಸ್ಕೋರ್ ಇಲ್ಲಿದೆ

ನ್ಯೂಜಿಲೆಂಡ್ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದೆ. ಇತ್ತಂಡಗಳ ನಡುವಿನ ಈ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿದ್ದು, ಎರಡೂ ಪಂದ್ಯಗಳಲ್ಲಿಯೂ ಸಹ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಗೆದ್ದು, 2-0 ಅಂತರದಿಂದ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ಈಗಾಗಲೇ ಸರಣಿಯನ್ನು ಕೈವಶಪಡಿಸಿಕೊಂಡಿದೆ. ಇತ್ತ ಎರಡೂ ಪಂದ್ಯಗಳನ್ನೂ ಸೋತು ಸರಣಿ ಸೋಲಿನ ಹಿನ್ನಡೆ ಅನುಭವಿಸಿರುವ ಪ್ರವಾಸಿ ನ್ಯೂಜಿಲೆಂಡ್ ತಂಡ ಮೂರನೇ ಪಂದ್ಯದಲ್ಲಾದರೂ ಗೆದ್ದು ವೈಟ್‌ವಾಷ್ ಮುಖಭಂಗದಿಂದ ಪಾರಾಗಬೇಕಿದೆ.
ಹೌದು, ಒಂದೆಡೆ ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಗೆದ್ದು ಸರಣಿಯಲ್ಲಿ ವೈಟ್‌ವಾಷ್ ಬಳಿಯುವ ಗುರಿಯನ್ನು ಹೊಂದಿದ್ದರೆ, ನ್ಯೂಜಿಲೆಂಡ್ ಈ ಪಂದ್ಯವನ್ನಾದರೂ ಗೆದ್ದು ಮುಖಭಂಗದಿಂದ ಹಾಗೂ ಟೀಕೆಗಳಿಂದ ಪಾರಾಗುವತ್ತ ಚಿತ್ತ ನೆಟ್ಟಿದೆ. ಇನ್ನು ಇತ್ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯ ಇಂದು ( ಜೂನ್ 23 ) ಲೀಡ್ಸ್‌ನ ಹೆಡಿಂಗ್ಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಮಾಡಿದ್ದಾರೆ.
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಲೈವ್ ಸ್ಕೋರ್ ಮಾಹಿತಿ ಇಲ್ಲಿದೆ.

ನ್ಯೂಜಿಲೆಂಡ್ ಆಡುವ ಬಳಗ
ಟಾಮ್ ಲ್ಯಾಥಮ್, ವಿಲ್ ಯಂಗ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್ ಮತ್ತು ನೀಲ್ ವ್ಯಾಗ್ನರ್

ಇಂಗ್ಲೆಂಡ್ ಆಡುವ ಬಳಗ
ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್(ಸಿ), ಬೆನ್ ಫೋಕ್ಸ್(ಡಬ್ಲ್ಯೂ), ಜೇಮೀ ಓವರ್‌ಟನ್, ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್ ಮತ್ತು ಜ್ಯಾಕ್ ಲೀಚ್

ನೇರಪ್ರಸಾರದ ಮಾಹಿತಿ
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದ ನೇರಪ್ರಸಾರವನ್ನು ಭಾರತದಲ್ಲಿ ಸೋನಿ ನೆಟ್‌ವರ್ಕ್ ಚಾನೆಲ್‌ನಲ್ಲಿ ಹಾಗೂ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications