ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲಿಗಲ್ಲು ದಾಟಿದ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್

ಟೆಸ್ಟ್ ಕ್ರಿಕೆಟ್‌ನ ದಿಗ್ಗಜ ಬೌಲರ್ ಇಂಗ್ಲೆಂಡ್ ತಂಡದ ಅನುಭವಿ ಆಟಗಾರ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ದಾಟಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಸೋಮವಾರ ಜೇಮ್ಸ್ ಆಂಡರ್ಸನ್ 650 ವಿಕೆಟ್ ಗಳಿಸಿದ ಆಟಗಾರರ ಪಟ್ಟಿಗೆ ಸೇರಿಕೊಂಡಿದ್ದಾರೆ. ಈ ಸಾಧನೆ ಮೂಆಡಿದ ವಿಶ್ವದ ಕೇವಲ ಮೂರನೇ ಬೌಲರ್ ಎನಿಸಿಕೊಂಡಿದ್ದು ಮೊದಲ ವೇಗದ ಬೌಲರ್ ಆಗಿದ್ದಾರೆ. ಶ್ರೀಲಂಕಾದ ದಿಗ್ಗಜ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಹಾಗೂ ಆಸ್ಟ್ರೇಲಿಯಾದ ಆಟಗಾರ ಶೇನ್ ವಾರ್ನ್ ಮಾತ್ರವೇ ಈ ಸಾಧನೆ ಮಾಡಿದ ಇತರ ಇಬ್ಬರು ಬೌಲರ್‌ಗಳಾಗಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯ ನಾಟಿಂಗ್‌ಹ್ಯಾಮ್‌ನ ಟ್ರೆಂಟ್‌ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಈ ಪಂದ್ಯದಲ್ಲಿ ಆಂಡರ್ಸನ್ ಈ ಸಾಧನೆ ಮಾಡಿದ್ದಾರೆ. ನಾಲ್ಕನೇ ದಿನ ಎರಡನೇ ಇನ್ನಿಂಗ್ಸ್ ಆರಂಭಿಸಿ ನ್ಯೂಜಿಲೆಂಡ್ ತಂಡದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದ ಟಾಮ್ ಲಾಥಮ್ ಅವರನ್ನು ಬೌಲ್ಡ್ ಮಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ ಆಂಡರ್ಸನ್.

ವಾರ್ನ್ ದಾಖಲೆಯ ಸನಿಹಕ್ಕೆ ಆಂಡರ್ಸನ್
ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಜೇಮ್ಸ ಆಂಡರ್ಸನ್ ಶೇನ್ ವಾರ್ನ್ ದಾಖಲೆಗೆ ಹತ್ತಿರವಾಗುತ್ತಿದ್ದಾರೆ. ಶೇನ್ ವಾರ್ನ್ 708 ವಿಕೆಟ್‌ಗಳನ್ನು ಪಡೆದು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಈ ಮೈಲಿಗಲ್ಲು ದಾಟಲು ಆಂಡರ್ಸನ್ 58 ವಿಕೆಟ್‌ಗಳಷ್ಟು ಹಿಂದಿದ್ದಾರೆ.

ಅಲ್ಪ ಮುನ್ನಡೆ ಸಾಧಿಸಿದ ನ್ಯೂಜಿಲೆಂಡ್
ಇನ್ನು ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡದ ಪರವಾಗಿ ಜೋ ರೂಟ್ ಹಾಗೂ ಒಲ್ಲೀ ಪೋಲ್ ಅವರ ಭರ್ಜರಿ ಶತಕಗಳ ಹೊರತಾಗಿಯೂ ಪ್ರವಾಸಿ ತಂಡ ಅಲ್ಪ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 553 ರನ್‌ಗಳನ್ನು ಗಳಿಸಿತು. ಡ್ಯಾರೆಲ್ ಮಿಚೆಲ್ ಅವರ ಭರ್ಜರಿ 190 ರನ್‌ಗಳು ಹಾಗೂ ಟಾಮ್ ಬ್ಲಂಡರ್ ಅವರ 106 ರನ್‌ಗಳ ಕೊಡುಗೆಯಿಂದಾಗಿ ಈ ಬೃಹತ್ ಮೊತ್ತ ಪೇರಿಸಿತು ನ್ಯೂಜಿಲೆಂಡ್. ಇನ್ನು ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಮಾಡಿದ ಆತಿಥೆಯ ಇಂಗ್ಲೆಂಡ್ ತಂಡ 539 ರನ್‌ಗಳಿಸಿ 14 ರನ್‌ಗಳ ಹಿನ್ನಡೆ ಅನುಭವಿಸಿತು. ಇಂಗ್ಲೆಂಡ್ ಪರವಾಗಿ ಜೋ ರೂಟ್ 176 ರನ್‌ಗಳಿಸಿದರೆ ಪೋಪ್ 145 ರನ್ ಸಿಡಿಸಿದರು.

ಅಪಾಯಕಾರಿಯಾಗುವ ಸೂಚನೆ ನೀಡಿದ ಆಂಡರ್ಸನ್
ಇನ್ನು ಈ ಪಂದ್ಯದಲ್ಲಿ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಮೊದಲ ಇನ್ನಿಂಗ್ಸ್‌ನಲ್ಲಿಯೂ ಮಿಂಚಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಪ್ರವಾಸಿ ತಂಡದ 3 ವಿಕೆಟ್ ಪಡೆದುಕೊಂಡು ಮಿಂಚಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿಯೂ ಕಿವೀಸ್ ಪಡೆಗೆ ಅಪಾಯಕಾರಿಯಾಗುವ ಸೂಚನೆ ನೀಡಿದ್ದಾರೆ.

ಆಡುವ ಬಳಗ ಹೀಗಿದೆ
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್(ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ವಿಲ್ ಯಂಗ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್, ಕೈಲ್ ಜೇಮಿಸನ್, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications